ಆ್ಯರೋನ್ ಫಿಂಚ್ ನಿವೃತ್ತಿ; ಭಾವನ್ಮಾತ್ಮಕ ಸಂದೇಶ ರವಾನಿಸಿದ ವಿರಾಟ್ ಕೊಹ್ಲಿ..!

Published : Sep 10, 2022, 03:23 PM IST
ಆ್ಯರೋನ್ ಫಿಂಚ್ ನಿವೃತ್ತಿ; ಭಾವನ್ಮಾತ್ಮಕ ಸಂದೇಶ ರವಾನಿಸಿದ ವಿರಾಟ್ ಕೊಹ್ಲಿ..!

ಸಾರಾಂಶ

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ ಇದುವರೆಗೂ ಆಸ್ಟ್ರೇಲಿಯಾ ಪರ 145 ಏಕದಿನ ಪಂದ್ಯಗಳನ್ನಾಡಿರುವ ಫಿಂಚ್ ಫಿಂಚ್ ನಿವೃತ್ತಿಗೆ ಭಾವನಾತ್ಮಕ ಸಂದೇಶ ಕಳಿಸಿದ ವಿರಾಟ್ ಕೊಹ್ಲಿ

ನವದೆಹಲಿ(ಸೆ.10): ಆಸ್ಟ್ರೇಲಿಯಾ ಸೀಮಿತ ಓವರ್‌ಗಳ ಕ್ರಿಕೆಟ್‌ ತಂಡದ ನಾಯಕ ಆ್ಯರೋನ್ ಫಿಂಚ್, ಏಕದಿನ ಕ್ರಿಕೆಟ್‌ ಮಾದರಿಗೆ ಗುಡ್‌ ಬೈ ಹೇಳಿದ್ದಾರೆ. ನ್ಯೂಜಿಲೆಂಡ್ ಎದುರಿನ ಮೂರನೇ ಏಕದಿನ ಪಂದ್ಯವು ಆ್ಯರೋನ್ ಫಿಂಚ್ ಪಾಲಿಗೆ ಕೊನೆಯ ಏಕದಿನ ಪಂದ್ಯ ಎನಿಸಲಿದೆ. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ, ಆ್ಯರೋನ್ ಫಿಂಚ್ ಅವರಿಗೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. 

ಸದ್ಯ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ತವರಿನಲ್ಲಿ, ನ್ಯೂಜಿಲೆಂಡ್‌ ಎದುರು 3 ಪಂದ್ಯಗಳ ಚಾಪೆಲ್-ಹ್ಯಾಡ್ಲಿ ಏಕದಿನ ಸರಣಿಯನ್ನಾಡುತ್ತಿದ್ದು, ಈಗಾಗಲೇ ಆ್ಯರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಆ್ಯರೋನ್ ಫಿಂಚ್ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರೂ ಸಹಾ, ಟಿ20 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ  ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

ಆ್ಯರೋನ್ ಫಿಂಚ್, ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕವಾಗಿಯೇ ವಿದಾಯದ ಸಂದೇಶ ರವಾನಿಸಿದ್ದಾರೆ. ಇದೊಂದು ರೀತಿಯ ಸವಾಲಿನ ಪಯಣವಾಗಿತ್ತು. ಈ ಅವಧಿಯಲ್ಲಿ ಕೆಲವೊಂದು ಸಾರ್ವಕಾಲಿಕ ಶ್ರೇಷ್ಠ ಆಟಗಾರರೊಂದಿಗೆ ಹಾಗೂ ಆಟಗಾರರ ವಿರುದ್ದ ಆಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ನಾನು ಚಿಕ್ಕವನಿದ್ದಾಗಿನಿಂದಲೇ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡವನ್ನು ಪ್ರತಿನಿಧಿಸಬೇಕು ಎನ್ನುವುದು ನನ್ನ ಕನಸಾಗಿತ್ತು. ಆದರೀಗ ನಾನು ಕನಸು ಕಂಡಿದ್ದಕ್ಕಿಂತ ಹೆಚ್ಚಿನದ್ದೇ ಸಾಧಿಸಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಸಂದೇಶ, ಹಾರೈಕೆಗಳಿಗೆ ಧನ್ಯವಾದಗಳು ಎಂದು ಆ್ಯರೋನ್ ಫಿಂಚ್ ತಮ್ಮ ಪತ್ನಿ ಜತೆಗಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. 

ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಕಟ್ಟಲು ಇದು  ಸಕಾಲವೆಂದು ಭಾವಿಸುತ್ತಾ, ನಾನು ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ವಿದಾಯ ಘೋಷಿಸುತ್ತಿದ್ದೇನೆ. ನನ್ನ ಈ ಪಯಣದಲ್ಲಿ ನನ್ನ ಜತೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ  ಎಂದು ಆ್ಯರೋನ್ ಫಿಂಚ್ ಹೇಳಿದ್ದಾರೆ.

ಆ್ಯರೋನ್ ಫಿಂಚ್ ಅವರ ಈ ಭಾವನಾತ್ಮಕ ವಿದಾಯದ ಸಂದೇಶಕ್ಕೆ ಹಲವು ಮಂದಿ ಇನ್‌ಸ್ಟಾಗ್ರಾಂನಲ್ಲೇ ಕಮೆಂಟ್ ಮಾಡುವ ಮೂಲಕ ಮುಂದಿನ ಪಯಣ ಸುಖಕರವಾಗಿರಲಿ ಎಂದು ಶುಭ ಹಾರೈಸಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಒಟ್ಟಾಗಿಯೇ ಆಡಿದ್ದ ವಿರಾಟ್ ಕೊಹ್ಲಿ, ಆ್ಯರೋನ್ ಫಿಂಚ್‌ಗೆ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದ್ದಾರೆ. 

Aaron Finch Retires ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾ ನಾಯಕ..!

ಅಭಿನಂದನೆಗಳು ಫಿಂಚ್. ಕಳೆದೆಲ್ಲಾ ವರ್ಷಗಳಲ್ಲಿ ನಿಮ್ಮ ವಿರುದ್ದ ಹಾಗೂ ನಿಮ್ಮ ಜತೆಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಪರ ಆಡಿದ್ದು ಒಂದೊಳ್ಳೆಯ ಅನುಭವ. ನಿಮ್ಮ ಮುಂದಿನ ಹಂತದ ಜೀವನವನ್ನು ಎಂಜಾಯ್ ಮಾಡಿ ಎಂದು ವಿರಾಟ್ ಕೊಹ್ಲಿ ಶುಭ ಹಾರೈಸಿದ್ದಾರೆ.

ಆ್ಯರೋನ್ ಫಿಂಚ್, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಪರ 145 ಏಕದಿನ ಪಂದ್ಯಗಳನ್ನಾಡಿ 5,401 ರನ್ ಬಾರಿಸಿದ್ದಾರೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಪರ ಗರಿಷ್ಠ ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್, ಡೇವಿಡ್ ವಾರ್ನರ್‌, ಮಾರ್ಕ್‌ ವಾ ಬಳಿಕ ಅತಿಹೆಚ್ಚು ಶತಕ ಸಿಡಿಸಿದ ನಾಲ್ಕನೇ ಬ್ಯಾಟರ್ ಎನ್ನುವ ಹಿರಿಮೆ ಕೂಡಾ ಫಿಂಚ್ ಹೆಸರಿನಲ್ಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮೊದಲು ಗೊಂದಲಕ್ಕೆ ಸಿಲುಕಿದ ಗೌತಮ್ ಗಂಭೀರ್!