
ದುಬೈ(ಜು.02): ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷ ಸ್ಥಾನದಿಂದ ಶಶಾಂಕ್ ಮನೋಹರ್ ಬುಧವಾರ ಕೆಳಗಿಳಿದಿದ್ದಾರೆ. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವ ವರೆಗೂ ಉಪಾಧ್ಯಕ್ಷ ಇಮ್ರಾನ್ ಖವಾಜ, ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಶಶಾಂಕ್ 2 ಬಾರಿ 2 ವರ್ಷಗಳ ಕಾರ್ಯಾವಧಿಯನ್ನು ಪೂರೈಸಿದ್ದರು. ಐಸಿಸಿ ನಿಯಮದ ಪ್ರಕಾರ, ಶಶಾಂಕ್ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಬಹುದಿತ್ತು. ಆದರೆ ಶಶಾಂಕ್ ಅಧ್ಯಕ್ಷ ಸ್ಥಾನ ತ್ಯಜಿಸಲು ನಿರ್ಧರಿಸಿದರು ಎಂದು ಐಸಿಸಿ ತಿಳಿಸಿದೆ.
ಶಶಾಂಕ್ ಮನೋಹರ್ ನವೆಂಬರ್ 2015ರಲ್ಲಿ ಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಹಾಂಕಾಂಗ್‌ನ ಇಮ್ರಾನ್ ಖವಾಜ ಹಂಗಾಮಿ ಐಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಮುಂದಿನ ಅಧ್ಯಕ್ಷರ ಆಯ್ಕೆಗೆ ಸದ್ಯದಲ್ಲೇ ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಸಾರ್ವಕಾಲಿಕ ಶ್ರೇಷ್ಠ IPL ತಂಡ ಪ್ರಕಟಿಸಿದ ಎಬಿ ಡಿವಿಲಿಯರ್ಸ್..!
ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಮಾಜಿ ಅಧ್ಯಕ್ಷ ಕಾಲಿನ್ ಗ್ರೇವ್ಸ್ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಐಸಿಸಿ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸುಪ್ರೀಂ ಕೋರ್ಟ್ ಗಂಗೂಲಿಗೆ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯಲು ಅವಕಾಶ ನೀಡುತ್ತದೆಯೋ ಇಲ್ಲವೋ ಎನ್ನುವುದರ ಆಧಾರದಲ್ಲಿ ದಾದಾ ಸ್ಪರ್ಧೆ ನಿರ್ಧಾರವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.