ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಯಾಕೋ ಟೈಮ್ ಸರಿ ಇದ್ದಂತೆ ಕಾಣುತ್ತಿಲ್ಲ. ಪಾಂಡ್ಯಗೆ ಇದೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬಿಗ್ ಶಾಕ್ ನೀಡಲು ಮುಂದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಮುಂಬೈ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಸಾಕಷ್ಟು ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಹೀಗಿರುವಾಗಲೇ ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ಈಗಾಗಲೇ ನತಾಶಾ ಸ್ಟ್ಯಾಂಕೋವಿಚ್ ಹಾರ್ದಿಕ್ ಪಾಂಡ್ಯಗೆ ವಿಚ್ಛೇದನಾ ನೀಡಿ ಸರ್ಬಿಯಾಗೆ ವಾಪಾಸ್ಸಾಗಿದೆ. ಈ ಶಾಕ್ ನಿಂದ ಹೊರಬರುವ ಮುನ್ನವೇ ಮುಂಬೈ ಇಂಡಿಯನ್ಸ್ ನಾಯಕನಿಗೆ ಮತ್ತೊಂದು ಶಾಕಿಂಗ್ ಸುದ್ದಿ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.
ಹೌದು, 2025ರ ಐಪಿಎಲ್ ಟೂರ್ನಿಗೂ ಮುನ್ನ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ತಂಡದಿಂದ ಕೈಬಿಡಲಿದೆ ಎನ್ನುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಸ್ಟಾರ್ ಆಲ್ರೌಂಡರ್ ಆಗಿರುವ ಹಾರ್ದಿಕ್ ಪಾಂಡ್ಯ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದರು. ಆದರೆ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 2024ರ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಲೀಗ್ ಹಂತದಿಂದಲೇ ಹೊರಬಿದ್ದಿತ್ತು.
undefined
ಇಂದಿನಿಂದ ಕುಸ್ತಿ: ಭಾರತದ ಅಥ್ಲೀಟ್‌ಗಳ ಮೇಲೆ ಹೆಚ್ಚಿದ ನಿರೀಕ್ಷೆ
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 5 ಬಾರಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿತ್ತು. ಇದಾದ ಬಳಿಕ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಕರೆತಂದ ಮುಂಬೈ ಫ್ರಾಂಚೈಸಿಯು ನಾಯಕ ಪಟ್ಟ ಕಟ್ಟಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡವು ಎರಡು ಬಣಗಳಾಗಿವೆ ಎಂದೆಲ್ಲಾ ವರದಿಯಾಗಿತ್ತು.
ಹಾರ್ದಿಕ್ ಪಾಂಡ್ಯ 2022ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ನೇಮಕವಾಗಿದ್ದರು. ಐಪಿಎಲ್‌ನಲ್ಲಿ ಮೊದಲ ಬಾರಿಗೆ ನಾಯಕರಾದ ಪಾಂಡ್ಯ, ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇನ್ನು ಮರು ವರ್ಷ ಅಂದರೆ 2023ರ ಐಪಿಎಲ್ ಟೂರ್ನಿಯಲ್ಲೂ ಪಾಂಡ್ಯ ನೇತೃತ್ವದ ಗುಜರಾತ್ ತಂಡವು ಫೈನಲ್ ಪ್ರವೇಶಿಸಿತ್ತು. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್, ಹಾರ್ದಿಕ್ ಪಾಂಡ್ಯ ಅವರನ್ನು ಕರೆತಂದು ನಾಯಕ ಪಟ್ಟ ಕಟ್ಟಿತ್ತು. ಆದರೆ ಹಾರ್ದಿಕ್ ಪಾಂಡ್ಯ, ಮುಂಬೈ ಇಂಡಿಯನ್ಸ್ ಪರ ಜಾದೂ ಮಾಡಲು ಸಾಧ್ಯವಾಗಲಿಲ್ಲ. 2024ರ ಐಪಿಎಲ್ ಟೂರ್ನಿಯಲ್ಲಿ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 14 ಪಂದ್ಯಗಳನ್ನಾಡಿ ಕೇವಲ 4 ಪಂದ್ಯಗಳಲ್ಲಿ ಅಷ್ಟೇ ಗೆಲುವು ಸಾಧಿಸಲು ಸಫಲವಾಗಿತ್ತು.
ವ್ಯಾಂಡರ್ಸೆ ದಾಳಿಗೆ ತತ್ತರಿಸಿದ ಭಾರತ: ಲಂಕಾಕ್ಕೆ ಸರಣಿ ಮುನ್ನಡೆ
ಇದೀಗ ಕೆಲ ಮಾಧ್ಯಮಗಳ ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ತಂಡದಿಂದ ರಿಲೀಸ್ ಮಾಡಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್‌ಗೆ ನಾಯಕ ಪಟ್ಟ ಕಟ್ಟಲು ಮುಂದಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಭಾರತ ಟಿ20 ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಇದೀಗ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಲಂಕಾ ಪ್ರವಾಸದಲ್ಲಿ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡುವಲ್ಲಿ ಯಶಸ್ವಿಯಾಗಿದೆ.