
ಮಂಗಳೂರು(ಜ.07): ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ಯಶಸ್ವಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇಂದು, ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಬಂದಿಳಿದಿದ್ದಾರೆ. ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ, ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ, ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ, ಇದೀಗ ತಮ್ಮ ಸ್ನೇಹಿತ ಕಾಸರಗೋಡಿನ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ ಕೆ.ಕೆ. ಅಬ್ದುಲ್ ಗಫಾರ್ ಅವರ ಜೀವನಾಧಾರಿತ ಆತ್ಮಕಥನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗುವ ಸಲುವಾಗಿ ಧೋನಿ, ಮಂಗಳೂರಿಗೆ ಬಂದಿಳಿದಿದ್ದಾರೆ.
Ind vs SL: 2ನೇ ಪಂದ್ಯ ಸೋತರೂ ಟೀಂ ಇಂಡಿಯಾ ವೇಗಿಗಳನ್ನು ಸಮರ್ಥಿಸಿಕೊಂಡ ಕೋಚ್ ರಾಹುಲ್ ದ್ರಾವಿಡ್..!
ಮಹೇಂದ್ರ ಸಿಂಗ್ ಧೋನಿಯನ್ನು ಮಾಜಿ ಸಚಿವ ಯು.ಟಿ ಖಾದರ್ ಅವರ ಸಹೋದರ, ಯು.ಟಿ. ಇಫ್ತಿಕಾರ್ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನದಿಂದ ಬಂದಿಳಿಯುತ್ತಿದ್ದಂತೆಯೇ ಆತ್ಮೀಯವಾಗಿ ಬರಮಾಡಿಕೊಂಡರು. ಕಾಸರಗೋಡಿನ ಬೇಕಲ್ ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವಿದ್ದು, ಸ್ವತಃ ಯು.ಟಿ ಇಫ್ತಿಕಾರ್, ಡ್ರೈವ್ ಮಾಡಿಕೊಂಡು ಧೋನಿಯವರನ್ನು ಕಾಸರಗೋಡಿಗೆ ಕರೆದೊಯ್ದರು. ಧೋನಿ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆಯೇ ಅವರ ಅಭಿಮಾನಿಗಳು ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಇದಾದ ಬಳಿಕ ಭಾರೀ ಭದ್ರತೆಯೊಂದಿಗೆ ಧೋನಿ ಕಾಸರಗೋಡಿನತ್ತ ಪ್ರಯಾಣ ಬೆಳೆಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.