
ಇಸ್ಲಾಮಾಬಾದ್(ಸೆ.01): ತಾಲಿಬಾನಿಗಳು ಬದಲಾಗಿದ್ದಾರೆ. ಸಕಾರಾತ್ಮಕವಾಗಿ ಅಧಿಕಾರ ನಡೆಸಲಿದ್ದಾರೆ. ಇದು ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ಆಶಾದಾಯಕ ಬೆಳವಣಿಗೆಯಾಗಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ, ಉಗ್ರರನ್ನು ಹೊಗಳಿದ್ದಾರೆ. ಅಫ್ರಿದಿಯ ಈ ನಡೆ ವ್ಯಾಪಕ ಟೀಕೆಗೆ ಗುರಿಯಾಗಿದೆ.
‘ತಾಲಿಬಾನಿಗಳು ಬದಲಾವಣೆಯೊಂದಿಗೆ ಬಂದಿದ್ದಾರೆ. ಸ್ತ್ರೀಯರು ಉದ್ಯೋಗಕ್ಕೆ ಹೋಗಲು ಅವರು ಅವಕಾಶ ನೀಡಲಿದ್ದಾರೆ. ತಾಲಿಬಾನ್‌ಗೆ ಕ್ರಿಕೆಟ್ ತುಂಬಾ ಇಷ್ಟ. ಹಾಗಾಗಿ ಅಫ್ಘಾನಿಸ್ತಾನ ಪುರುಷ ಕ್ರಿಕೆಟ್ ತಂಡಕ್ಕೆ ಹೆಚ್ಚಿನ ಅನುಕೂಲ ದೊರೆಯಲಿದೆ. ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಸರಣಿ ನಡೆಸಲು ತಾಲಿಬಾನಿಗಳು ಅವಕಾಶ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಆಫ್ಘನ್‌ನಲ್ಲಿ ಇರಾನ್ ಮಾದರಿ ಸರ್ಕಾರ?
ಶಾಹಿದ್ ಅಫ್ರಿದಿಯವರ ಈ ಹೇಳಿಕೆ ಜಾಗತಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಫ್ರಿದಿ ತಾಲಿಬಾನ್ ಪ್ರೀಮಿಯರ್ ಲೀಗ್ ಆಯೋಜಿಸಲಿದ್ದಾರೆ ಎಂದರೆ, ಮತ್ತೊಬ್ಬರು ತಾಲಿಬಾನ್ ಬೆಂಬಲಿಸಿದ ನಿಮಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.