
ಮೆಲ್ಬರ್ನ್(ಜ.02): ತಮಿಳುನಾಡು ವೇಗಿ ತಂಗರಸು ನಟರಾಜನ್‌ಗೆ ಮತ್ತೊಮ್ಮೆ ಅದೃಷ್ಟ ಖುಲಾಯಿಸಿದೆ. ಗಾಯಾಳು ಉಮೇಶ್ ಯಾದವ್ ಬದಲಿಗೆ ಎಡಗೈ ವೇಗಿ ನಟರಾಜನ್ ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದು, 3ನೇ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ಇದೆ.
ಐಪಿಎಲ್‌ನಲ್ಲಿ ಗಮನಾರ್ಹ ಪ್ರದರ್ಶನ ತೋರಿ ನೆಟ್ ಬೌಲರ್ ಆಗಿ ಆಸ್ಪ್ರೇಲಿಯಾಗೆ ತೆರಳಿದ ನಟರಾಜನ್, ಮೊದಲು ಏಕದಿನ ತಂಡಕ್ಕೆ ಸೇರ್ಪಡೆಗೊಂಡು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯಗೊಂಡಿದ್ದರಿಂದ ಟಿ20 ತಂಡದಲ್ಲಿ ಸ್ಥಾನ ದೊರೆಯಿತು. ಭಾರತ ಟಿ20 ತಂಡಕ್ಕೂ ಕಾಲಿಟ್ಟು ಉತ್ತಮ ಪ್ರದರ್ಶನ ತೋರಿದರು. ಇದೀಗ ಟೆಸ್ಟ್ ತಂಡಕ್ಕೂ ಸೇರ್ಪಡೆಗೊಂಡಿದ್ದು, ಪಾದಾರ್ಪಣೆ ಮಾಡುವ ಉತ್ಸಾಹದಲ್ಲಿದ್ದಾರೆ.
ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ..?
ಜನವರಿ 5ಕ್ಕೆ ಸಿಡ್ನಿಗೆ ಭಾರತ
2ನೇ ಟೆಸ್ಟ್ ಮುಕ್ತಾಯದ ಬಳಿಕ ಮೆಲ್ಬರ್ನ್‌ನಲ್ಲೇ ಅಭ್ಯಾಸ ಮುಂದುವರಿಸಿರುವ ಭಾರತ ತಂಡ, ಜ.5ರಂದು ಸಿಡ್ನಿಗೆ ಪ್ರಯಾಣಿಸಲಿದೆ ಎಂದು ಮೂಲಗಳು ತಿಳಿಸಿವೆ. ಜ.7ರಿಂದ 3ನೇ ಟೆಸ್ಟ್ ಆರಂಭಗೊಳ್ಳಲಿದ್ದು, ಸಿಡ್ನಿಯಲ್ಲಿ ಅಭ್ಯಾಸ ನಡೆಸಲು ಕೇವಲ ಒಂದು ದಿನ ಮಾತ್ರ ಸಿಗಲಿದೆ.
ಸಿಡ್ನಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಆಸ್ಪ್ರೇಲಿಯಾ ತಂಡಗಳು, ಮೆಲ್ಬರ್ನ್‌ನಲ್ಲೇ ಉಳಿದುಕೊಂಡು ಅಭ್ಯಾಸ ನಡೆಸುತ್ತಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.