
ಮುಂಬೈ(ಜ.01): ಟೀಂ ಇಂಡಿಯಾ ಅಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೊಸ ವರ್ಷದ ಮುಂಜಾನೆ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದರು. ಬಾಲಿವುಡ್ ನಟಿ ನತಾಶ ಸ್ಟಾಂಕೋವಿಚ್ ಜೊತೆಗಿನ ಗಪ್ ಚುಪ್ ಪ್ರೀತಿ ರಹಸ್ಯವನ್ನು ಬಹಿರಂಗ ಪಡಿಸಿದ್ದರು. ಈ ಸುದ್ದಿಯನ್ನು ಪಾಂಡ್ಯ ಮಹಿಳಾ ಅಭಿಮಾನಿಗಳು ಅರಗಿಸಿಕೊಳ್ಳೋ ಮೊದಲೇ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಸದ್ದಿಲ್ಲದೆ ಎಂಗೇಜ್‌ಮೆಂಟ್ ಮುಗಿಸಿದ್ದಾರೆ.
ಇದನ್ನೂ ಓದಿ: ಗಪ್ ಚುಪ್ ಪ್ರೀತಿ ಬಹಿರಂಗ ಪಡಿಸಿದ ಹಾರ್ದಿಕ್ ಪಾಂಡ್ಯ!
ಮನ್ಸೂರ್ ಅಲಿ ಖಾನ್- ಶರ್ಮಿಳಾ ಠಾಗೋರ್, ಮೊಹಮ್ಮದ್ ಅಜರುದ್ದೀನ್- ಸಂಗೀತ್ ಬಿಜ್ಲಾನಿ, ಹರ್ಭಜನ್ ಸಿಂಗ್-ಗೀತಾ ಬಸ್ರಾ, ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಜೋಡಿ ಬಳಿಕ ಕ್ರಿಕೆಟ್ ಹಾಗೂ ಬಾಲಿವುಡ್ ಸಂಬಂಧ ಮುಂದುವರಿದಿದೆ. ಈ ಲಿಸ್ಟ್‌ಗೆ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಚ್ ಸೇರಿಕೊಂಡಿದ್ದಾರೆ.
ಇದನ್ನೂ ಓದಿ: ಗೆಳತಿ ಜೊತೆ ಥಾಯ್ಲೆಂಡ್‌ನಲ್ಲಿ ಹೊಸ ವರ್ಷ ಆಚರಿಸಿದ ಕೆಎಲ್ ರಾಹುಲ್!
ಹಾರ್ದಿಕ್ ಪಾಂಡ್ಯ ತಮ್ಮ ಇನ್ಸ್ಟಾಗ್ರಾಂ ಖಾತೆ ಮೂಲಕ ಎಂಗೇಜ್‌ಮೆಂಟ್ ಬಹಿರಂಗ ಪಡಿಸಿದ್ದಾರೆ. ಈ ಜೋಡಿ ಈಗಾಗಲೇ ಹಲವು ಬಾರಿ ಜೊತಯಾಗಿ ಕಾಣಿಸಿಕೊಂಡಿತ್ತು. ಆದರೆ ಎಲ್ಲೂ ಕೂಡ ಪ್ರೀತಿ ಕುರಿತು ಹೇಳಿಕೊಂಡಿರಲಿಲ್ಲ. ಇದೀಗ ಎಂಗೇಜ್ಮೆಂಟ್ ಮೂಲಕ ಅಚ್ಚರಿ ನೀಡಿದ್ದಾರೆ. ಇದೀಗ ಅಭಿಮಾನಿಗಳು ಪಾಂಡ್ಯ ಹಾಗೂ ನತಾಶ ಮದುವೆ ಯಾವಾಗ ಅನ್ನೋ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.