ವೇಡ್-ಮ್ಯಾಕ್ಸಿ ಅಬ್ಬರ: ಭಾರತಕ್ಕೆ ಸವಾಲಿನ ಟಾರ್ಗೆಟ್ ನೀಡಿದ ಆಸ್ಟ್ರೇಲಿಯಾ

Published : Dec 08, 2020, 03:35 PM IST
ವೇಡ್-ಮ್ಯಾಕ್ಸಿ ಅಬ್ಬರ: ಭಾರತಕ್ಕೆ ಸವಾಲಿನ ಟಾರ್ಗೆಟ್ ನೀಡಿದ ಆಸ್ಟ್ರೇಲಿಯಾ

ಸಾರಾಂಶ

ಕಳಪೆ ಕ್ಷೇತ್ರರಕ್ಷಣೆಯ ಲಾಭ ಪಡೆದ ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಸಮಯೋಚಿತ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯದಲ್ಲಿ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ಡಿ.08): ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ಮ್ಯಾಥ್ಯೂ ವೇಡ್(80) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್(54) ಆಕರ್ಷಕ ಅರ್ಧಶತಕಗಳ ನೆರವಿನಿಂದ 5 ವಿಕೆಟ್ ಕಳೆದುಕೊಂಡು 186 ರನ್ ಬಾರಿಸಿದ್ದು, ಭಾರತಕ್ಕೆ ಸವಾಲಿನ ಗುರಿ ನೀಡಿದೆ.

ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆತಿಥೇಯ ಆಸ್ಟ್ರೇಲಿಯಾ ಆರಂಭದಲ್ಲೇ ನಾಯಕ ಆ್ಯರೋನ್ ಫಿಂಚ್(0) ವಿಕೆಟ್ ಕಳೆದುಕೊಂಡಿತು. ಆ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ಮ್ಯಾಥ್ಯೂ ವೇಡ್ ಹಾಗೂ ಸ್ಟೀವ್ ಸ್ಮಿತ್ ಜೋಡಿ ಎರಡನೇ ವಿಕೆಟ್‌ಗೆ 65 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ವಾಷಿಂಗ್ಟನ್ ಸುಂದರ್ ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಸ್ಟೀವ್ ಸ್ಮಿತ್ 24 ರನ್ ಬಾರಿಸಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. 

ರನ್‌ ವೇಗಕ್ಕೆ ಚುರುಕು ಮುಟ್ಟಿಸಿದ ವೇಡ್‌-ಮ್ಯಾಕ್ಸಿ: 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಮ್ಯಾಥ್ಯೂ ವೇಡ್‌ ಮೂರನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಬೌಲರ್‌ಗಳನ್ನು ಕಾಡಿದರು. ಮ್ಯಾಕ್ಸ್‌ವೆಲ್‌ ಜತೆ ಮೂರನೇ ವಿಕೆಟ್‌ಗೆ ವೇಡ್ 90 ರನ್‌ಗಳ ಜತೆಯಾಟ ನಿಭಾಯಿಸಿದರು. ವೇಡ್ ಕೇವಲ 53 ಎಸೆತಗಳಲ್ಲಿ 7 ಬೌಂಡರಿ ಹಾಗೂ 2  ಸಿಕ್ಸರ್‌ಗಳ ನೆರವಿನಿಂದ 80 ರನ್ ಬಾರಿಸಿ ಶಾದೂಲ್‌ ಠಾಕೂರ್‌ಗೆ ವಿಕೆಟ್‌ ಒಪ್ಪಿಸಿದರು. 

ಕೊನೆಯ ಓವರ್‌ನಲ್ಲಿ ಟಿ. ನಟರಾಜನ್ ಎಸೆತದಲ್ಲಿ ಕ್ಲೀನ್‌ ಆಗಿ ಪೆವಿಲಿಯನ್ ಸೇರಿದರು. ಮ್ಯಾಕ್ಸ್‌ವೆಲ್ ವಿಕೆಟ್‌ ಒಪ್ಪಿಸುವ ಮುನ್ನ 36 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 54 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

ಭಾರತ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಹಾಗೂ ಟಿ ನಟರಾಜನ್ ತಲಾ ಒಂದೊಂದು ವಿಕೆಟ್ ಪಡೆದರು. 

ಆಸ್ಟ್ರೇಲಿಯಾ: 186/5

ಮ್ಯಾಥ್ಯೂ ವೇಡ್: 80

ವಾಷಿಂಗ್ಟನ್ ಸುಂದರ್: 34/2
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2000ರ U19 ವಿಶ್ವಕಪ್ ಹೀರೋ: ಕ್ರಿಕೆಟ್ ಇತಿಹಾಸದ 'ದಿ ಬೆಸ್ಟ್' ಆಲ್‌ರೌಂಡರ್ ಆಗಬೇಕಿದ್ದವನ ದುರಂತ ಕಥೆ!
ಪಾಕಿಸ್ತಾನ ಕೇವಲ 55 ರನ್‌ಗೆ ಆಲೌಟ್, 7 ವಿಕೆಟ್ ಗೆಲುವು ದಾಖಲಿಸಿ ದಾಖಲೆ ಬರೆದ ಭಾರತ ಮಹಿಳಾ ತಂಡ