IPL 2022: ಐಪಿಎಲ್ ತೊರೆದು ಗುಜರಾತ್ ಟೈಟಾನ್ಸ್ ಫ್ಯಾನ್ಸ್‌ಗೆ ಭಾವನಾತ್ಮಕ ಪತ್ರ ಬರೆದ ಜೇಸನ್ ರಾಯ್

By Suvarna News  |  First Published Mar 1, 2022, 6:43 PM IST

* 15ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಆರಂಭಕ್ಕೂ ಮುನ್ನ ಗುಜರಾತ್ ಟೈಟಾನ್ಸ್‌ಗೆ ಶಾಕ್

* ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಪಾಲ್ಗೊಳ್ಳದಿರಲು ಜೇಸನ್ ರಾಯ್ ನಿರ್ಧಾರ

* ತಾವು ಟೂರ್ನಿಯಿಂದ ಹಿಂದೆ ಸರಿಯುತ್ತಿರುವುದೇಕೆ ಎನ್ನುವ ಮಾಹಿತಿ ಬಿಚ್ಚಿಟ್ಟ ರಾಯ್


ಬೆಂಗಳೂರು: 2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ನೂತನ ಐಪಿಎಲ್‌ ತಂಡವಾದ ಗುಜರಾತ್ ಟೈಟಾನ್ಸ್ (Gujarat Titans ) ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಸ್ಪೋಟಕ ಆರಂಭಿಕ ಬ್ಯಾಟರ್‌ ಜೇಸನ್‌ ರಾಯ್ (Jason Roy) ಈ ಬಾರಿಯ ಐಪಿಎಲ್‌ ಟೂರ್ನಿಯಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಇದರ ಜತೆಗೆ ತಾವು ಯಾಕೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನುವುದನ್ನು ಭಾವನಾತ್ಮಕ ಪತ್ರದ ಮೂಲಕ ಪ್ರಕಟಿಸಿದ್ದಾರೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ (IPL Mega Auction) ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಇಂಗ್ಲೆಂಡ್ ಸ್ಪೋಟಕ ಆರಂಭಿಕ ಬ್ಯಾಟರ್‌ ಜೇಸನ್ ರಾಯ್ ಅವರನ್ನು ಮೂಲ ಬೆಲೆ 2 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಜೇಸನ್‌ ರಾಯ್ ಇತ್ತೀಚೆಗಷ್ಟೇ ಮುಕ್ತಾಯವಾದ 2022ನೇ ಸಾಲಿನ ಪಾಕಿಸ್ತಾನ ಸೂಪರ್ ಲೀಗ್ (Pakistan Super League) ಟೂರ್ನಿಯಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಪಿಎಸ್‌ಎಲ್ ಟೂರ್ನಿಯಲ್ಲಿ ಜೇಸನ್ ರಾಯ್ ಕೇವಲ 6 ಪಂದ್ಯಗಳನ್ನಾಡಿ 50.50 ಬ್ಯಾಟಿಂಗ್ ಸರಾಸರಿಯಲ್ಲಿ 303 ರನ್ ಬಾರಿಸಿದ್ದರು. ಜೇಸನ್‌ ರಾಯ್ ಒಂದು ಶತಕ ಹಾಗೂ ಎರಡು ಶತಕ ಬಾರಿಸಿ ಗಮನ ಸೆಳೆದಿದ್ದರು.  

Tap to resize

Latest Videos

ಇದೆಲ್ಲದರ ಹೊರತಾಗಿ, ತಮ್ಮ ಕುಟುಂಬದೊಟ್ಟಿಗೆ ಕೆಲವು ಅಮೂಲ್ಯ ಸಮಯವನ್ನು ಕಳೆಯುವ ಉದ್ದೇಶದಿಂದ ಜೇಸನ್ ರಾಯ್, ಈ ಬಾರಿಯ ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದಾರೆ. 31 ವರ್ಷದ ಜೇಸನ್ ರಾಯ್ ಇಂದು(ಮಾ.1) ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲು ಕಾರಣವೇನು ಎಂದು ತಿಳಿಸಿದ್ದಾರೆ ಹಾಗೂ ತಮ್ಮ ಮೇಲೆ ವಿಶ್ವಾಸವಿಟ್ಟು ಖರೀದಿಸಿದ ಗುಜರಾತ್ ಟೈಟಾನ್ಸ್ ಆಡಳಿತ ಮಂಡಳಿಗೆ ಹಾಗೂ ನಾಯಕ ಹಾರ್ದಿಕ್ ಪಾಂಡ್ಯಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

IPL 2022. pic.twitter.com/fZ0LofBgSE

— Jason Roy (@JasonRoy20)

ಹಾಯ್, ಪ್ರಮುಖವಾಗಿ ಗುಜರಾತ್ ಟೈಟಾನ್ಸ್ ಅಭಿಮಾನಿಗಳೇ ಹಾಗೂ ತಂಡದ ಆಟಗಾರರೇ, ತುಂಬಾ ಆಲೋಚನೆ ಮಾಡಿ, ಭಾರವಾದ ಹೃದಯದಿಂದ ನಾನು ಈ ಬಾರಿಯ ಟೂರ್ನಿಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಹರಾಜಿನಲ್ಲಿ ನನ್ನನ್ನು ಆಯ್ದುಕೊಂಡಿದ್ದಕ್ಕೆ ತಂಡದ ಮ್ಯಾನೇಜ್‌ಮೆಂಟ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. 

IPL 2022: ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಗುಜರಾತ್‌ ಟೈಟಾನ್ಸ್‌ಗೆ ಬಿಗ್ ಶಾಕ್..!

ಆದರೆ ನಾನು ಕುಟುಂಬದೊಟ್ಟಿಗೆ ಕೆಲವು ಅಮೂಲ್ಯ ಸಮಯವನ್ನು ಕಳೆಯಲು ಇದು ಸರಿಯಾದ ತೀರ್ಮಾನ ಎಂದು ನನಗನಿಸಿದೆ. ಯಾಕೆಂದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ಪಂದ್ಯಗಳನ್ನು ಆಡಬೇಕಿದೆ. ಆದರೆ ನಾನು ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಹಾರೈಸುತ್ತೇನೆ. ನನ್ನ ನಿರ್ಧಾರವನ್ನು ಬೆಂಬಲಿಸುವ ಎಲ್ಲರಿಗೂ ಧನ್ಯವಾದಗಳು ಎಂದು ಜೇಸನ್ ರಾಯ್ ಟ್ವೀಟ್ ಮಾಡಿದ್ದಾರೆ.

ಬಹುನಿರೀಕ್ಷಿತ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 26ರಿಂದ ಆರಂಭವಾಗಲಿದೆ. ಈ ಬಾರಿಯ ಐಪಿಎಲ್‌ ಟೂರ್ನಿಯು ಮಹಾರಾಷ್ಟ್ರದಲ್ಲಿನ 4 ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮುಂಬೈನಲ್ಲಿರುವ ವಾಂಖೆಡೆ ಮೈದಾನ, ಡಿ.ವೈ. ಪಾಟೀಲ್ ಮೈದಾನ ಹಾಗೂ ಬ್ರಬೋರ್ನ್‌ ಮೈದಾನದಲ್ಲಿ ಒಟ್ಟು 55 ಐಪಿಎಲ್ ಲೀಗ್ ಪಂದ್ಯಗಳು ನಡೆದರೆ, ಇನ್ನುಳಿದ 15 ಲೀಗ್ ಪಂದ್ಯಗಳಿಗೆ ಪುಣೆ ಮೈದಾನ ಆತಿಥ್ಯವನ್ನು ವಹಿಸಲಿದೆ. ಇನ್ನು ಪ್ಲೇ ಆಫ್‌ ಪಂದ್ಯಗಳು ಎಲ್ಲಿ ನಡೆಯಲಿದೆ ಎನ್ನುವುದರ ಬಗ್ಗೆ ಬಿಸಿಸಿಐ ಇನ್ನೂ ತನ್ನ ಅಧಿಕೃತ ತೀರ್ಮಾನವನ್ನು ಪ್ರಕಟಿಸಿಲ್ಲ.

click me!