ಆಸೀಸ್‌ಗೆ 303 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದ ಟೀಂ ಇಂಡಿಯಾ

Suvarna News   | Asianet News
Published : Dec 02, 2020, 12:50 PM IST
ಆಸೀಸ್‌ಗೆ 303 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದ ಟೀಂ ಇಂಡಿಯಾ

ಸಾರಾಂಶ

ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಅಂತಿಮ ಏಕದಿನ ಪಂದ್ಯದಲ್ಲಿ 302 ರನ್ ಬಾರಿಸಿದ್ದು ಆಸ್ಟ್ರೇಲಿಯಾಗೆ ಸವಾಲಿನ ಗುರಿ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕ್ಯಾನ್‌ಬೆರ್ರಾ(ಡಿ.02): ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಕೆಚ್ಚೆದೆಯ ಶತಕದ ಜತೆಯಾಟದ ನೆರವಿನಿಂದ ಮೂರನೇ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಳೆದುಕೊಂಡು 302 ರನ್ ಬಾರಿಸಿದ್ದು, ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಸವಾಲಿನ ಗುರಿ ನೀಡಿದೆ.

ಸರಣಿಯಲ್ಲಿ ಇದೇ ಮೊದಲ ಬಾರಿಗೆ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಭಾರತ 26 ರನ್‌ ಗಳಿಸಿದ್ದಾಗ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ 16 ರನ್‌ ಬಾರಿಸಿ ಸೀನ್ ಅಬ್ಬೋಟ್‌ಗೆ ವಿಕೆಟ್ ಒಪ್ಪಿಸಿದರು. ಎರಡನೇ ವಿಕೆಟ್‌ಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ಶುಭ್‌ಮನ್‌ ಗಿಲ್ ಜೋಡಿ 56 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಉತ್ತಮವಾಗಿ ಆಡುತ್ತಿದ್ದ ಗಿಲ್ ಸ್ವೀಪ್ ಮಾಡುವ ಯತ್ನದಲ್ಲಿ ಆಸ್ಟನ್ ಅಗರ್‌ಗೆ ವಿಕೆಟ್ ಒಪ್ಪಿಸಿದರು. 

ಮತ್ತೆ ಆಸರೆಯಾದ ಕೊಹ್ಲಿ-ಪಾಂಡ್ಯ-ಜಡೇಜಾ; ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್(19) ಹಾಗೂ ಕೆ.ಎಲ್. ರಾಹುಲ್(5) ಬೇಗನೇ ವಿಕೆಟ್ ಒಪ್ಪಿಸಿದ್ದರಿಂದ ಒಂದು ಹಂತದಲ್ಲಿ 123 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಆಸರೆಯಾದರು. ಸಾಕಷ್ಟು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದ ಕೊಹ್ಲಿ 78 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 63 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕೊಹ್ಲಿ ವಿಕೆಟ್‌ ಒಪ್ಪಿಸುವಾಗ 32 ಓವರ್‌ ಅಂತ್ಯಕ್ಕೆ ಟೀಂ ಇಂಡಿಯಾ ಸ್ಕೋರ್ 5 ವಿಕೆಟ್‌ ನಷ್ಟಕ್ಕೆ 152 ರನ್‌

ಕೊಹ್ಲಿ ಸಾಧನೆಗೆ ಮತ್ತೊಂದು ಗರಿ; ಸಚಿನ್ ವಿಶ್ವದಾಖಲೆ ವಿರಾಟ್ ಪಾಲು..!

ಇನ್ನು ಆರನೇ ವಿಕೆಟ್‌ಗೆ ಜತೆಯಾದ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಜೋಡಿ ಅಜೇಯ ಶತಕ(150)ದ ಜತೆಯಾಟವಾಡುವ ಮೂಲಕ ತಂಡ ಸ್ಫರ್ಧಾತ್ಮಕ ಮೊತ್ತ ಕಲೆ ಹಾಕಲು ನೆರವಾದರು. ಜಡೇಜಾ 50 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಅಜೇಯ 66 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 76 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 92 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯ 10 ಓವರ್‌ಗಳಲ್ಲಿ ಈ ಜೋಡಿ 110 ರನ್‌ಗಳ ಜತೆಯಾಟ ನಿಭಾಯಿಸಿತು.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್‌ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್‌!
ಕಡಿಮೆ ಮೊತ್ತಕ್ಕೆ ಆರ್‌ಸಿಬಿ ತೆಕ್ಕೆಗೆ ಜಾರಿದ ಸ್ಟಾರ್ ಆಲ್ರೌಂಡರ್! ಹಾಲಿ ಚಾಂಪಿಯನ್ ಬೆಂಗಳೂರು ತಂಡಕ್ಕೆ ಜಾಕ್‌ಪಾಟ್