1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು.
ಬೆಂಗಳೂರು: ಕರ್ನಾಟಕ ಮೂಲದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್, ಇಂದು ಕೊನೆಯುಸಿರೆಳೆದಿದ್ದಾರೆ. 52 ವರ್ಷದ ಡೇವಿಡ್ ಜಾನ್ಸನ್, ಮನೆಯ ಮಹಡಿಯಿಂದ ಜಾರಿ ಬಿದ್ದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗುತ್ತಿದೆ.
ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿರುವ ಕನಕಶ್ರೀ ಲೇಔಟ್‌ನಲ್ಲಿರುವ SLV ಪ್ಯಾರಡೈಸ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಂದು ಬೆಳಗ್ಗೆ 11.15ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬಸ್ಥರು ಮನೆಯಲ್ಲಿರುವಾಗಲೇ ಈ ಘಟನೆ ನಡೆದಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿನೀಡಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಜಾನ್ಸನ್ ಅವರು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಕೊತ್ತನೂರು ಪೊಲೀಸರು ಈ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಇನ್ನು ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ವಲಯದಿಂದ ಸಂತಾಪಗಳು ವ್ಯಕ್ತವಾಗಿವೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ಕ್ರಿಕೆಟಿಗನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
Saddened to hear the passing of my cricketing colleague David Johnson. Heartfelt condolences to his family. Gone too soon “ Benny”!
— Anil Kumble (@anilkumble1074)1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು. 1996ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಡೇವಿಡ್ ಜಾನ್ಸನ್, ಆಸ್ಟ್ರೇಲಿಯಾ ತಂಡವು ಭಾರತ ಪ್ರವಾಸ ಮಾಡಿದ್ದಾಗ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಆ ಸರಣಿಯಲ್ಲಿ ಡೇವಿಡ್ ಜಾನ್ಸನ್ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
David Johnson, a former fast bowler who played two Tests in 1996, is no more. He passed away today in Bangalore. He was 52. pic.twitter.com/WuRi7xzq6U
— Vijay Lokapally 🇮🇳 (@vijaylokapally)ಇನ್ನು ಡೇವಿಡ್ ಜಾನ್ಸನ್ ಒಟ್ಟು 39 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನಾಡಿ 125 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಕೆಳಕ್ರಮಾಂಕದಲ್ಲಿ ಉಪಯುಕ್ತ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದ ಜಾನ್ಸನ್ 437 ರನ್ ಬಾರಿಸಿದ್ದಾರೆ.