
ಬೆಂಗಳೂರು(ಏ.14): ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಜಗತ್ತಿನಾದ್ಯಂತ ಕೋಟ್ಯಾಂತರ ಅಭಿಮಾನಿಗಳಿದ್ದಾರೆ. 13 ಆವೃತ್ತಿಗಳನ್ನಾಡಿ ಕಪ್ ಗೆಲ್ಲದಿದ್ದರೂ ಆರ್‌ಸಿಬಿ ಮೇಲಿನ ಅಭಿಮಾನ ಫ್ಯಾನ್ಸ್‌ಗಳಲ್ಲಿ ಎಳ್ಳಷ್ಟೂ ಕಡಿಮೆಯಾಗಿಲ್ಲ.
ಹೌದು, ಕಪ್ ಗೆಲ್ಲದಿದ್ದರೂ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡುವ ತಂಡವೆಂದರೆ ಅದು ಬೆಂಗಳೂರು ಮೂಲದ ಫ್ರಾಂಚೈಸಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಆರ್‌ಸಿಬಿ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಹುರಿದುಂಬಿಸುತ್ತಲೇ ಬಂದಿದ್ದಾರೆ. ಹೀಗಿದ್ದೂ ಆರ್‌ಸಿಬಿಗೆ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಇದೀಗ ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಅಲೆಕ್ಸಾಂಡ್ರಾ ಹಾರ್ಟ್ಲಿ ಆರ್‌ಸಿಬಿಗೆ ಬೆಂಬಲ ಸೂಚಿಸಿದ್ದು, ಈ ಸಲ ಕಪ್ ನಮ್ದೇ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿ ಕನ್ನಡಿಗರ ಹೃದಯ ಗೆದ್ದಿದ್ದಾರೆ.
ಅಲೆಕ್ಸಾಂಡ್ರಾ ಹಾರ್ಟ್ಲಿ ಆರ್‌ಸಿಬಿ ಬೆಂಬಲಿಸಿ ಕನ್ನಡದಲ್ಲಿ ಮಾಡಿದ ಈ ಟ್ವೀಟ್‌ಗೆ ಕೆಲವೇ ಗಂಟೆಗಳಲ್ಲಿ 11 ಸಾವಿರಕ್ಕೂ ಅಧಿಕ ಲೈಕ್ಸ್ ಹಾಗೂ ಮೂರು ಸಾವಿರಕ್ಕೂ ಅಧಿಕ ರೀಟ್ವೀಟ್ ಆಗಿದೆ. ಇಂಗ್ಲೆಂಡ್ ಆಟಗಾರ್ತಿಯ ಬೆಂಗಳೂರು ಹಾಗೂ ಕನ್ನಡದ ಮೇಲಿನ ಅಭಿಮಾನಕ್ಕೆ ಆರ್‌ಸಿಬಿ ಫ್ಯಾನ್ಸ್ ಫಿದಾ ಆಗಿದ್ದಾರೆ.
IPL 2021 ಸನ್‌ರೈಸರ್ಸ್ ಮೇಲೆ ಸವಾರಿ ಮಾಡುತ್ತಾ ಆರ್‌ಸಿಬಿ..?
14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಬಗ್ಗುಬಡಿದು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇದೀಗ ಏಪ್ರಿಲ್ 14ರಂದು ಮಾಜಿ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಕಾದಾಟ ನಡೆಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.