Virat Kohli captaincy;ಏಕದಿನ ನಾಯಕತ್ವದಿಂದಲೂ ಕೊಹ್ಲಿ ದೂರ, ಸುಳಿವು ನೀಡಿದ ರವಿ ಶಾಸ್ತ್ರಿ!

By Suvarna NewsFirst Published Nov 12, 2021, 8:01 PM IST
Highlights
  • ಕೊಹ್ಲಿ ನಾಯಕತ್ವ ಕುರಿತು ಮಹತ್ವದ ಸುಳಿವು ನೀಡಿದ ಮಾಜಿ ಕೋಚ್ ರವಿ ಶಾಸ್ತ್ರಿ
  • ಟಿ20 ನಾಯಕತ್ವ ತ್ಯಜಿಸಿರುವ ವಿರಾಟ್ ಕೊಹ್ಲಿ ಏಕದಿನದಿಂದಲೂ ದೂರ?
  • ಖಾಸಗಿ ಮಾಧ್ಯಮ ಜೊತೆಗಿನ ಸಂದರ್ಶನದಲ್ಲಿ ರವಿ ಶಾಸ್ತ್ರಿ ಹೇಳಿಕೆ

ಮುಂಬೈ(ನ.12): ಟಿ20 ವಿಶ್ವಕಪ್ ಟೂರ್ನಿಯಿಂದ(T20 World Cup 2021) ನಿರ್ಗಮಿಸಿದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ದದ ಸರಣಿಗೆ ಸಜ್ಜಾಗುತ್ತಿದೆ. ಇತ್ತ ನಾಯಕ ವಿರಾಟ್ ಕೊಹ್ಲಿ(Virat Kohli) ನ್ಯೂಜಿಲೆಂಡ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಕುಟುಂಬದ ಜೊತೆ ಕಾಲಕಳೆಯುತ್ತಿರುವ ವಿರಾಟ್ ಕೊಹ್ಲಿಗೆ ಈ ರೆಸ್ಟ್ ಅತ್ಯವಶ್ಯಕವಾಗಿದೆ. ಟೀಂ ಇಂಡಿಯಾದ ಸೋಲು, ಟಿ20 ನಾಯಕತ್ವಕ್ಕೆ(Captaincy) ಕೊಹ್ಲಿ ವಿದಾಯ ಟೀಂ ಇಂಡಿಯಾ ಅಭಿಮಾನಿಗಳಿಗೆ ಆಘಾತ ನೀಡಿದೆ. ಇದರ ಬೆನ್ನಲ್ಲೇ ಮಾಜಿ ಕೋಚ್ ರವಿ ಶಾಸ್ತ್ರಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಏಕದಿನ ನಾಯಕತ್ವವನ್ನು ವಿರಾಟ್ ಕೊಹ್ಲಿ ತ್ಯಜಿಸಲಿದ್ದಾರೆ ಎಂದಿದ್ದಾರೆ. ಈ ಮಾತು ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದೆ.

ಇಂಡಿಯಾ ಟುಡೆಗೆ ನೀಡಿದ ಸಂದರ್ಶದಲ್ಲಿ ರವಿ ಶಾಸ್ತ್ರಿ(Ravi Shastri) ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಟಿ20 ನಾಯಕತ್ವ ತ್ಯಜಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಮೇಲಿದ್ದ ಹೆಚ್ಚುವರಿ ಜವಾಬ್ದಾರಿಯನ್ನು ಕೆಳಗಿಳಿಸಿದ್ದಾರೆ. ಹೆಚ್ಚಿನ ಒತ್ತಡದಿಂದ ಮುಕ್ತರಾಗಲು ಕೊಹ್ಲಿ ಈ ನಿರ್ಧಾರ ಮಾಡಿದ್ದಾರೆ. ಆದರೆ ಕೊಹ್ಲಿ ಏಕದಿನ(ODI) ನಾಯಕತ್ವವನ್ನು ತ್ಯಜಿಸಲಿದ್ದಾರೆ ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.

Ind vs NZ Test: ಕಿವೀಸ್ ಎದುರಿನ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ..!

ಟೆಸ್ಟ್ ಕ್ರಿಕೆಟ್(Test cricket) ಹಾಗೂ ಟೆಸ್ಟ್ ನಾಯಕತ್ವಕ್ಕೆ ಹೆಚ್ಚಿನ ಗಮನ ಕೇಂದ್ರೀಕರಿಸಲು ವಿರಾಟ್ ಕೊಹ್ಲಿ, ಏಕದಿನ ನಾಯಕತ್ವಕ್ಕೂ ವಿದಾಯ ಹೇಳುವ ಸಾಧ್ಯತೆ ಹೆಚ್ಚಿದೆ. ಈ ಮೂಲಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಕಡೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗಲಿದೆ. ಇದಕ್ಕಾಗಿ ಕೊಹ್ಲಿ ಈ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ರವಿ ಶಾಸ್ತ್ರಿ ಸುಳಿವು ನೀಡಿದ್ದಾರೆ. ಏಕದಿನ ನಾಯಕತ್ವ ತ್ಯಜಿಸುವಿಕೆ ಶೀಘ್ರದಲ್ಲೇ ಆಗುವುದಿಲ್ಲ. ಭವಿಷ್ಯದಲ್ಲಿ ಕೊಹ್ಲಿ ಈ ನಿರ್ಧಾರ ಮಾಡಲಿದ್ದಾರೆ ಎಂದಿದ್ದಾರೆ.

ಕೊಹ್ಲಿ ನಾಯಕತ್ವ ತ್ಯಜಿಸುವಿಕೆಯ ಹಿಂದೆ ಇತರ ಕಾರಣಗಳನ್ನು ಹುಡುಕವ ಅಗತ್ಯವಿಲ್ಲ. ಕ್ರಿಕೆಟ್ ಅಥವಾ ಇತರ ಕ್ರೀಡೆಯಲ್ಲಿ ಇದು ಸಾಮಾನ್ಯ. ನಾಯಕತ್ವ ತ್ಯಜಿಸುವಿಕೆ ಇದೇ ಮೊದಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ 5 ವರ್ಷ ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿ ವಿರಾಜಮಾನವಾಗಿತ್ತು. ಟೆಸ್ಟ್ ಕ್ರಿಕೆಟ್‌ಗೆ ಹೆಚ್ಚಿನ ಗಮನ ನೀಡುವ ಅಗತ್ಯವಿದೆ. ವಿರಾಟ್ ಕೊಹ್ಲಿ ಮೂರು ಮಾದರಿಯಲ್ಲಿ ನಾಯಕನಾಗಿ, ಐಪಿಎಲ್ ಟೂರ್ನಿ ನಾಯಕನಾಗಿ ಹೆಚ್ಚಿನ ಜವಾಬ್ದಾರಿ ನಿರ್ವಹಿಸಿದ್ದಾರೆ. ಗರಿಷ್ಠ ಒತ್ತಡದಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ನಾಯಕತ್ವ ತ್ಯಜಿಸಿ ತಮ್ಮ ಬ್ಯಾಟಿಂಗ್‌ನಲ್ಲಿ ಗಮನ ಕೇಂದ್ರೀಕರಿಸಲಿದ್ದಾರೆ ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.

ICC T20 Rankings: 8ನೇ ಸ್ಥಾನಕ್ಕೆ ಜಾರಿದ ವಿರಾಟ್ ಕೊಹ್ಲಿ..!

ಟಿ20 ವಿಶ್ವಕಪ್ ಟೂರ್ನಿ ವಿರಾಟ್ ಕೊಹ್ಲಿಯ ಕೊನೆಯ ಟಿ20 ನಾಯಕತ್ವವಾಗಿತ್ತು. ಕೊನೆಯ ನಾಯಕತ್ವದ ಸರಣಿಯಲ್ಲಿ ಟೀಂ ಇಂಡಿಯಾ ಲೀಗ್ ಹಂತದಿಂದಲೇ ನಿರ್ಗಮಿಸಿತು. ಈ ಟೂರ್ನಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್‍‌ನಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಪಾಕಿಸ್ತಾನ ವಿರುದ್ಧ ಸೋಲು, ನ್ಯೂಜಿಲೆಂಡ್ ವಿರುದ್ಧದ ಸೋಲಿನಿಂದ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿತ್ತು. 

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಎರಡು ಟೆಸ್ಟ್ ಪಂದ್ಯಗಳ ಪೈಕಿ ಮೊದಲ ಟೆಸ್ಟ್ ಪಂದ್ಯದಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತವನ್ನು ವಿರಾಟ್ ಕೊಹ್ಲಿ ತ್ಯಜಿಸಿದ್ದಾರೆ. 2021ರ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸುದಾಗಿ ಘೋಷಿಸಿದ್ದರು. ಇನ್ನು 2021ರ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸಿತ್ತು. 

click me!