
ವೈಜಾಗ್(ಫೆ.01): ಹೈದರಾಬಾದ್‌ನಲ್ಲಿ ನಡೆದ ಮೊದಲ ಟಸ್ಟ್ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಫೆಬ್ರವರಿ 02ರಿಂದ ವೈಜಾಗ್‌ನಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ಗೆ ದೊಡ್ಡ ಹೊಡೆತ ಬಿದ್ದಿದ್ದು, ತಂಡದ ಪ್ರಮುಖ ಸ್ಪಿನ್ ಅಸ್ತ್ರ ಜಾಕ್ ಲೀಚ್ ಗಾಯದ ಸಮಸ್ಯೆಯಿಂದಾಗಿ ಭಾರತ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಹೌದು, ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಎದುರು ಇಂಗ್ಲೆಂಡ್ 28 ರನ್ ಅಂತರದ ವಿರೋಚಿತ ಗೆಲುವು ಸಾಧಿಸಿತ್ತು. ಮೊದಲ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಲೀಚ್ 10 ಓವರ್ ಬೌಲಿಂಗ್ ಮಾಡಿದ್ದರು. ಇದೀಗ 32 ವರ್ಷದ ಜಾಕ್ ಲೀಚ್ ಅನಿವಾರ್ಯವಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಬೆನ್ ಸ್ಟೋಕ್ಸ್ ಖಚಿತಪಡಿಸಿದ್ದಾರೆ.
ವೈಜಾಗ್‌ನಲ್ಲಿ ಭಾರತ vs ಇಂಗ್ಲೆಂಡ್ ಎರಡನೇ ಟೆಸ್ಟ್‌ಗೆ ಕ್ಷಣಗಣನೆ..!
ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕಾದಾಟಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ಟೆಸ್ಟ್ ಪಂದ್ಯದಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಜಾಕ್ ಲೀಚ್ ಭಾರತ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ ಎಂದು ಬೆನ್ ಸ್ಟೋಕ್ಸ್ ತಿಳಿಸಿದ್ದಾರೆ.
ಇಂಗ್ಲೆಂಡ್ ತಂಡವು ಇನ್ನೂ ಎರಡನೇ ಟೆಸ್ಟ್ ಪಂದ್ಯಕ್ಕೆ ತನ್ನ ಅಂತಿಮ 11ರ ಬಳಗವನ್ನು ಅಧಿಕೃತಗೊಳಿಸಿಲ್ಲ. ಬಹುತೇಕ ವೈಜಾಗ್ ಪಿಚ್ ಸ್ಪಿನ್ ಸ್ನೇಹಿ ಪಿಚ್ ಆಗಿರುವುದರಿಂದ ಜಾಕ್ ಲೀಚ್ ಬದಲಿಗೆ ಶೋಯೆಬ್ ಬಷೀರ್ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಆಡಿರುವ ಎರಡೂ ಪಂದ್ಯ ಗೆದ್ದಿರುವ ಟೀಂ ಇಂಡಿಯಾ
ಭಾರತ ವಿಶಾಖಪಟ್ಟಣಂ ಕ್ರೀಡಾಂಗಣದಲ್ಲಿ 2 ಟೆಸ್ಟ್ ಪಂದ್ಯಗಳನ್ನಾಡಿದ್ದು, ಎರಡರಲ್ಲೂ ಗೆಲುವು ಸಾಧಿಸಿದೆ. 2016ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 246 ರನ್‌ಗಳ ಬೃಹತ್ ಜಯ ದಾಖಲಿಸಿತ್ತು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ 2019ರಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ 203 ರನ್‌ಗಳಿಂದ ಗೆದ್ದು ಬೀಗಿತ್ತು. ಹೀಗಾಗಿ ಇಂಗ್ಲೆಂಡ್ ಎದುರು ಹ್ಯಾಟ್ರಿಕ್ ಜಯ ಸಾಧಿಸಲು ಟೀಂ ಇಂಡಿಯಾ ಎದುರು ನೋಡುತ್ತಿದೆ.
ವಿರಾಟ್ ಕೊಹ್ಲಿ ಮೊದಲೆರಡು ಟೆಸ್ಟ್‌ನಿಂದ ಹೊರಗುಳಿದಿದ್ದೇಕೆ..? ಕೊನೆಗೂ ಬಯಲಾಯ್ತು ಸತ್ಯ..!
ಈಗಾಗಲೇ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಕೆ ಎಲ್ ರಾಹುಲ್ ಅನುಸಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ಇದರ ಜತೆಗೆ ವಿರಾಟ್ ಕೊಹ್ಲಿ ಕೂಡಾ ಲಭ್ಯವಿಲ್ಲ. ಈ ಮೂವರು ತಾರಾ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ತಂಡವು ಬಲಾಢ್ಯ ಇಂಗ್ಲೆಂಡ್‌ಗೆ ಯಾವ ರೀತಿ ತಿರುಗೇಟು ನೀಡಲಿದೆ ಎನ್ನುವ ಕುತೂಹಲ ಜೋರಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.