
ನವದೆಹಲಿ/ರಿಯೋ(ಮಾ.04): ಭಾರತದ ವಿಶ್ವಕಪ್ ವಿಜೇತ ನಾಯಕ, ದಿಗ್ಗಜ ಕ್ರಿಕೆಟಿಗ ಕಪಿಲ್ ದೇವ್ ಹಾಗೂ ಫುಟ್ಬಾಲ್ ದಂತಕಥೆ ಪೀಲೆ ಬುಧವಾರ ಕೋವಿಡ್ ಲಸಿಕೆ ಪಡೆದರು.
62 ವರ್ಷದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ದೆಹಲಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದರು. ಈ ಮೊದಲು ಟೀಂ ಇಂಡಿಯಾ ಹೆಡ್ ಕೋಚ್ ರವಿಶಾಸ್ತ್ರಿ ಕೂಡಾ ಕೋವಿಡ್ ಲಸಿಕೆ ಪಡೆದಿದ್ದರು. 58 ವರ್ಷದ ರವಿಶಾಸ್ತ್ರಿ ಅಹಮದಾಬಾದ್‌ನಲ್ಲಿ ಕೋವಿಡ್ ಲಸಿಕೆ ಪಡೆದಿದ್ದರು.
ಕೊರೋನಾ ಲಸಿಕೆ ಪಡೆದ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ!
ಇನ್ನು 80 ವರ್ಷದ ಫುಟ್ಬಾಲ್ ದಂತಕಥೆ ಪೀಲೆ ಬ್ರೆಜಿಲ್‌ನ ರಾಜಧಾನಿ ರಿಯೋ ಡಿ ಜನೈರೋದಲ್ಲಿ ಮೊದಲ ಡೋಸ್ ಲಸಿಕೆ ಪಡೆದು, ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.