
ಸೌಥಾಂಪ್ಟನ್(ಆ.26): ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್‌ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಕಬಳಿಸಿದ ಮೊದಲ ವೇಗದ ಬೌಲರ್ ಎನ್ನುವ ದಾಖಲೆ ಬರೆದಿದ್ದಾರೆ. ಮಂಗಳವಾರ ಇಲ್ಲಿ ಡ್ರಾನಲ್ಲಿ ಮುಕ್ತಾಯಗೊಂಡ ಪಾಕಿಸ್ತಾನದ ವಿರುದ್ಧದ 3ನೇ ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ ಅಜರ್ ಅಲಿ ವಿಕೆಟ್ ಕಬಳಿಸಿದ ಆ್ಯಂಡರ್‌ಸನ್, ತಾವಾಡಿದ 156ನೇ ಟೆಸ್ಟ್‌ನಲ್ಲಿ ಈ ಮೈಲಿಗಲ್ಲು ತಲುಪಿದರು.
ಟೆಸ್ಟ್‌ನಲ್ಲಿ ಸ್ಪಿನ್ನರ್‌ಗಳಾದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800, ಆಸ್ಪ್ರೇಲಿಯಾದ ಶೇನ್ ವಾರ್ನ್ 708, ಭಾರತದ ಅನಿಲ್ ಕುಂಬ್ಳೆ 619 ವಿಕೆಟ್‌ಗಳೊಂದಿಗೆ ಗರಿಷ್ಠ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ 3 ಸ್ಥಾನದಲ್ಲಿದ್ದಾರೆ.
ಫ್ರೀ ಹಿಟ್ ರೀತಿ ಫ್ರೀ ಬಾಲ್ ಐಡಿಯಾ ಕೊಟ್ಟ ಅಶ್ವಿನ್
2003ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಆ್ಯಂಡರ್‌ಸನ್, 33745 ಎಸೆತಗಳನ್ನು ಬೌಲ್ ಮಾಡಿದ್ದಾರೆ. 42 ರನ್‌ಗೆ 7 ವಿಕೆಟ್ ಕಬಳಿಸಿದ್ದು, ಇನ್ನಿಂಗ್ಸ್ವೊಂದರಲ್ಲಿ ಅವರ ಶ್ರೇಷ್ಠ ಬೌಲಿಂಗ್ ಪ್ರದರ್ಶನ. ತಮ್ಮ ವೃತ್ತಿಬದುಕಿನಲ್ಲಿ 29 ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.
ಆ್ಯಂಡರ್‌ಸನ್ 600 ವಿಕೆಟ್ ಸಾಧನೆಯನ್ನು ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರು ಕೊಂಡಾಡಿದ್ದಾರೆ. 38ನೇ ವಯಸ್ಸಿನಲ್ಲೂ ಅವರ ಫಿಟ್ನೆಸ್ ಹಾಗೂ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.