ಗುಜರಾತ್ ವಿರುದ್ಧ ಆರ್‌ಸಿಬಿ ಟಾಸ್ ಸೋತಿದ್ದೇ ಒಳ್ಳೇದಾಯ್ತಾ? ಪ್ಲೇಯಿಂಗ್ 11 ಬದಲಾವಣೆ ಏನು?

Published : Apr 02, 2025, 07:19 PM ISTUpdated : Apr 02, 2025, 07:26 PM IST
ಗುಜರಾತ್ ವಿರುದ್ಧ ಆರ್‌ಸಿಬಿ ಟಾಸ್ ಸೋತಿದ್ದೇ ಒಳ್ಳೇದಾಯ್ತಾ? ಪ್ಲೇಯಿಂಗ್ 11 ಬದಲಾವಣೆ ಏನು?

ಸಾರಾಂಶ

ಗುಜರಾತ್ ಟೈಟಾನ್ಸ್ ವಿರುದ್ದ ಆರ್‌ಸಿಬಿ ಟಾಸ್ ಸೋತಿದೆ. ಆದರೆ ಇದರಿಂದ ತಂಡಕ್ಕಿದೆಯಾ ಲಾಭ? ಪ್ಲೇಯಿಂಗ್ 11ನಲ್ಲಿ ಯಾರು ಸ್ಥಾನ ಪಡೆದಿದ್ದಾರೆ?

ಬೆಂಗಳೂರು(ಏ.02) ಐಪಿಎಲ್ ಟೂರ್ನಿ ಇತಿಹಾಸದಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಆತ್ಮವಿಶ್ವಾಸ ಹೆಚ್ಚಿಸಿದೆ. ಆಡಿದ 2 ಪಂದ್ಯ ಗೆದ್ದುಕೊಂಡು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇದೀಗ ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಬೇಕಿದೆ. ಆದರೆ ಈ ಟಾಸ್ ಸೋಲು ಆರ್‌ಸಿಬಿ ತಂಡಕ್ಕೆ ವರವಾಗಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದಕ್ಕೆ ಕೆಲ ಕಾರಣಗಳೂ ಇದೆ. 

ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ ಪಿಚ್ ಎಂದೇ ಗುರುತಿಸಿಕೊಂಡಿದೆ. ಇಲ್ಲಿ ಆರ್‌ಸಿಬಿ ಚೇಸಿಂಗ್ ಮಾಡಿ ಯಶಸ್ಸು ಸಾಧಸಿದೆ ನಿಜ. ಆದರೆ ಈ ಬಾರಿ ತಂಡ ಯಾವುದೇ ಸವಾಲು ಎದುರಿಸಲು ಸಿದ್ಧವಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಅತೀ ದೊಡ್ಡ ಟಾರ್ಗೆಟ್ ಸೆಟ್ ಮಾಡಲು ಮೊದಲು ಬ್ಯಾಟಿಂಗ್ ನರೆವಾಗಿಲಿದೆ. ಕಳೆದ 2 ಪಂದ್ಯದಲ್ಲಿ ಆರ್‌ಸಿಬಿ ಎಲ್ಲಾ ವಿಭಾಗದಲ್ಲಿ ಅಬ್ಬರಿಸಿದೆ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಮೊತ್ತ ಸಿಡಿಸಲು ಆರ್‌ಸಿಬಿಗೆ ಯಾವುದೇ ಆತಂಕ ಎದುರಾಗುವುದಿಲ್ಲ. ಈ ಮೂಲಕ ಎದುರಾಳಿಯನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿ ಹ್ಯಾಟ್ರಿಕ್ ಗೆಲುವಿಗೆ ಈ ನಿರ್ಧಾರ ನೆರವಾಗಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಂದು ಅಪರೂಪದ ದಾಖಲೆ ಬರೆಯಲು ವಿರಾಟ್ ಕೊಹ್ಲಿ ರೆಡಿ

ಮೊದಲು ಬ್ಯಾಟಿಂಗ್ ಮಾಡಿ ಅಬ್ಬರ
ಸಿಎಸ್‌ಕೆ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿ ಅಬ್ಬರಿಸಿತ್ತು. 196 ರನ್ ಸಿಡಿಸಿ ಸಿಎಸ್‌ಕೆಗ ಸೋಲಿನ ಶಾಕ್ ನೀಡಿತ್ತು. ಇದಕ್ಕೂ ಮೊದಲು ಕೆಕೆಆರ್ ವಿರುದ್ದ ಆರ್‌ಸಿಬಿ ಚೇಸಿಂಗ್ ಮಾಡಿತ್ತು. ಹೀಗಾಗಿ ಆರ್‌ಸಿಬಿ ಆರಂಭಿಕ 2 ಪಂದ್ಯದಲ್ಲಿ ತನ್ನ ಸಾಮರ್ಥ್ಯ ಸಾಬೀತು ಮಾಡಿದೆ. ಮೊದಲು ಬ್ಯಾಟಿಂಗ್ ಮಾಡಿದಾಗ ಸ್ಫೋಟಕ ಪ್ರದರ್ಶನ ನೀಡಿದೆ. ಇದು ಗುಜರಾತ್ ವಿರುದ್ಧ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಮುಂದುವರಿಯಲಿದೆ ಅನ್ನೋದು ಅಭಿಮಾನಿಗಳ ವಿಶ್ವಾಸ.

ಆರ್‌ಸಿಬಿ ಪ್ಲೇಯಿಂಗ್ 11
ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯಕ್ಕೆ ಆರ್‌ಸಿಬಿ ಯಾವುದೇ ಬದಲಾವಣೆ ಮಾಡಿಲ್ಲ. ಗೆಲುವಿನ ತಂಡವನ್ನೇ ಉಳಿಸಿಕೊಂಡಿದೆ. ತಂಡ ಕೂಡ ಉತ್ತಮವಾಗಿ ಸೆಟ್ ಆಗಿದ್ದು, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ.

ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ಲಿಯಾಮ್ ಲಿವಿಂಗ್ ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್. ಯಶ್ ದಯಾಳ್,

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ಸಾಯಿ ಸುದರ್ಶನ್, ಶುಭಮನ್ ಗಿಲ್(ನಾಯಕ), ಜೋಸ್ ಬಟ್ಲರ್, ಶಾರುಖ್ ಖಾನ್, ರಾಹುಲ್ ಟಿವಾಟಿಯಾ, ಅರ್ಶದ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ,
ಸಾಯಿ ಸುದರ್ಶನ್, ಶುಭಮನ್ ಗಿಲ್(ನಾಯಕ), ಜೋಸ್ ಬಟ್ಲರ್, ಶಾರುಖ್ ಖಾನ್, ರಾಹುಲ್ ಟಿವಾಟಿಯಾ, ಅರ್ಶದ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ,

ತವರಲ್ಲಿ ಶುಭಾರಂಭ ನಿರೀಕ್ಷೆಯಲ್ಲಿ ಆರ್‌ಸಿಬಿ; ಬೆಂಗಳೂರಿಗೆ ಹ್ಯಾಟ್ರಿಕ್ ಜಯದ ಗುರಿ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!