
ಕೋಲ್ಕತಾ (ಮಾ.04) ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ವೇಗದ ಸೆಂಚುರಿ ದಾಖಲಾಗಿದೆ. ನ್ಯೂಜಿಲೆಂಡ್ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಸೌತ್ ಆಫ್ರಿಕಾ ನೀಡಿದ 170 ರನ್ ಟಾರ್ಗೆಟ್ ಚೇಸ್ ಮಾಡಿದ ನ್ಯೂಜಿಲೆಂಡ್ ಕೇವಲ 12.5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ. 9 ವಿಕೆಟ್ ಗೆಲುವಿನ ಮೂಲಕ ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಈ ಸಾಧನೆಗೆ ಫಿನ್ ಅಲೆನ್ ಕೇವಲ 33 ಎಸೆತದಲ್ಲಿ ದಾಖಲೆಯ ಶತಕ ಪ್ರಮುಖ ಕಾರಣವಾಗಿದೆ.
ನ್ಯೂಜಿಲೆಂಡ್ ಬ್ಯಾಟರ್ ಫಿನ್ ಅಲೆನ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ವೇಗದ ಶತಕ ಸಿಡಿಸಿದ್ದಾರೆ. ಇನ್ನು ಟಿ20 ಇತಿಹಾಸದಲ್ಲಿ ಮೂರನೇ ಅತೀ ವೇಗದ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಟಿ20 ಇತಿಹಾಸದಲ್ಲಿ ಅತೀ ವೇಗದ ಶತಕ ದಾಖಲೆ
ಫಿನ್ ಅಲೆನ್ 33 ಎಸೆತದಲ್ಲಿ 10 ಬೌಂಡರಿ ಹಾಗೂ 8 ಸಿಕ್ಸರ್ ಮೂಲಕ ಅಜೇಯ 100 ರನ್ ಸಿಡಿಸಿದರು. ಇತ್ತ ಟಿಮ್ ಸೈಫರ್ಟ್ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನಸೆಳೆದಿದ್ದಾರೆ. 33 ಎಸೆತದಲ್ಲಿ 58 ರನ್ ಸಿಡಿಸಿದ್ದಾರೆ. ಇನ್ನು ರಾಚಿನ್ ರವೀಂದ್ರ ಅಜೇಯ 13 ರನ್ ಸಿಡಿಸಿದರು. ಇದರೊಂದಿಗೆ ನ್ಯೂಜಿಲೆಂಡ್ ಫೈನಲ್ ತಲುಪಿದೆ. ನಾಳೆ ನಡೆಯಲಿರುವ ಭಾರತ ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ತಂಡ ಪ್ರಶಸ್ತಿಗಾಗಿ ನ್ಯೂಜಿಲೆಂಡ್ ವಿರುದ್ದ ಹೋರಾಟ ನಡೆಸಲಿದೆ.
ಮಾರ್ಚ್ 8 ರಂದು ಅಹಮ್ಮಾದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಸೌತ್ ಆಫ್ರಿಕಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಮತ್ತೆ ಚೋಕರ್ಸ್ ಪಟ್ಟದ ಚರ್ಚೆಗೆ ಗ್ರಾಸವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.