
ನಾಟಿಂಗ್‌ಹ್ಯಾಮ್(ಆ.04): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ ದಾಳಿಗೆ ಇಂಗ್ಲೆಂಡ್ 183 ರನ್‌ಗೆ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಭರ್ಜರಿ ಮೇಲುಗೈ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಇಂಗ್ಲೆಂಡ್ ಲೆಕ್ಕಾಚಾರವನ್ನು ಟೀಂ ಇಂಡಿಯಾ ವೇಗಿಗಳು ಉಲ್ಟಾ ಮಾಡಿದರು. ರೋರಿ ಬರ್ನ್ಸ್ ಶೂನ್ಯ ಸುತ್ತಿದರೆ, ಜ್ಯಾಕ್ ಕ್ರಾವ್ಲಿ 27 ರನ್ ಸಿಡಿಸಿ ಔಟಾದರು. ಡೋಮಿನಿಕ್ ಸಿಬ್ಲಿ 18 ರನ್ ಸಿಡಿಸಿ ಔಟಾದರು. 66 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡಕ್ಕೆ ಜೋ ರೂಟ್ಸ್ ಆಸರೆಯಾದರು.
ಜಾನಿ ಬೈರ್‌ಸ್ಟೋ 29 ರನ್ ಸಿಡಿಸಿ ಔಟಾದರು. ಡೆನಿಯಲ್ ಲಾರೆನ್ಸ್, ಜೋಸ್ ಬಟ್ಲರ್ ಹಾಗೂ ಒಲಿ ರಾಬಿನ್ಸನ್ ಅಬ್ಬರಿಸುವ ಮೊದಲೇ ಪೆವಿಲಿಯನ್ ಸೇರಿಕೊಂಡರು. ಏಕಾಂಗಿ ಹೋರಾಟ ನೀಡಿದ ರೂಟ್ ಅರ್ಧಶತಕ ಸಿಡಿಸಿ ಮಿಂಚಿದರು. ದಿಟ್ಟ ಹೋರಾಟ ನೀಡಿದ ರೂಟ್ 64 ರನ್ ಸಿಡಿಸಿ ಔಟಾದರು.
ಸ್ಟುವರ್ಟ್ ಬ್ರಾಡ್ ಕೇವಲ 4 ರನ್ ಸಿಡಿಸಿ ಔಟಾದರು. ಅಂತಿಮ ಹಂತದಲ್ಲಿ ಸ್ಯಾಮ್ ಕುರನ್ ಹಾಗೂ ಜೇಮ್ಸ್ ಆ್ಯಂಡರ್ಸ್ ಹೋರಾಟ ನೀಡಿದರು. ಕುರನ್ ಅಜೇಯ 27 ರನ್ ಸಿಡಿಸಿದರು. ಆದರೆ ಆ್ಯಂಡರ್ಸನ್ 1 ರನ್ ಸಿಡಿಸಿ ಔಟಾದರು. ಈ ಮೂಲಕ ಇಂಗ್ಲೆಂಡ್ 183 ರನ್‌ಗೆ ಆಲೌಟ್ ಆಯಿತು.
ಜಸ್ಪ್ರೀತ್ ಬುಮ್ರಾ 4, ಮೊಹಮ್ಮದ್ ಶಮಿ ವಿಕೆಟ್ ಕಬಳಿಸಿದರು. ಶಾರ್ದೂಲ್ ಠಾಕೂರ್ 2 ವಿಕೆಟ್ ಹಾಗೂ ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.