* ಇಂಗ್ಲೆಂಡ್-ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ
* ಲಾರ್ಡ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ
* ನೀರಸ ಡ್ರಾನಲ್ಲಿ ಅಂತ್ಯ ಕಂಡ ಮೊದಲ ಟೆಸ್ಟ್
ಲಾರ್ಡ್ಸ್(ಜೂ.07): ಆತಿಥೇಯ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವು ನೀರಸ ಡ್ರಾನಲ್ಲಿ ಅಂತ್ಯವಾಗಿದೆ. ಹೀಗಾಗಿ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯವು ಇದೀಗ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
ಒಟ್ಟು 273 ರನ್‌ಗಳ ಗುರಿ ಬೆನ್ನತ್ತಿದ ಆತಿಥೇಯ ಇಂಗ್ಲೆಂಡ್ ಕ್ರಿಕೆಟ್ ತಂಡವು ಐದನೇ ದಿನದಾಟದಂತ್ಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 170 ಗಳಿಸಲಷ್ಟೇ ಶಕ್ತವಾಯಿತು. ಮಳೆಯಿಂದಾಗಿ ಸಂಪೂರ್ಣ ಒಂದು ದಿನದಾಟ ರದ್ದಾಗಿದ್ದರಿಂದ ಪಂದ್ಯದಲ್ಲಿ ಸ್ಪಷ್ಟ ಫಲಿತಾಂಶ ಹೊರಬೀಳಲು ಸಾಧ್ಯವಾಗಲಿಲ್ಲ.
ಲಾರ್ಡ್ಸ್‌ನಲ್ಲಿ ಗಂಗೂಲಿ ದಾಖಲೆ ಮುರಿದ ಡೆವೊನ್ ಕಾನ್‌ವೇ..!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ಆರಂಭಿಕ ಬ್ಯಾಟ್ಸ್‌ಮನ್ ಡೆವೊನ್ ಕಾನ್‌ವೇ ಬಾರಿಸಿದ ಆಕರ್ಷಕ ದ್ವಿಶತಕದ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 378 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ರೋರಿ ಬರ್ನ್ಸ್ ಬಾರಿಸಿದ ಶತಕದ ನೆರವಿನಿಂದ 275 ರನ್ ಗಳಿಗೆ ಸರ್ವಪತನ ಕಂಡಿತು. ಇನ್ನು ಎರಡನೇ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ 6 ವಿಕೆಟ್ ಕಳೆದುಕೊಂಡು 169 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿತು. ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಇಂಗ್ಲೆಂಡ್ ಡೋಮಿನಿಕ್ ಸಿಬ್ಲಿ(60) ಹಾಗೂ ಜೋ ರೂಟ್ 40 ಅಜೇಯ ಬ್ಯಾಟಿಂಗ್ ನಡೆಸುವ ಮೂಲಕ ಪಂದ್ಯ ಡ್ರಾ ಆಗುವಂತೆ ಮಾಡಿದರು.
ಇನ್ನು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಜೂನ್ 10ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನ ಆತಿಥ್ಯ ವಹಿಸಲಿದೆ.