ಟೆಸ್ಟ್‌ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

Suvarna News   | Asianet News
Published : Dec 08, 2020, 01:04 PM IST
ಟೆಸ್ಟ್‌ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

ಸಾರಾಂಶ

ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಸರಣಿ ಮುಕ್ತಾಯವಾಗುತ್ತಿದ್ದಂತೆ ಬಹುನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆರಂಭಿಕ ಹಿನ್ನಡೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ಡಿ.08): ಬಹುನಿರೀಕ್ಷಿತ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾ ಅನುಭವಿ ವೇಗಿ ಇಶಾಂತ್ ಶರ್ಮಾ ಸರಣಿಯಿಂದಲೇ ಹೊರಬಿದ್ದುದ್ದು, ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಲಭ್ಯತೆಯ ಬಗ್ಗೆಯೂ ಅನುಮಾನದ ಕಾರ್ಮೋಡ ಕವಿದಿದೆ. ಇದರ ಬೆನ್ನಲ್ಲೇ ತಲೆಗೆ ಪೆಟ್ಟು ಬಿದ್ದಿದ್ದರ ಜತೆಗೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಭಾರತದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ. ಆಸ್ಟ್ರೇಲಿಯಾ ವಿರುದ್ದದ ಮೊದಲ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನದ 50ನೇ ಟೆಸ್ಟ್ ಪಂದ್ಯವನ್ನಾಡುವ ಹೊಸ್ತಿಲಲ್ಲಿರುವ ರವೀಂದ್ರ ಜಡೇಜಾ ಸದ್ಯ ಮೂರು ವಾರಗಳ ಕಾಲ ವಿಶ್ರಾಂತಿಗೆ ಒಳಗಾಗಬೇಕಾಗುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಕ್ರೀಡಾಮಾಧ್ಯಮವೊಂದು ವರದಿ ಮಾಡಿದೆ. ಹೀಗಾಗಿ ಡಿಸೆಂಬರ್ 17ರಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ರವೀಂದ್ರ ಜಡೇಜಾ ಹೊರಗುಳಿಯುವ ಸಾಧ್ಯತೆಯಿದೆ.

ಡಿಸೆಂಬರ್ 17ರಂದು ಅಡಿಲೇಡ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು, ಹಗಲು-ರಾತ್ರಿಯ ಟೆಸ್ಟ್‌ ಪಂದ್ಯ ಇದಾಗಿರಲಿದೆ. ಭಾರತದ ಸ್ಟಾರ್ ಆಲ್ರೌಂಡರ್ ಆಗಿರುವ ಸೌರಾಷ್ಟ್ರ ಮೂಲದ ರವೀಂದ್ರ ಜಡೇಜಾ ಮೊದಲ ಟೆಸ್ಟ್‌ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಸ್ಯಾಯು ಸೆಳೆತದ ಪ್ರಮಾಣ ದೊಡ್ಡದಿದ್ದರೆ, ಡಿಸೆಂಬರ್ 26ರಿಂದ ಆರಂಭಗೊಳ್ಳಲಿರುವ 2ನೇ ಟೆಸ್ಟ್‌ಗೂ ರವೀಂದ್ರ ಜಡೇಜಾ ಅಲಭ್ಯರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಟೀಂ ಇಂಡಿಯಾಗೆ ಶಾಕ್; ರವೀಂದ್ರ ಜಡೇಜಾ ಟಿ20 ಸರಣಿಯಿಂದ ಔಟ್..!

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ವಿದೇಶಿ ನೆಲದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಬಲಿಷ್ಠ ಆಸ್ಟ್ರೇಲಿಯಾ ಎದುರು ವಿರಾಟ್ ಪಡೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವ ಕುತೂಹಲ ಜೋರಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ
U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು