
ನವದೆಹಲಿ(ಡಿ.22): ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ (Team India), ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು ಡಿಸೆಂಬರ್ 26ರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಬಾರಿ ಭಾರತ ತಂಡವು ಹರಿಣಗಳ ನಾಡಿನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಕನಸು ಕಾಣುತ್ತಿದೆ. ಭಾರತ ತಂಡ ಇದುವರೆಗೂ ಹರಿಣಗಳ ನಾಡಿನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಲು ಯಶಸ್ವಿಯಾಗಿಲ್ಲ. ಈ ಮೊದಲು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನೆಲದಲ್ಲಿ ಗೆಲುವಿನ ಕೇಕೆ ಹಾಕಿರುವ ವಿರಾಟ್ ಕೊಹ್ಲಿ (Virat Kohli) ಪಡೆ, ಇದೀಗ ಹರಿಣಗಳ ಬೇಟೆಗೆ ಸಜ್ಜಾಗಿದೆ.
ದಕ್ಷಿಣ ಆಫ್ರಿಕಾ ಪಿಚ್ ಯಾವಾಗಲೂ ವೇಗಿಗಳಿಗೆ ನೆರವು ನೀಡುತ್ತದೆ. ಎರಡು ತಂಡಗಳು ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿದ್ದು, ವೇಗದ ಪಿಚ್‌ನಲ್ಲಿ ಅಬ್ಬರಿಸಲು ಎದುರು ಉಭಯ ತಂಡದ ಬೌಲರ್‌ಗಳು ಎದುರು ನೋಡುತ್ತಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲೇ ಭಾರತ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah), ಇದೀಗ ಟೀಂ ಇಂಡಿಯಾ ಮುಂಚೂಣಿ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಬುಮ್ರಾ, ರೆಡ್ ಬಾಲ್ ಕ್ರಿಕೆಟ್‌ನಲ್ಲೂ ಭಾರತದ ನಂ.1 ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಬುಮ್ರಾ ಪರ ಬ್ಯಾಟ್ ಬೀಸಿದ ಜಹೀರ್ ಖಾನ್:
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾ ಭಾರತದ ಪರ ಮಿಂಚಿನ ಪ್ರದರ್ಶನ ತೋರಿಲಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ (Zaheer Khan) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರೊಬ್ಬ ವಿಶ್ವದರ್ಜೆಯ ಬೌಲರ್ ಎಂದು ಜಹೀರ್ ಖಾನ್ ಬಣ್ಣಿಸಿದ್ದಾರೆ. ಹಿಂದುಸ್ತಾನ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ, ಜಸ್ಪ್ರೀತ್ ಬುಮ್ರಾ ವಿಶ್ವದರ್ಜೆಯ ಬೌಲರ್. ಅವರು ತಮ್ಮ ಕರಾರುವಕ್ಕಾದ ವೇಗದ ಬೌಲಿಂಗ್ ದಾಳಿಯ ಮೂಲಕ ಎದುರಾಳಿ ತಂಡದ ಬ್ಯಾಟರ್‌ಗಳನ್ನು ತಬ್ಬಿಬ್ಬುಗೊಳಿಸುತ್ತಾರೆ ಎಂದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ದದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಎದುರಾಳಿ ತಂಡದ ಎಲ್ಲಾ 20 ಕಬಳಿಸುವಷ್ಟು ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಜಾಕ್ ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಸರಣಿಯಲ್ಲಿ ಬುಮ್ರಾ ಜತೆ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಇಶಾಂತ್ ಶರ್ಮಾಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಬೇಕು ಎಂದಿದ್ದಾರೆ.
SA vs IND: ಭಾರತ ಎದುರಿನ ಟೆಸ್ಟ್ ಸರಣಿಗೂ ದಕ್ಷಿಣ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್..!
ಪ್ರತಿ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಬೌಲರ್‌ಗಳು ಎದುರಾಳಿ ಪಡೆಯ 20 ವಿಕೆಟ್ ಕಬಳಿಸುವ ಸಾಮರ್ಥ್ಯ ಹೊಂದಿದ್ದಾರೆ. ವಿಶ್ವದ ಬೇರೆ ಬೇರೆ ಸ್ಟೇಡಿಯಂಗಳಲ್ಲಿ ಭಾರತೀಯ ಬೌಲರ್‌ಗಳು ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ ಸಮತೋಲನದಿಂದ ಕೂಡಿದ ಬೌಲಿಂಗ್ ಪಡೆಯಿದೆ. ವೇಗದ ಬೌಲಿಂಗ್‌ನಲ್ಲೇ ಸಾಕಷ್ಟು ವೈವಿದ್ಯತೆ ಇರುವುದು ಟೀಂ ಇಂಡಿಯಾ ಪಾಲಿಗೆ ವರದಾನವಾಗಲಿದೆ ಎಂದು 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ಜಹೀರ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.
ನೀಳಕಾಯದ ವೇಗಿಯಾದ ಇಶಾಂತ್ ಶರ್ಮಾ (Ishant Sharma) ಅವರಿಗೆ ಬೌನ್ಸ್ ಎಸೆಯಲು ಆಫ್ರಿಕಾದ ಪಿಚ್ ಪೂರಕವಾಗಿದೆ. ಇನ್ನು ಮೊಹಮ್ಮದ್ ಶಮಿ (Mohammed Shami) ಇನ್‌ಸ್ವಿಂಗ್ ಹಾಗೂ ಆಪ್ ಸ್ವಿಂಗ್ ಮೂಲಕ ಆಫ್ರಿಕಾ ಬ್ಯಾಟರ್‌ಗಳನ್ನು ಕಾಡಲಿದ್ದಾರೆ. ವೇಗದ ಬೌಲರ್‌ಗಳ ಕೊರತೆ ಈಗ ಭಾರತ ತಂಡಕ್ಕಿಲ್ಲ ಎಂದು ಜಹೀರ್ ಖಾನ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.