ನಾನು ಮಾಡಿದ ತ್ಯಾಗ ಯಾರಿಗೂ ಗೊತ್ತಿಲ್ಲ..! ಕಮ್‌ಬ್ಯಾಕ್ ಸೀಕ್ರೇಟ್ ಬಿಚ್ಚಿಟ್ಟ ಹಾರ್ದಿಕ್ ಪಾಂಡ್ಯ

By Naveen KodaseFirst Published Jun 11, 2022, 12:04 PM IST
Highlights

* ಟೀಂ ಇಂಡಿಯಾಗೆ ಭರ್ಜರಿ ಕಮ್‌ಬ್ಯಾಕ್ ಮಾಡಿದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ
* ಐಪಿಎಲ್‌ನಲ್ಲಿ ನಾಯಕನಾಗಿ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಹಾರ್ದಿಕ್ ಪಾಂಡ್ಯ
* ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಲು ಪಟ್ಟ ಶ್ರಮವನ್ನು ವಿವರಿಸಿದ ಬರೋಡ ಮೂಲದ ಆಲ್ರೌಂಡರ್

ನವದೆಹಲಿ(ಜೂ.11): ಕಳೆದೊಂದು ವರ್ಷದ ಹಿಂದೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ನೀರಸ ಪ್ರದರ್ಶನ ತೋರಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಪದೇ ಪದೇ ಫಿಟ್ನೆಸ್ ಸಮಸ್ಯೆ ಎದುರಿಸುತ್ತಿದ್ದ ಹಾರ್ದಿಕ್ ಪಾಂಡ್ಯ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕು ಮುಗಿದೇ ಹೋಯಿತೇನೋ ಎನ್ನುವ ಹಂತಕ್ಕೆ ತಲುಪಿದ್ದರು. ಆದರೆ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್, ಹಾರ್ದಿಕ್‌ ಪಾಂಡ್ಯ ಅವರಿಗೆ ಹೊಸ ಬದುಕು ನೀಡಿತು. ಐಪಿಎಲ್‌ನಲ್ಲಿ ಮಿಂಚಿನ ಪ್ರದರ್ಶನ ತೋರಿ ಟೀಂ ಇಂಡಿಯಾ (Team India)ಗೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ ಪಾಂಡ್ಯ, ದಕ್ಷಿಣ ಆಫ್ರಿಕಾ ಎದುರು ಫಿನಿಶರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಗಮನ ಸೆಳೆದರು. ಇದರ ಬೆನ್ನಲ್ಲೇ ತಾವು ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಲು ಮಾಡಿದ ತ್ಯಾಗದ ಬಗ್ಗೆ ತುಟಿಬಿಚ್ಚಿದ್ದಾರೆ.

2021ರಲ್ಲಿ ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಹಾರ್ದಿಕ್ ಪಾಂಡ್ಯ, ಒಂದೇ ಒಂದು ಸ್ಪರ್ಧಾತ್ಮಕ ಕ್ರಿಕೆಟ್ ಪಂದ್ಯವನ್ನೂ ಆಡಿರಲಿಲ್ಲ. ದೀರ್ಘಕಾಲದಿಂದ ಸೊಂಟ ನೋವಿನ ಸಮಸ್ಯೆ ಎದುರಿಸುತ್ತಿದ್ದ ಪಾಂಡ್ಯ, ಬೌಲಿಂಗ್ ಮಾಡಲು ಹಿಂಜರಿಯುತ್ತಿದ್ದರು. 2020 ಹಾಗೂ 2021ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಹಾರ್ದಿಕ್ ಪಾಂಡ್ಯ ಒಂದೇ ಒಂದು ಓವರ್ ಬೌಲಿಂಗ್ ಮಾಡಿರಲಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಆಟಗಾರ ಎನ್ನುವ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿದ್ದವು. ಆದರೆ ಬರೋಡ ಮೂಲದ ಆಲ್ರೌಂಡರ್‌ ಹಾರ್ದಿಕ್ ಪಾಂಡ್ಯ (Hardik Pandya), 2022ನೇ ಸಾಲಿನ ಐಪಿಎಲ್ ಟೂರ್ನಿಗೆ ನೂತನ ತಂಡವಾದ ಗುಜರಾತ್ ಟೈಟಾನ್ಸ್‌ಗೆ ನಾಯಕರಾದರು. ಇದಾದ ಬಳಿಕ ಪಾಂಡ್ಯ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಪರ ಗರಿಷ್ಟ ರನ್ ಬಾರಿಸಿದ್ದು ಮಾತ್ರವಲ್ಲದೇ ನಾಯಕನಾಗಿ ಮೊದಲ ಪ್ರಯತ್ನದಲ್ಲೇ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿಯೂ ಯಶಸ್ವಿಯಾಗಿದ್ದರು. ಗುಜರಾತ್ ಟೈಟಾನ್ಸ್ ಪರ ಬ್ಯಾಟಿಂಗ್‌ನಲ್ಲಿ 484 ರನ್ ಬಾರಿಸಿದ್ದ ಹಾರ್ದಿಕ್ ಪಾಂಡ್ಯ, ಬೌಲಿಂಗ್‌ನಲ್ಲೂ ಶಿಸ್ತುಬದ್ದ ದಾಳಿ ನಡೆಸಿ ಗಮನ ಸೆಳೆದಿದ್ದರು.

Latest Videos

ಇನ್ನು ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ ಹಾರ್ದಿಕ್ ಪಾಂಡ್ಯ, ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಮೊದಲ ಟಿ20 ಪಂದ್ಯದಲ್ಲಿ ಕೇವಲ 12 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿ ಸಹಿತ ಅಜೇಯ 31 ರನ್ ಸಿಡಿಸಿ ಮಿಂಚಿದ್ದರು. ಇದರ ಬೆನ್ನಲ್ಲೇ ಮಾತನಾಡಿದ ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾಗೆ ತಾವು ಕಮ್‌ಬ್ಯಾಕ್ ಮಾಡಲು ಕಷ್ಟಪಟ್ಟ ರೀತಿಯನ್ನು ವಿವರಿಸಿದ್ದಾರೆ.

ಕಿಂಗ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಜಂ..!

ನಾನು ತಂಡಕ್ಕೆ ಕಮ್‌ಬ್ಯಾಕ್ ಮಾಡುವ ಮುನ್ನ ಹಲವು ಹಲವು ರೀತಿಯಲ್ಲಿ ನನ್ನ ಬಗ್ಗೆ ಮಾತನಾಡಿದ್ದಾರೆ. ನಾನು ಅವರಿಗೆಲ್ಲ ಉತ್ತರಿಸುವ ಅವಶ್ಯಕತೆಯಿಲ್ಲ. ನಾನು ತಂಡಕ್ಕೆ ಕಮ್‌ಬ್ಯಾಕ್‌ ಮಾಡಲು ಪಟ್ಟ ಪರಿಶ್ರಮದ ಬಗ್ಗೆ ನನಗೆ ಹೆಮ್ಮೆಯಿದೆ. ಕಳೆದ ಆರು ತಿಂಗಳಿನಲ್ಲಿ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಹೇಗೆಲ್ಲಾ ಪ್ರಯತ್ನಿಸಿದ್ದೇನೆ ಎನ್ನುವುದು ಎಲ್ಲರಿಗೂ ತಿಳಿದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

From emotions on making a comeback to and triumph to goals for the future. 👏 👍

DO NOT MISS as discusses this and more. 👌 👌

Full interview 🎥 🔽 | https://t.co/2q8kGRpyij pic.twitter.com/BS2zvnxbpP

— BCCI (@BCCI)

ನಾನು ಬೆಳಗ್ಗೆ 5 ಗಂಟೆಗೆ ಎದ್ದು ಅಭ್ಯಾಸ ಆರಂಭಿಸುತ್ತಿದ್ದೆ. ಇನ್ನು ಎರಡನೆ ಬಾರಿಗೆ ಸಂಜೆ 4 ಗಂಟೆಯಿಂದ ಮತ್ತೆ ಅಭ್ಯಾಸ ಮಾಡುತ್ತಿದ್ದೆ. ಆ ತಿಂಗಳಿನಲ್ಲಿ ನಾನು ರಾತ್ರಿ 9.30ಕ್ಕೆ ನಿದ್ರೆಗೆ ಜಾರುತ್ತಿದ್ದೆ. ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಲು ನಾನು ಸಾಕಷ್ಟು ತ್ಯಾಗ ಮಾಡಿದ್ದೇನೆ. ನಾನು ಸಾಕಷ್ಟು ತ್ಯಾಗ ಮಾಡಿದ್ದರ ಫಲಿತಾಂಶವನ್ನು ನೀವೀಗ ನೋಡುತ್ತಿದ್ದೀರ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

click me!