ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್ ಮೇಲೆ FIR ದಾಖಲು..!

Suvarna News   | Asianet News
Published : Feb 16, 2021, 01:26 PM IST
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್ ಮೇಲೆ FIR ದಾಖಲು..!

ಸಾರಾಂಶ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಹಿಸಾರ್(ಫೆ.16)‌: ಭಾರತ ತಂಡದ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಬಗ್ಗೆ ಮಾತನಾಡುವಾಗ ಜಾತಿ ನಿಂದನೆ ಮಾಡಿದ್ದ ಆರೋಪದಡಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌ ವಿರುದ್ಧ ಹರಾರ‍ಯಣದ ಹನ್ಸಿನಲ್ಲಿ ಪ್ರಕರಣ ದಾಖಲಾಗಿದೆ. 

ಕಳೆದ ವರ್ಷ ಇನ್‌ಸ್ಟಾಗ್ರಾಂನಲ್ಲಿ ಕ್ರಿಕೆಟಿಗ ರೋಹಿತ್‌ ಶರ್ಮಾ ಜೊತೆ ಮಾತನಾಡುವ ವೇಳೆ ಚಹಲ್‌ ಬಗ್ಗೆ ಯುವರಾಜ್‌ ಲಘುವಾಗಿ ಮಾತನಾಡಿದ್ದರು. ಇದು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು, ವಕೀಲ ರಜತ್‌ ಕಲ್ಸನ್‌ ಎಂಬುವವರು ಹನ್ಸಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ.

ಯುವರಾಜ್ ಸಿಂಗ್ ಹೆಂಡತಿ ಹೇಗಾಗಿದ್ದಾರೆ ನೋಡಿ, ಗುರುತೇ ಸಿಗೋಲ್ಲ!

ರಜತ್‌ ಕಲ್ಸನ್‌ ಎಂಬಾತ ಕಳೆದ ವರ್ಷದ ಜೂನ್‌ 02ರಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಾಗಿ ಬರೋಬ್ಬರಿ 8 ತಿಂಗಳ ಬಳಿಕ ಯುವಿ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

IPL 2021: ಕಿಂಗ್ಸ್‌ ಇಲೆವನ್ ಪಂಜಾಬ್‌ ತಂಡದ ಹೆಸರು ಬದಲು..!

ಇದೀಗ ಪೊಲೀಸರು ಐಪಿಸಿ ಸೆಕ್ಷನ್‌ 153, 153A, 295, 505 ಹಾಗೂ 3(1)(U) ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಯುವಿ ಮೇಲೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತಂತೆ ಯುವರಾಜ್‌ ಸಿಂಗ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ