ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್‌ಗಿಂದು 27ನೇ ಹುಟ್ಟುಹಬ್ಬದ ಸಂಭ್ರಮ

Suvarna News   | Asianet News
Published : Mar 13, 2021, 05:45 PM IST
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್‌ಗಿಂದು 27ನೇ ಹುಟ್ಟುಹಬ್ಬದ ಸಂಭ್ರಮ

ಸಾರಾಂಶ

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 27ನೇ ವಸಂತಕ್ಕೆ ಕಾಲಿರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಹೈದರಾಬಾದ್‌(ಮಾ.13): ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್‌ ಶನಿವಾರ(ಮಾ.13)ದಂದು ತಮ್ಮ 27ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುವ ಸಿರಾಜ್‌ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ.

ಕೆಲ ತಿಂಗಳ ಹಿಂದಷ್ಟೇ ಆಸ್ಟ್ರೇಲಿಯಾ ವಿರುದ್ದ ಮುಕ್ತಾಯವಾದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ರೆಡ್‌ ಬಾಲ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿ, ಬಲಿಷ್ಠ ಕಾಂಗರೂ ಪಡೆಯನ್ನು ಅವರದ್ದೇ ನೆಲದಲ್ಲಿ ಸೋಲಿಸುವಂತೆ ಮಾಡುವಲ್ಲಿ ಮೊಹಮ್ಮದ್ ಸಿರಾಜ್‌ ಕೂಡಾ ಉಪಯುಕ್ತ ಕಾಣಿಕೆ ನೀಡಿದ್ದಾರೆ. 

ಭಾರತಕ್ಕಿಂತ ಮುಂಬೈ ಇಂಡಿಯನ್ಸ್‌ ಬಲಿಷ್ಠ ಎಂದ ಇಂಗ್ಲೆಂಡ್‌ ಮಾಜಿ ನಾಯಕನ ಬಾಯಿ ಮುಚ್ಚಿಸಿದ ಜಾಫರ್..!

ಮೊಹಮ್ಮದ್ ಸಿರಾಜ್ ಭಾರತ ಪರ ಇದುವರೆಗೂ 5 ಟೆಸ್ಟ್ ಪಂದ್ಯಗಳನ್ನಾಡಿ 16 ವಿಕೆಟ್ ಕಬಳಿಸಿದ್ದಾರೆ. ಇನ್ನು ಒಂದು ಏಕದಿನ ಹಾಗೂ 3 ಟಿ20 ಪಂದ್ಯಗಳಲ್ಲಿ ಸಿರಾಜ್‌ ಬ್ಲೂ ಜೆರ್ಸಿ ತೊಟ್ಟಿದ್ದಾರೆ. ಮೊಹಮ್ಮದ್ ಸಿರಾಜ್‌ ಹುಟ್ಟುಹಬ್ಬಕ್ಕೆ ಹಿರಿ-ಕಿರಿಯ ಆಟಗಾರರು ಸೇರಿದಂತೆ ಹಲವು ಅಭಿಮಾನಿಗಳು ಜನ್ಮದಿನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ಯಾಮರೋನ್ ಗ್ರೀನ್ ಬಳಿಕ ಮತ್ತೋರ್ವ ಕಾಸ್ಟ್ಲಿ ಆಟಗಾರನನ್ನು ಖರೀದಿಸಿದ ಕೋಲ್ಕತಾ! ಕೆಕೆಆರ್ ಈಗ ಮತ್ತಷ್ಟು ಬಲಿಷ್ಠ
ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್‌ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್‌!