
ನವದೆಹಲಿ(ಏ.08): ಕೊರೋನಾ ನಿಗ್ರಹಕ್ಕಾಗಿ ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹಾಗೂ ಟೆಸ್ಟ್ ಕ್ರಿಕೆಟಿಗ ಚೇತೇಶ್ವರ್ ಪೂಜಾರ ಮಂಗಳವಾರ ಕೇಂದ್ರಕ್ಕೆ ಹಣಕಾಸಿನ ನೆರವು ನೀಡಿದ್ದಾರೆ. ಆದರೆ ಈ ಇಬ್ಬರು ಎಷ್ಟು ದೇಣಿಗೆ ನೀಡಿದ್ದೇವೆ ಎಂದು ಮಾಹಿತಿ ಬಹಿರಂಗ ಪಡಿಸಿರಲಿಲ್ಲ.
ಗವಾಸ್ಕರ್ ಅವರು PM Cares ನಿಧಿಗೆ 35 ಲಕ್ಷ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ 24 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ ಎಂದು ಮುಂಬೈ ತಂಡದ ಮಾಜಿ ನಾಯಕ ಅಮೋಲ್ ಮುಜುಮ್ದಾರ್ ಟ್ವೀಟ್ ಮಾಡಿದ್ದಾರೆ.
ಇನ್ನು ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕೂಡಾ ದೇಣಿಗೆ ನೀಡುವ ಮೂಲಕ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸುರೇಶ್ ರೈನಾ, ಅಜಿಂಕ್ಯ ರಹಾನೆ ಸಾಲಿಗೆ ಸೇರಿಕೊಂಡಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳು, ಹಾಗೂ ಪೊಲೀಸರಿಗೆ ಧನ್ಯವಾದವನ್ನು ಅರ್ಪಿಸಿದ್ದಾರೆ.
ಕೊರೋನಾ ಸಂಕಷ್ಟ: PM CARES Fund ಗೆ 50 ಲಕ್ಷ ರುಪಾಯಿ ದೇಣಿಗೆ ನೀಡಿದ ಯುವರಾಜ್ ಸಿಂಗ್..!
ನನ್ನ ಕುಟುಂಬ ಹಾಗೂ ನಾನು PM Cares ಫಂಡ್ ಹಾಗೂ ಗುಜರಾತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ನನ್ನ ಕೈಲಾದ ದೇಣಿಗೆ ನೀಡಿದ್ದೇನೆ. ನೀವೂ ದೇಣಿಗೆ ನೀಡುತ್ತೀರಿ ಎಂದು ಭಾವಿಸುತ್ತೇನೆ. ಪ್ರತಿಯೊಬ್ಬರ ಕೊಡುಗೆಯೂ ಮಹತ್ವದ್ದಾಗುತ್ತದೆ. ಇಂತಹ ಪರಿಸ್ಥಿತಿಯಿಂದ ಹೊರಬರಲು ನಾವೆಲ್ಲಾ ನಮ್ಮ ಕೈಲಾದ ಸಹಾಯವನ್ನು ಮಾಡೋಣ ಎಂದು ಚೇತೇಶ್ವರ್ ಪೂಜಾರ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.