
ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ವಿಶ್ಲೇಷಕ ರಾಬಿನ್ ಉತ್ತಪ್ಪ ಅವರ ಮೇಲೆ ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಮಾಡಿದ ಆರೋಪದಡಿ ಅವರನ್ನು ಬಂಧಿಸಲು ವಾರೆಂಟ್ ಜಾರಿಯಾಗಿದೆ. ಈಗಾಗಲೇ ಪಿಂಚಣಿ ಯೋಜನೆ ಕಚೇರಿಯ ಅಧಿಕಾರಿಗಳು ಆರೆಸ್ಟ್ ವಾರೆಂಟ್ ಜಾರಿ ಮಾಡಿ ಎಂದು ಇಲ್ಲಿನ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಪತ್ರ ಬರೆದಿದ್ದಾರೆ.
ಪಿಎಫ್‌ಓ ಪ್ರಾದೇಶಿಕ ಕಮಿಷನರ್ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಉತ್ತಪ್ಪ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಪತ್ರ ಬರೆದಿರುವುದು ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಸೆಂಚುರಿಸ್ ಲೈಫ್ ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಎನ್ನುವ ಖಾಸಗಿ ಕಂಪನಿಯನ್ನು ನಡೆಸುತ್ತಿದ್ದರು. ಇದೀಗ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಪಿಎಫ್ ಹಣವನ್ನು ಪಾವತಿಸದೇ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಉತ್ತಪ್ಪ ಅವರ ಮೇಲಿದೆ.
ನಿಯಮ ಉಲ್ಲಂಘನೆ, ಕಿಂಗ್ ಕೊಹ್ಲಿಗೆ ಶಾಕ್ ನೀಡಿದ ಬಿಬಿಎಂಪಿ!
ರಾಬಿನ್ ಉತ್ತಪ್ಪ ಅವರು ಸೆಂಚುರಿಸ್ ಲೈಫ್ ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳ ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿಕೊಂಡು ಉದ್ಯೋಗಿಗಳ ಖಾತೆಗೆ ಹಾಕದೇ ವಂಚಿಸಿದ್ದಾರೆ ಎನ್ನಲಾಗಿದೆ. ರಾಬಿನ್ ಉತ್ತಪ್ಪ ಅವರು ಬರೋಬ್ಬರಿ 23 ಲಕ್ಷ ರುಪಾಯಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಭಾರತದ ವಿಶ್ವ ಚೆಸ್ ಚಾಂಪಿಯನ್ ಗುಕೇಶ್ ಸಕ್ಸಸ್ ಹಿಂದಿನ ಗುಟ್ಟು ರಿವೀಲ್ ಆಯ್ತು!
ಡಿಸೆಂಬರ್ 04ರಂದು ವಾರೆಂಟ್ ಜಾರಿ ಮಾಡಿ ಪೊಲೀಸರಿಗೆ ರಾಬಿನ್ ಉತ್ತಪ್ಪ ಅವರನ್ನು ಅರೆಸ್ಟ್ ಮಾಡುವಂತೆ ಪಿಎಫ್‌ಓ ಪ್ರಾದೇಶಿಕ ಕಮಿಷನರ್ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪತ್ರ ಬರೆದಿದ್ದಾರೆ. ಈ ಸಂಬಂಧ ರಾಬಿನ್ ಉತ್ತಪ್ಪ ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.