
ಸೌಥಾಂಪ್ಟನ್(ಜೂ.30): ಮುಂದಿನ ವಾರದಿಂದ ವೆಸ್ಟ್‌ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆರಂಭಗೊಳ್ಳಲಿದ್ದು, ಖಾಲಿ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿವೆ. ಪ್ರೇಕ್ಷಕರಿಲ್ಲದೆ ಆಡಲು ಮಾನಸಿಕವಾಗಿ ಸಿದ್ಧಗೊಳ್ಳಲು ಇಂಗ್ಲೆಂಡ್‌ನ ತಾರಾ ವೇಗಿ ಸ್ಟುವರ್ಟ್ ಬ್ರಾಡ್, ಕ್ರೀಡಾ ಮನೋವೈದ್ಯರ ಮೊರೆ ಹೋಗಿದ್ದಾರೆ.
‘ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಪ್ರೇಕ್ಷಕರ ಪಾತ್ರ ಮಹತ್ವದಿರಲಿದೆ. ಅವರು ನೀಡುವ ಪ್ರೋತ್ಸಾಹ ಆಟಗಾರರಲ್ಲಿ ಹುಮ್ಮಸ್ಸು ಹೆಚ್ಚಿಸಲಿದೆ. ಕೊರೋನಾ ಸಂಕಷ್ಟದಿಂದಾಗಿ ಖಾಲಿ ಕ್ರೀಡಾಂಗಣಗಳಲ್ಲಿ ಆಡಬೇಕಾದ ಪರಿಸ್ಥಿತಿ ಇದ್ದು, ಅದಕ್ಕೆ ಹೊಂದಿಕೊಳ್ಳಲು ಮನೋವೈದ್ಯರ ಸಲಹೆ ಪಡೆದಿದ್ದೇನೆ’ ಎಂದು ಬ್ರಾಡ್ ಹೇಳಿಕೊಂಡಿದ್ದಾರೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಇದೇ ಮೊದಲ ಬಾರಿಗೆ ಬೆನ್ ಸ್ಟೋಕ್ಸ್ ಮುನ್ನಡೆಸಲಿದ್ದಾರೆ. ಸ್ಟೋಕ್ಸ್‌ಗೆ ಉತ್ತಮ ಕ್ರಿಕೆಟ್ ಜ್ಞಾನವಿದ್ದು, ಜೋ ರೂಟ್ ಅವರಂತೆಯೇ ಇಂಗ್ಲೆಂಡ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುವ ವಿಶ್ವಾಸವಿದೆ ಎಂದು ಬ್ರಾಡ್ ಹೇಳಿದ್ದಾರೆ. ಜೋ ರೂಟ್ ಪತ್ನಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಪತ್ನಿಯ ಜತೆಯಿರಲು ರೂಟ್ ಮೊದಲ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.
ನನಗೆ ಜನವರಿಯಲ್ಲೇ ಕೊರೋನಾ ಬಂದಿತ್ತು ಎಂದ ಮಾಜಿ ಸ್ಟಾರ್ ಕ್ರಿಕೆಟಿಗ..!
ಮಾರ್ಚ್ ಬಳಿಕ ಇದೇ ಮೊದಲ ಬಾರಿಗೆ ಕ್ರಿಕೆಟ್ ಚಟುವಟಿಕೆಗಳು ಗರಿಗೆದರಿವೆ. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿ ಜುಲೈ 08ರಿಂದ ಆರಂಭವಾಗಲಿದೆ. ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಬಳಿಕ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾಗಿದ್ದು, ಕ್ರೀಡಾಭಿಮಾನಿಗಳ ಚಿತ್ತ ಈ ಸರಣಿಯತ್ತ ನೆಟ್ಟಿದೆ. ಖಾಲಿ ಮೈದಾನದಲ್ಲಿ ಸರಣಿ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.