ಸತತ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್, ಸೋಮನಾಥ ಶಿವನ ದೇಗುಲದಲ್ಲಿ ಹಾರ್ದಿಕ್ ಪಾಂಡ್ಯ ಪೂಜೆ..!

By Naveen Kodase  |  First Published Apr 6, 2024, 1:20 PM IST

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಏಪ್ರಿಲ್ 01ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಹೀನಾಯ ಸೋಲು ಅನುಭವಿಸಿತ್ತು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಪಡೆ ಕೊಂಚ ವಿಶ್ರಾಂತಿಗೆ ಜಾರಿದೆ. ಮುಂಬೈ ಇಂಡಿಯನ್ಸ್ ತಂಡವು ಇದೀಗ ಏಪ್ರಿಲ್ 07ರಂದು ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.


ನವದೆಹಲಿ(ಏ.06): ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕರಾದ ಬಳಿಕ ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ. 17ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಹ್ಯಾಟ್ರಿಕ್ ಸೋಲು ಅನುಭವಿಸಿದೆ. ಇದರ ಬೆನ್ನಲ್ಲೇ ಇದೀಗ ಹಾರ್ದಿಕ್ ಪಾಂಡ್ಯ ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿರುವ ಸೋಮನಾಥ ದೇಗುಲಕ್ಕೆ ಭೇಟಿ ನೀಡಿ ಶಿವನ ಪೂಜೆ ಮಾಡಿದ್ದಾರೆ. ಸೋಮನಾಥ ದೇವಾಲಯದ ಟ್ರಸ್ಟ್, ಹಾರ್ದಿಕ್ ಪಾಂಡ್ಯ ಪೂಜೆ ಮಾಡುತ್ತಿರುವ ವಿಡಿಯೋವನ್ನು ರಿಲೀಸ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಏಪ್ರಿಲ್ 01ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಹೀನಾಯ ಸೋಲು ಅನುಭವಿಸಿತ್ತು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಪಡೆ ಕೊಂಚ ವಿಶ್ರಾಂತಿಗೆ ಜಾರಿದೆ. ಮುಂಬೈ ಇಂಡಿಯನ್ಸ್ ತಂಡವು ಇದೀಗ ಏಪ್ರಿಲ್ 07ರಂದು ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.

Tap to resize

Latest Videos

RR Vs RCB ಪಂದ್ಯದಲ್ಲಿ ಸಿಡಿಯುವ ಪ್ರತಿ ಸಿಕ್ಸ್‌ಗೆ ಪಿಂಕ್‌ ಪ್ರಾಮಿಸ್‌, ಮೋದಿ ಕನಸಿಗೆ ರಾಜಸ್ಥಾನ ಫ್ರಾಂಚೈಸಿ ಸಾಥ್‌!

Hardik Pandya offers prayers at Somnath Temple. 🙏pic.twitter.com/hZNIVQ3MH3

— Johns. (@CricCrazyJohns)

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ತನ್ನ ಯಶಸ್ವಿ ನಾಯಕ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಪಟ್ಟ ಕಟ್ಟಲಾಗಿತ್ತು. ಗುಜರಾತ್ ಟೈಟಾನ್ಸ್ ನಾಯಕತ್ವ ತೊರೆದು ಮುಂಬೈ ಕೂಡಿಕೊಂಡ ಹಾರ್ದಿಕ್ ಪಾಂಡ್ಯ ಮೇಲೆ ಫ್ರಾಂಚೈಸಿ ಹಾಗೂ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಿಟ್ಟಿದ್ದರು. ಆದರೆ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಹ್ಯಾಟ್ರಿಕ್ ಸೋಲು ಅನುಭವಿಸುವ ಮೂಲಕ ಮುಖಭಂಗಕ್ಕೆ ಒಳಗಾಗಿದೆ.

Hardik Pandya at the Somnath Temple. pic.twitter.com/s9DBvG6BiL

— Mufaddal Vohra (@mufaddal_vohra)

ಒಂದು ಕಡೆ ಮುಂಬೈ ಇಂಡಿಯನ್ಸ್ ತಂಡವು ನೀರಸ ಪ್ರದರ್ಶನ ತೋರುತ್ತಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಅಭಿಮಾನಿಗಳು, ಹಾರ್ದಿಕ್ ಪಾಂಡ್ಯ ಅವರನ್ನು ಇನ್ನಿಲ್ಲದಂತೆ ಟೀಕಿಸುತ್ತಿದ್ದಾರೆ. ಈ ಎರಡು ಸವಾಲುಗಳನ್ನು ನಿಭಾಯಿಸಲು ಹಾರ್ದಿಕ್ ಪಾಂಡ್ಯ ಹೆಣಗಾಡುತ್ತಿದ್ದಾರೆ.

IPL 2024 ಸೋಲಿಲ್ಲದ ರಾಯಲ್ಸ್‌ನ್ನು ಸೋಲಿಸುತ್ತಾ ಆರ್‌ಸಿಬಿ?

Cricketer Hardik Pandya visits Somnath Temple and offers prayers. pic.twitter.com/h3Ws48E2QY

— IANS (@ians_india)

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಜರ್ನಿ ಸಾಕಷ್ಟು ಏರಿಳಿತಗಳಿಂದ ಕೂಡಿದೆ. 2015ರಲ್ಲಿ ಮುಂಬೈ ಇಂಡಿಯನ್ಸ್ ಮೂಲಕವೇ ಹಾರ್ದಿಕ್ ಪಾಂಡ್ಯ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. 2015ರಿಂದ 2021ರವರೆಗೂ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು. ಇದಾದ ಬಳಿಕ 2022ರಲ್ಲಿ ನೂತನ ತಂಡವಾದ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ನೇಮಕವಾದರು. ಚೊಚ್ಚಲ ಪ್ರಯತ್ನದಲ್ಲೇ ನಾಯಕನಾಗಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇನ್ನು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾರ್ ಟೈಟಾನ್ಸ್ ತಂಡವು ಫೈನಲ್‌ಗೇರಿ ಪ್ರಶಸ್ತಿ ಜಯಿಸುವ ನಿರೀಕ್ಷೆ ಹುಟ್ಟುಹಾಕಿತ್ತು. ಆದರೆ ಫೈನಲ್‌ನಲ್ಲಿ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸುವ ಮೂಲಕ ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

click me!