
ಅಮರಾವತಿ(ಜು.06): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೋಮವಾರ(ಜು.05) ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. ಆಂಧ್ರಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಕ್ರೀಡಾ ವಿಶ್ವವಿದ್ಯಾಲಯ ಹಾಗೂ ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿ ಬಗ್ಗೆ ಜಗನ್ ಹಾಗೂ ಕುಂಬ್ಳೆ ಚರ್ಚೆ ನಡೆಸಿದರು ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.
ಆಂಧ್ರಪ್ರದೇಶದಲ್ಲಿ ಸ್ಥಾಪನೆಯಾಗಲಿರುವ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಅನಿಲ್ ಕುಂಬ್ಳೆ, ಸಿಎಂ ಜಗನ್ ಮೋಹನ್ ರೆಡ್ಡಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆಂಧ್ರದಲ್ಲಿ ಕ್ರೀಡಾ ಪರಿಕರನ್ನು ಉತ್ಫಾದನೆ ಮಾಡುವ ಪ್ಯಾಕ್ಟರಿಗಳನ್ನು ಸ್ಥಾಪಿಸುವಂತೆ ಮಾಜಿ ಕ್ರಿಕೆಟಿಗ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಎಲ್ಲಾ ರೀತಿಯ ಕ್ರೀಡಾ ಉತ್ಫನ್ನಗಳನ್ನು ತಯಾರಿಸುವ ಪ್ಯಾಕ್ಟರಿಗಳು ಹೆಚ್ಚಿನದಾಗಿ ಮೀರತ್ ಹಾಗೂ ಜಲಂದರ್ ನಗರದಲ್ಲಿವೆ. ಒಂದು ವೇಳೆ ಇಲ್ಲಿ ಅಂತಹ ಕಾರ್ಖಾನೆಗಳನ್ನು ಸ್ಥಾಪಿಸಿದರೆ ಹೆಚ್ಚು ಪ್ರಯೋಜನವಾಗಲಿದೆ ಎಂದು ಆಂಧ್ರ ಸಿಎಂಗೆ ಕುಂಬ್ಳೆ ಕಿವಿಮಾತು ಹೇಳಿದ್ದಾರೆ.
ಶಿಖರ್ ಧವನ್ ಪಡೆಯನ್ನು 'ಭಾರತ ಬಿ' ಟೀಂ ಎಂದ ರಣತುಂಗ; ನೆಟ್ಟಿಗರು ಗರಂ
ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಅನಿಲ್ ಕುಂಬ್ಳೆ ಭಾರತ ಪರ 132 ಟೆಸ್ಟ್ ಹಾಗೂ 271 ಪಂದ್ಯಗಳನ್ನಾಡಿದ್ದು ಕ್ರಮವಾಗಿ 619 ಹಾಗೂ 337 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತ ಪರ ಈ ಎರಡೂ ಮಾದರಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನ್ನುವ ದಾಖಲೆ ಬರೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.