
ತಿರುವನಂತಪುರಂ(ಜೂ.10): ಕೇರಳ ರಣಜಿ ಟ್ರೋಫಿಯ ಮಾಜಿ ಕ್ರಿಕೆಟಿಗ ಕೆ. ಜಯಮೋಹನ್ ಥಂಪಿ(64) ಇಲ್ಲಿನ ಮನಕ್ಕಾಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ತಂದೆಯನ್ನು ಹತ್ಯೆ ಮಾಡಿದ ಶಂಕೆಯಡಿ ಮಗ ಅಶ್ವಿನ್ ಥಂಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೆ. ಜಯಮೋಹನ್ 1982ರಿಂದ 84ರ ಅವಧಿಯಲ್ಲಿ ಕೇರಳ ಪರ 6 ರಣಜಿ ಪಂದ್ಯಗಳನ್ನು ಆಡಿದ್ದು, 114 ರನ್ ಬಾರಿಸಿದ್ದರು. ಕೇರಳ ತಂಡದಲ್ಲಿ ಜಯಮೋಹನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು. ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ತ್ರಾವಂಕೂರುವಿನಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು, ಜೊತೆಗೆ 15 ವರ್ಷಗಳ ಕಾಲ ಈ ಸಂಸ್ಥೆಯ ಪರ ಕ್ರಿಕೆಟ್ ಆಡಿದ್ದರು.
ಮಾಗಡಿ: ನೀರಿನ ತೊಟ್ಟಿಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ
ಜಯಮೋಹನ್ ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಸ್ಥಳೀಯ ಮೆಡಿಕಲ್ ಕಾಲೇಜ್‌ಗೆ ಪೋಸ್ಟ್ ಮಾರ್ಟಮ್ ಮಾಡಲು ರವಾನಿಸಿದ್ದಾರೆ.
ಮಾಜಿ ಕ್ರಿಕೆಟಿಗ ಜಯಮೋಹನ್ ಪತ್ನಿ ಅನಿತಾ ಕಳೆದೆರಡು ವರ್ಷಗಳ ಹಿಂದಷ್ಟೇ ಮೃತಪಟ್ಟಿದ್ದರು. ಬಳಿಕ ಮಗ ಅಶ್ವಿನ್ ಜತೆ ಮನೆಯಲ್ಲಿ ವಾಸವಾಗಿದ್ದರು. ಈಗ ಪೊಲೀಸರು ಮಗ ಅಶ್ವಿನ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.