
ಮುಂಬೈ(ಫೆ.06): ಕ್ರಿಕೆಟ್ ಹೊರತು ಪಡಿಸಿ ಇತರ ಕ್ಷೇತ್ರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಧಮ್ಕಿ ಹಾಕಿದ ಎನ್‌ಸಿಪಿ ನಾಯಕ, ಹಿರಿಯ ರಾಜಕಾರಣಿ ಶರದ್ ಪವರ್‌ಗೆ ಭಾರತೀಯರು ಮಂಗಳಾರತಿ ಮಾಡಿದ್ದಾರೆ. ಭಾರತದ ಪರ, ಭಾರತೀಯತೆ ಕುರಿತು, ದೇಶದ ಸಾರ್ವಭೌಮತ್ವ ಕುರಿತು ಮಾತನಾಡಿದ ಸಚಿನ್‌ಗೆ ಧಮ್ಮಿ ಹಾಕಲಾಗುತ್ತಿದೆ ಎಂದು ಅಭಿಮಾನಿಗಳ ಪವಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶ ಮೊದಲು ಎಂದ ಸಚಿನ್ ತೆಂಡುಲ್ಕರ್‌ಗೆ ಭಾರಿ ಬೆಂಬಲ!
ರೈತ ಪ್ರತಿಭಟನೆ ಹಾಗೂ ವಿದೇಶಿ ಸೆಲೆಬ್ರೆಟಿಗಳ ಟ್ವೀಟರ್ ಅಭಿಯಾನದ ಕುರಿತ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಸಚಿನ್ ತೆಂಡುಲ್ಕರ್‌ಗೆ ನಾನು ಎಚ್ಚರಿಸುತ್ತಿದ್ದೇನೆ. ಇತರ ಕ್ಷೇತ್ರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಶರದ್ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶರದ್ ಪವಾರ್ ಬಹಿರಂಗವಾಗಿ ಸಚಿನ್ ತೆಂಡುಲ್ಕರ್‌ಗೆ ಎಚ್ಚರಿಕೆ ನೀಡುತ್ತಿದ್ದಾರೆ. ದೇಶದ ಪರ ಮಾತನಾಡಿದ ಸಚಿನ್‌ಗೆ ಧಮ್ಕಿ ಹಾಕಲಾಗುತ್ತಿದೆ ಎಂದು ಪವಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.