
ನವದೆಹಲಿ(ಜು.13): ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶ ಸ್ಟಾಂಕೋವಿಚ್ 2020ನೇ ವರ್ಷವನ್ನು ಭರ್ಜರಿಯಾಗಿಯೇ ಎಂಜಾಯ್ ಮಾಡುತ್ತಿದ್ದಾರೆ. 2020ನೇ ವರ್ಷದ ಮೊದಲ ದಿನವೇ ನತಾಶಗೆ ರಿಂಗ್ ತೊಡಿಸುವ ಮೂಲಕ ಹಾರ್ದಿಕ್ ಪಾಂಡ್ಯ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು.
ಇದೀಗ ಈ ಜೋಡಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದು ಕ್ರೀಡಾ ಪ್ರೇಮಿಗಳಿಗೆ ಗೊತ್ತೇ ಇರುವ ವಿಚಾರ. ಆದರೆ ಹೊಸ ವಿಷ್ಯಾ ಏನಪ್ಪ ಅಂದ್ರೆ ನತಾಶ ಎಡಗೈ ಬೆರಳಿಗೆ ಪಾಂಡ್ಯ ತೊಡಿಸಿದ್ದ ವಜ್ರದುಂಗುರ ಇದೀಗ ಎಲ್ಲರ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದೆ. ಕೆಲವು ತಿಂಗಳ ಹಿಂದಷ್ಟೇ ನತಾಶ-ಪಾಂಡ್ಯ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಬಹಿರಂಗಪಡಿಸಿದ್ದರು.
ಇದೀಗ ಜುಲೈ 10, 2020ರಂದು ಹಾರ್ದಿಕ್ ಪಾಂಡ್ಯ ಪತ್ನಿ ನತಾಶ ಇನ್‌ಸ್ಟಾಗ್ರಾಂನಲ್ಲಿ ಸೆಲ್ಫಿಯೊಂದನ್ನು ಪೋಸ್ಟ್ ಮಾಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಮುದ್ದಾದ ಕಂಗಳ ಜತೆ ಅಧ್ಭುತವಾದ ವಜ್ರದುಂಗುರದ ಫೋಟೋ ಪೋಸ್ಟ್ ಮಾಡಿದ್ದಾರೆ.
ಕೊರೋನಾ ಭೀತಿ ಹಾಗೂ ಲಾಕ್‌ಡೌನ್ ನಿಂದಾಗಿ ದೇಶಾದ್ಯಂತ ಕ್ರೀಡಾಚಟುವಟಿಕೆಗಳು ಸ್ತಬ್ಧವಾಗಿವೆ. ಈ ವರ್ಷ ಐಪಿಎಲ್ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.