ENGvsIND ಟೆಸ್ಟ್; ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ 3 ವಿಕೆಟ್ ಪತನ!

By Suvarna NewsFirst Published Aug 4, 2021, 7:13 PM IST
Highlights
  • ಟೀಂ ಇಂಡಿಯಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್
  • ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಭಾರತಕ್ಕೆ ಮುನ್ನಡೆ
  • ಆಂಗ್ಲರ 3 ವಿಕೆಟ್ ಕಬಳಿಸಿದ ಟೀಂ ಇಂಡಿಯಾ

ನಾಟಿಂಗ್‌ಹ್ಯಾಮ್(ಆ.04): ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಆರಂಭದಲ್ಲೇ ಮೇಲುಗೈ ಸಾಧಿಸಿದ ಟೀಂ ಇಂಡಿಯಾಗೆ ಇದೀಗ ಮಾರಕ ದಾಳಿ ಮುಂದುವರಿಸಿದೆ. ಟೀಂ ಇಂಡಿಯಾ ವೇಗಿಗಳ ದಾಳಿಗೆ ಇಂಗ್ಲೆಂಡ್ ಬ್ಯಾಟ್ಸ್‌ಮನ್ ವಿಕೆಟ್ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದ ಭಾರತ, ಎದುರಾಳಿಗಳ 3 ಪ್ರಮುಖ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದೆ.

INDvsENG ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾದಲ್ಲಿ ನಾಲ್ವರು ವೇಗಿಗಳಿಗೆ ಸ್ಥಾನ!

ಟೀಂ ಇಂಡಿಯಾಗೆ ಮೊದಲ ಓವರ್‌ನಲ್ಲೇ ಜಸ್ಪ್ರೀತ್ ಬುಮ್ರಾ ಮುನ್ನಡೆ ತಂದುಕೊಟ್ಟಿದ್ದರು. ರೋರಿ ಬರ್ನ್ಸ್ ರನ್ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಸೇರಿದ್ದರು. 27 ರನ್ ಸಿಡಿಸಿ ಅಪಾಯದ ಮುನ್ಸೂಚನೆ ನೀಡಿದ್ದ ಜ್ಯಾಕ್ ಕ್ರಾವ್ಲಿಗೆ ಮೊಹಮ್ಮದ್ ಸಿರಾಜ್ ಶಾಕ್ ನೀಡಿದರು. ಸಿರಾಜ್ ಎಸೆತದಲ್ಲಿ ಕ್ರಾವ್ಲಿ ವಿಕೆಟ್ ಕೀಪರ್ ರಿಷಬ್ ಪಂತ್‌ಗೆ ಕ್ಯಾಚ್ ನೀಡಿ ಔಟಾದರು.

ಜ್ಯಾಕ್ ಜೊತೆ ಉತ್ತಮ ಜೊತೆಯಾಟವಾಡಿದ್ದ ಡೋಮಿನಿಕ್ ಸಿಬ್ಲಿ 18 ರನ್ ಸಿಡಿಸಿ ಔಟಾದರು. ಮೊಹಮ್ಮದ್ ಶಮಿ ಎಸೆತದಲ್ಲಿ ಕೆಎಲ್ ರಾಹುಲ್‌ಗೆ ಕ್ಯಾಚ್ ನೀಡಿ ಸಿಬ್ಲಿ ಪೆವಿಲಿಯನ್ ಸೇರಿದರು. ಇಂಗ್ಲೆಂಡ್ 66 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತು.

ಸೋಲಿನಿಂದ ನಿರಾಸೆಗೊಂಡಿದ್ದ ಮಹಿಳಾ ಹಾಕಿ ತಂಡಕ್ಕೆ ಸ್ಫೂರ್ತಿ ತುಂಬಿದ ಮೋದಿ!

ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟ್ರೆಂಟ್ ಬ್ರಿಡ್ಜ್ ಪಿಚ್ ಹಾಗಾ ಕಂಡೀಷನ್‌ ಅನುಗುಣವಾಗಿ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಬೃಹತ್ ಮೊತ್ತ ಪೇರಿಸಿ ಭಾರತಕ್ಕೆ ಒತ್ತಡ ಹೇರುವ ತಂತ್ರಕ್ಕೆ ಮುಂದಾಗಿತ್ತು. ಆದರೆ ಮೊದಲ ದಿನವವೇ ಭಾರತ ದಾಳಿಗೆ ಇಂಗ್ಲೆಂಡ್ ಪ್ರಮುಖ ವಿಕೆಟ್ ಕಳೆದುಕೊಂಡು ಆತಂಕ ಎದುರಿಸುತ್ತಿದೆ.

ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಸೋಲು ಕಂಡ ಟೀಂ ಇಂಡಿಯಾ ನಿರಾಸೆ ಅನುಭವಿಸಿತ್ತು. ಬಳಿಕ ಇಂಗ್ಲೆಂಡ್‌ನಲ್ಲೇ ಬೀಡುಬಿಟ್ಟಿದ್ದ ಟೀಂ ಇಂಡಿಯಾಗೆ ಇಂಜುರಿ ಸಮಸ್ಯೆಗಳು ಕಾಡಿತ್ತು. ಸರಣಿ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದಲ್ಲಿ ಆರಂಭಿಕ ಮಯಾಂಕ್ ಅಗರ್ವಾಲ್ ಹೆಲ್ಮೆಟ್‌ಗೆ ಚೆಂಡು ಬಡಿದು ಗಾಯಗೊಂಡಿದ್ದರು. ಹೀಗಾಗಿ ಮೊದಲ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಅಲಭ್ಯರಾಗಿದ್ದಾರೆ.

click me!