ಟಿ20 ವಿಶ್ವಕಪ್ ಟೂರ್ನಿಯಿಂದ ಬೆನ್ ಸ್ಟೋಕ್ಸ್ ಹಿಂದೆ ಸರಿಯಲು ಕಾರಣ ತ್ಯಾಗ ಎಂದರೆ ನಿಮಗೆಲ್ಲರಿಗೂ ಅಚ್ಚರಿಯಾಗಬಹುದು. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಜೂನ್ ತಿಂಗಳಿನಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿದೆ. ಈ ಚುಟುಕು ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಎರಡು ತಿಂಗಳು ಬಾಕಿ ಇರುವಾಗಲೇ ಬೆನ್ ಸ್ಟೋಕ್ಸ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಲಂಡನ್(ಏ.02): ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. 2022ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡವು ಚಾಂಪಿಯನ್ ಆಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬೆನ್ ಸ್ಟೋಕ್ಸ್ ಇದೀಗ ಅಚ್ಚರಿಯ ನಿರ್ಧಾರ ಕೈಗೊಂಡಿದ್ದಾರೆ.
ಹೌದು, ಟಿ20 ವಿಶ್ವಕಪ್ ಟೂರ್ನಿಯಿಂದ ಬೆನ್ ಸ್ಟೋಕ್ಸ್ ಹಿಂದೆ ಸರಿಯಲು ಕಾರಣ ತ್ಯಾಗ ಎಂದರೆ ನಿಮಗೆಲ್ಲರಿಗೂ ಅಚ್ಚರಿಯಾಗಬಹುದು. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಜೂನ್ ತಿಂಗಳಿನಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿದೆ. ಈ ಚುಟುಕು ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಎರಡು ತಿಂಗಳು ಬಾಕಿ ಇರುವಾಗಲೇ ಬೆನ್ ಸ್ಟೋಕ್ಸ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಕಡೆ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ತಾವು ಟಿ20 ಕ್ರಿಕೆಟ್ ತ್ಯಾಗ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
IPL ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಕೆಲ ಫ್ರಾಂಚೈಸಿ ಡಿಮ್ಯಾಂಡ್..!
ನಾನು ನನ್ನ ಬೌಲಿಂಗ್ ಬಗ್ಗೆ ಗಮನ ಹರಿಸಲು ಪೂರ್ಣ ಪ್ರಮಾಣದ ಅಭ್ಯಾಸ ನಡೆಸಲು ತೀರ್ಮಾನ ಮಾಡಿದ್ದೇನೆ. ಹೀಗಾಗಿ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಲು ಬಯಸಿದ್ದೇನೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಬೆನ್ ಸ್ಟೋಕ್ಸ್ ತಿಳಿಸಿದ್ದಾರೆ.
"ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯುವ ತೀರ್ಮಾನ ಖಂಡಿತವಾಗಿಯೂ ಒಂದು ರೀತಿ ತ್ಯಾಗವೇ ಸರಿ. ಇದರಿಂದ ನಾನು ಪೂರ್ಣಪ್ರಮಾಣದ ಆಲ್ರೌಂಡರ್ ಆಗುವ ನಿಟ್ಟಿನಲ್ಲಿ ಪ್ರಯತ್ನ ಸಾಗಲಿದೆ ಎಂದು ಬೆನ್ ಸ್ಟೋಕ್ಸ್ ತಿಳಿಸಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಲಖನೌ ಎದುರಿನ ಪಂದ್ಯಕ್ಕೆ RCB ಸಂಭಾವ್ಯ ತಂಡ ಪ್ರಕಟ..! ಎರಡು ಮಹತ್ವದ ಬದಲಾವಣೆ?
ಇನ್ನು ಇತ್ತೀಚೆಗಷ್ಟೇ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡವು 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಭಾರತ ಪ್ರವಾಸ ಕೈಗೊಂಡಿತ್ತು. ಈ ಸರಣಿಯಲ್ಲಿ ಇಂಗ್ಲೆಂಡ್ ತಂಡವು 1-4 ಅಂತರದಲ್ಲಿ ಹೀನಾಯ ಸೋಲು ಅನುಭವಿಸಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಇನ್ನು ಬೆನ್ ಸ್ಟೋಕ್ಸ್ 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ವಿನ್ನಿಂಗ್ ಶಾಟ್ ಬಾರಿಸಿ ಮಿಂಚಿದ್ದರು. ಇದೀಗ ಸ್ಟೋಕ್ಸ್, ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡಕ್ಕೆ ಮುಂಬರುವ ಟಿ20 ವಿಶ್ವಕಪ್‌ಗೆ ಶುಭ ಹಾರೈಸಿದ್ದಾರೆ.