100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್

Published : Dec 09, 2025, 08:51 PM ISTUpdated : Dec 09, 2025, 08:57 PM IST
Hardik Pandya

ಸಾರಾಂಶ

ಕುಸಿದ ಭಾರತಕ್ಕೆ ಪಾಂಡ್ಯ ಅಬ್ಬರದ ಬ್ಯಾಟಿಂಗ್, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್, ಆರಂಭದಲ್ಲೇ ವಿಕೆಟ್ ಪತನಗೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ನೆರವಾಗಿದೆ.ಪರಿಣಾಮ ಸ್ಪರ್ಧಾತ್ಮಕ ಮೊತ್ತ ಸಿಡಿಸಿದೆ.

ಕಟಕ್ (ಡಿ.09) ಸೌತ್ ಆಫ್ರಿಕಾ ವಿರುದ್ದ ಏಕದಿನ ಸರಣಿ ಗೆದ್ದ ಭಾರತ ಇದೀಗ ಟಿ20 ಸರಣಿ ಆರಂಭದಲ್ಲೇ ಆತಂಕ ಎದುರಿಸಿತ್ತು. ಕಟಕ್‌ನಲ್ಲಿ ನಡೆಯುತ್ತಿರುವ ಮೊದಲ ಟ20 ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿದಿತ್ತು. ಆದರೆ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದರು. 28 ಎಸೆತದಲ್ಲಿ ಅಜೇಯ 59 ರನ್ ಸಿಡಿಸುವ ಮೂಲಕ ಭಾರತ 6 ವಿಕೆಟ್ ನಷ್ಟಕ್ಕೆ 175 ರನ್ ಸಿಡಿಸಿದೆ.

ಟಾಸ್ ಸೋತ ಭಾರತಕ್ಕೆ ಆರಂಭದಲ್ಲೇ ಶಾಕ್

ಟಾಸ್ ಸೋತ ಭಾರತ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಬ್ಯಾಟಿಂಗ್ ಇಳಿದಾಗ ವಿಕೆಟ್ ಪತನ ಟೆನ್ಶನ್ ಹೆಚ್ಚಾಯಿತು. ಶುಬಮನ್ ಗಿಲ್ ಕೇವಲ 4 ರನ್ ಸಿಡಿಸಿ ನಿರ್ಗಮಿಸಿದರೆ, ಅಭಿಷೇಕ್ ಶರ್ಮಾ 17 ರನ್ ಸಿಡಿಸಿ ಔಟಾದರು. ನಾಯಕ ಸೂರ್ಯಕುಮಾರ್ ಯಾದವ್ 12 ರನ್ ಸಿಡಿಸಿ ಔಟಾದರು. ಆರಂಭಿಕ ಮೂರು ವಿಕೆಟ್ ಪತನದಿಂದ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತು. ಇತ್ತ ತಿಲಕ್ ವರ್ಮಾ 25 ಹಾಗೂ ಅಕ್ಸರ್ ಪಟೇಲ್ 23 ರನ್ ಸಿಡಿಸಿ ನರವಾದರು. ಆದರೂ ಭಾರತ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿ ಎದುರಿಸಿತ್ತು.

ಹಾರ್ದಿಕ್ ಪಾಂಡ್ಯ ಅಬ್ಬರ

ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಪಂದ್ಯದ ಗತಿ ಬದಲಿಸಿದರು. ಇತ್ತ ಶಿವಂ ದುಬೆ 11 ರನ್‌ಗೆ ನಿರ್ಗಮಿಸಿದರು.ಆದರೆ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. 28 ಎಸೆತದಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದರು. ಈ ಮೂಲಕ ಅಜೇಯ 59 ರನ್ ಸಿಡಿಸಿದರು. ಇತ್ತ ಜಿತೇಶ್ ಶರ್ಮಾ ಅಜೇಯ 10 ರನ್ ಸಿಡಿಸಿದರು. ಇದರೊಂದಿಗೆ ಭಾರತ 6 ವಿಕೆಟ್ ನಷ್ಟಕ್ಕೆ 175 ರನ್ ಸಿಡಿಸಿತು.

ಹಾರ್ದಿಕ್ ಪಾಂಡ್ಯ 100 ಸಿಕ್ಸರ್

ಟಿ20 ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ 100 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಟೀಂ ಇಂಡಿಯಾ ಬ್ಯಾಟರ್ ಪೈಕಿ ಹಾರ್ದಿಕ್ ಪಾಂಡ್ಯ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಟಿ20ಯಲ್ಲಿ ಟೀಂ ಇಂಡಿಯಾ ಬ್ಯಾಟರ್ ಗರಿಷ್ಠ ಸಿಕ್ಸರ್ ಸಾಧನೆ

  • ರೋಹಿತ್ ಶರ್ಮಾ: 205
  • ಸೂರ್ಯಕುಮಾರ್ ಯಾದವ್ : 155
  • ವಿರಾಟ್ ಕೊಹ್ಲಿ : 124
  • ಹಾರ್ದಿಕ್ ಪಾಂಡ್ಯ: 100
  • ಕೆಎಲ್ ರಾಹುಲ್ : 99

ಸೌತ್ ಆಫ್ರಿಕಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 28 ಎಸೆತ ಎದುರಿಸಿ 59 ರನ್ ಕಲೆಹಾಕಿದರೆ, ಟೀಂ ಇಂಡಿಯಾ ಇನ್ನುಳಿದ ಬ್ಯಾಟರ್ ಒಟ್ಟು 92 ಎಸೆತ ಎದುರಿಸಿ 103 ರನ್ ಸಿಡಿಸಿದ್ದಾರೆ.

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!
ಈ ಒಂದು ತಂಡ ಬಿಟ್ಟು ಆರ್‌ಸಿಬಿ, ಚೆನ್ನೈ ಸೇರಿ ಐಪಿಎಲ್‌ ತಂಡಗಳ ಬ್ರ್ಯಾಂಡ್ ಮೌಲ್ಯ ಭಾರೀ ಕುಸಿತ!