ಟೀಂ ಇಂಡಿಯಾ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ ಹರ್ಭಜನ್‌ ಸಿಂಗ್

By Suvarna NewsFirst Published Dec 25, 2019, 12:05 PM IST
Highlights

ಟೀಂ ಇಂಡಿಯಾ ಆಯ್ಕೆ ಸಮಿತಿ ವಿರುದ್ಧ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಕಿಡಿಕಾರಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ನವದೆಹಲಿ(ಡಿ.25]: ಭಾರತ ಕ್ರಿಕೆಟ್‌ ತಂಡದ ಆಯ್ಕೆಗೆ ಯಾವುದೇ ಮಾನದಂಡ ಇಲ್ಲದಂತಾಗಿದೆ. ಆಯ್ಕೆ ನಡೆಸುವ ವೇಳೆ ಒಬ್ಬೊಬ್ಬರಿಗೆ ಒಂದೊಂದು ನಿಯಮಗಳನ್ನು ಅನುಸರಿಸಲಾಗುತ್ತಿದೆ ಎಂದು ಹಿರಿಯ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ ಗಂಭೀರ ಆರೋಪ ಮಾಡಿದ್ದಾರೆ. 

ಶ್ರೀಲಂಕಾ ಸರಣಿಗೆ ಭಾರತ ತಂಡ ಪ್ರಕಟ; ಬುಮ್ರಾ ವಾಪಾಸ್, ರೋಹಿತ್‌ಗೆ ರೆಸ್ಟ್!

ಟ್ವಿಟರ್‌ನಲ್ಲಿ ತುಸು ಖಾರವಾಗಿಯೇ ಪ್ರತಿಕ್ರಿಯಿಸಿ ಎಂಎಸ್‌ಕೆ ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿ ಮೇಲೆ ವಾಗ್ದಾಳಿ ನಡೆಸಿರುವ ಭಜ್ಜಿ, ಮುಂಬೈ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ ಅವರನ್ನು ಮುಂಬರುವ ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಸರಣಿಗೆ ಆಯ್ಕೆ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

I keep wondering what’s wrong hv done ? Apart from scoring runs like others who keep getting picked for Team india india/A india /B why different rules for different players ???

— Harbhajan Turbanator (@harbhajan_singh)

ಸೂರ್ಯ ಕುಮಾರ್ ಯಾದವ್ ದೇಸಿ ಕ್ರಿಕೆಟಿನಲ್ಲಿ ನಿರಂತರವಾಗಿ ರನ್ ಗಳಿಸುತ್ತಿದ್ದರು ಅವರನ್ನು ಕಡೆಗಣಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. 73 ಪ್ರಥಮದರ್ಜೆ ಪಂದ್ಯಗಳನ್ನಾಡಿರುವ ಸೂರ್ಯ ಕುಮಾರ್ ಯಾದವ್ ಒಟ್ಟು 4,920 ರನ್ ಬಾರಿಸಿದ್ದಾರೆ. 

’ನೀವೆಲ್ಲ ಸಂಜು ಬ್ಯಾಟಿಂಗ್ ಪರೀಕ್ಷಿಸುತ್ತಿದ್ದಿರೋ ಇಲ್ಲಾ ಹೃದಯವನ್ನೋ..?’

ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್’ಗಳ ಸರಣಿಗೆ ವಿಕೆಟ್ ಕೀಪರ್  ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಟ್ಟಾಗಲೂ ಹರ್ಭಜನ್ ಸಿಂಗ್ ಹಾಗೂ ತಿರುವನಂತಪುರಂ ಸಂಸದ ಶಶಿ ತರೋರು ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ್ದರು. 
 

click me!