
ನವದೆಹಲಿ(ಜ.02): ಜಾಹೀರಾತು ಲೋಕದ ಡಾರ್ಲಿಂಗ್ ಎಂದೇ ಕರೆಸಿಕೊಳ್ಳುವ ಭಾರತದ ಮಾಜಿ ಕ್ರಿಕೆಟಿಗ ಎಂ.ಎಸ್.ಧೋನಿ ಹಲವಾರು ಬ್ರ್ಯಾಂಡ್‌ಗಳಿಗೆ ಈಗಲೂ ರಾಯಭಾರಿಯಾಗಿದ್ದಾರೆ.
ಇದೀಗ ಅವರ ಪುತ್ರಿ ಝಿವಾ ಸಹ ಜಾಹೀರಾತು ಲೋಕಕ್ಕೆ ಕಾಲಿಟ್ಟಿದ್ದು, ಓರಿಯೋ ಬಿಸ್ಕೆಟ್‌ನ ಜಾಹೀರಾತಿನಲ್ಲಿ ಧೋನಿ ಜೊತೆಯಲ್ಲೇ ಕಾಣಿಸಿಕೊಳ್ಳಲಿದ್ದಾಳೆ. ಈ ವಿಚಾರವನ್ನು ಬಿಸ್ಕೆಟ್ ಸಂಸ್ಥೆ ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆ ಮೂಲಕ ಬಹಿರಂಗಪಡಿಸಿದೆ.
ನೋಡಿ ಯಾರು ಆಟವಾಡಲು ಫೀಲ್ಡ್‌ಗೆ ಬಂದಿದ್ದಾರೆಂದು ಎಂಬ ಫೋಸ್ಟರ್ ಓರಿಯೋ ಬಿಸ್ಕೆಟ್ ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಇದೇ ಮೊದಲ ಬಾರಿಗೆ ಧೋನಿ ಮಗಳ ಜತೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲು ಝೀವಾಗೆ ನೀಡಿರುವ ಸಂಭಾವನೆ ಎಷ್ಟು ಎನ್ನುವುದನ್ನು ಸಂಸ್ಥೆ ಬಹಿರಂಗಪಡಿಸಿಲ್ಲ.
2020ರಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದ ಟಾಪ್ 10 ಕ್ರಿಕೆಟಿಗರಿವರು
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ 35 ವರ್ಷದ ಮಹೇಂದ್ರ ಸಿಂಗ್ ಧೋನಿ, 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಇನ್ನು ಕೆಲವೇ ತಿಂಗಳುಗಳಲ್ಲಿ ಆರಂಭವಾಗಲಿರುವ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.