ಇಂಗ್ಲೆಂಡ್‌-ಕಿವೀಸ್‌ 2ನೇ ಟೆಸ್ಟ್‌ ಸ್ಟೇಡಿಯಂನಲ್ಲಿ ವೀಕ್ಷಿಸಲು 18,000 ಪ್ರೇಕ್ಷಕರಿಗೆ ಅವಕಾಶ!

By Suvarna NewsFirst Published May 27, 2021, 12:42 PM IST
Highlights

* ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ

* ಮೊದಲ ಟೆಸ್ಟ್ ಪಂದ್ಯಕ್ಕೆ 25% ಮಂದಿಗೆ ಅವಕಾಶ

* ಎರಡನೇ ಟೆಸ್ಟ್‌ ಪಂದ್ಯದಲ್ಲಿ 18, 000 ಪ್ರೇಕ್ಷಕರಿಗೆ ಅವಕಾಶ ನೀಡಲು ಇಂಗ್ಲೆಂಡ್ ಸರ್ಕಾರ ತೀರ್ಮಾನ

ಬರ್ಮಿಂಗ್‌ಹ್ಯಾಮ್(ಮೇ.27)‌: ಇಂಗ್ಲೆಂಡ್‌ನಲ್ಲಿ ಕೋವಿಡ್‌ ನಿಯಮಗಳನ್ನು ಸಡಿಲಗೊಳಿಸಿದ್ದು, ಜೂನ್ 10ರಿಂದ ಇಲ್ಲಿನ ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್‌ ನಡುವಿನ 2ನೇ ಟೆಸ್ಟ್‌ಗೆ ನಿತ್ಯ 18,000 ಪ್ರೇಕ್ಷಕರನ್ನು ಕ್ರೀಡಾಂಗಣಕ್ಕೆ ಬಿಡಲು ಸರ್ಕಾರ ಸಮ್ಮತಿಸಿದೆ. 

ಇಂಗ್ಲೆಂಡ್ ಸರ್ಕಾರದ ಪೈಲೆಟ್‌ ಯೋಜನೆಗಳಲ್ಲಿ ಇದೂ ಒಂದಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಒಂದೆಡೆ ಸೇರಿದಾಗ ಸೋಂಕು ಹಬ್ಬುವಿಕೆಯ ಪ್ರಮಾಣ ಎಷ್ಟಿದೆ ಎನ್ನುವುದನ್ನು ಪರೀಕ್ಷಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಕ್ರೀಡಾಂಗಣಕ್ಕೆ ಬರುವ ಪ್ರೇಕ್ಷಕರು 24 ಗಂಟೆಗಳೊಳಗಿನ ಕೋವಿಡ್‌ ನೆಗೆಟಿವ್‌ ವರದಿ ತರಬೇಕು ಹಾಗೂ 16 ವರ್ಷ ಮೇಲ್ಪಟ್ಟವರಿಗೆ ಮಾತ್ರ ಪ್ರವೇಶ ಎಂಬ ಷರತ್ತು ವಿಧಿಸಲಾಗಿದೆ.

ಟೆಸ್ಟ್‌ ವಿಶ್ವಕಪ್‌ ಫೈನಲ್‌: 4,000 ಪ್ರೇಕ್ಷಕರಿಗೆ ಸ್ಟೇಡಿಯಂ ಪ್ರವೇಶಿಸಲು ಅವಕಾಶ

ಇನ್ನು ಜೂನ್‌ 02ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ 25%  ವೀಕ್ಷಕರಿಗೆ ಮೈದಾನ ಪ್ರವೇಶಿಸಲು ಅವಕಾಶ ಮಾಡಿಕೊಡಲು ಯುಕೆ ಸರ್ಕಾರ ತೀರ್ಮಾನಿಸಿದೆ. ಇನ್ನುಳಿದಂತೆ ಭಾರತ ಹಾಗೂ ನ್ಯೂಜಿಲೆಂಡ್‌ ನಡುವೆ ಜೂನ್‌ 18ರಿಂದ ಸೌಥಾಂಪ್ಟನ್‌ನಲ್ಲಿ ನಡೆಯಲಿರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ವೀಕ್ಷಿಸಲು 4,000 ಪ್ರೇಕ್ಷಕರಿಗೆ ಮೈದಾನ ಪ್ರವೇಶಿಸಲು ಅನುಕೂಲ ಮಾಡಿಕೊಡಬೇಕು ಎನ್ನುವ ಚರ್ಚೆಗಳು ಜೋರಾಗಿ ಕೇಳಿ ಬರುತ್ತಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

click me!