ಈ ಸಲ ಐಸಿಸಿ ವಿಶ್ವಕಪ್ ಗೆದ್ದೇ ಗೆಲ್ತೇವೆ: ಭಾರತದ ನಾಯಕಿ ಹರ್ಮನ್‌ಪ್ರೀತ್‌ ಕೌರ್

Published : Aug 12, 2025, 10:41 AM IST
Harmanpreet Kaur

ಸಾರಾಂಶ

ಮುಂಬೈನಲ್ಲಿ ನಡೆದ ಟ್ರೋಫಿ ಅನಾವರಣ ಸಮಾರಂಭದಲ್ಲಿ ಐಸಿಸಿ ಮಹಿಳಾ ವಿಶ್ವಕಪ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌. ಈ ಬಾರಿ ಗೆಲುವಿನ ತಡೆಗೋಡೆ ಮುರಿಯುವ ಭರವಸೆ ವ್ಯಕ್ತಪಡಿಸಿದರು.

ಮುಂಬೈ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಮಹಿಳಾ ಏಕದಿನ ವಿಶ್ವಕಪ್ ಗೆದ್ದು ಐಸಿಸಿ ಟ್ರೋಫಿ ಗೆಲುವಿನ ಬರವನ್ನು ನೀಗಿಸಲಿದ್ದೇವೆ ಎಂದು ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಹರ್ಮನ್‌ಕ್ರೀತ್‌ ಕೌರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದ ಮಹಿಳೆಯರ ತಂಡ ಇದುವರೆಗೆ ಐಸಿಸಿ ಟ್ರೋಫಿ ಗೆದ್ದಿಲ್ಲ. 2017ರಲ್ಲಿ ಫೈನಲ್‌ನಲ್ಲಿ ಸೋತು ರನ್ನರ್‌ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಗ್ಗೆ ಸೋಮವಾರ ಟ್ರೋಫಿ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಹರ್ಮನ್‌, ‘ಎಲ್ಲಾ ಭಾರತೀಯರು ಕಾಯುತ್ತಿರುವ ತಡೆಗೋಡೆಯನ್ನು ಮುರಿಯಲು ನಾವು ಕಾಯುತ್ತಿದ್ದೇವೆ. ವಿಶ್ವಕಪ್‌ ಯಾವಾಗಲೂ ವಿಶೇಷವಾಗಿರುತ್ತದೆ. ಯಾವಾಗಲೂ ನನ್ನ ದೇಶಕ್ಕಾಗಿ ಏನಾದರೂ ವಿಶೇಷವಾದದ್ದನ್ನು ಮಾಡಲು ಬಯಸುತ್ತೇನೆ’ ಎಂದಿದ್ದಾರೆ. ಸೆಪ್ಟೆಂಬರ್ 30ರಿಂದ ನವೆಂಬರ್ 2ರ ತನಕ ಮಹಿಳಾ ಏಕದಿನ ವಿಶ್ವಕಪ್ ನಡೆಯಲಿದೆ.

 

ಯುವರಾಜ್ ಸಿಂಗ್ ನೋಡುತ್ತಿದ್ದಂತೆ ಸ್ಪೂರ್ತಿ ಸಿಗುತ್ತೆ: ನಾನು ಯುವರಾಜ್ ಸಿಂಗ್‌ ಅಣ್ಣ ಅವರನ್ನು ನೋಡಿದಾಗಲೆಲ್ಲಾ ಸಾಕಷ್ಟು ಸ್ಪೂರ್ತಿ ಸಿಗುತ್ತೆ ಎಂದು ಭಾರತ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹೇಳಿದ್ದಾರೆ. ಯುವರಾಜ್ ಸಿಂಗ್ ಕ್ಯಾನ್ಸರ್ ವಿರುದ್ದ ಹೋರಾಡುತ್ತಲೇ 2011ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತ, ಬಾಂಗ್ಲಾದೇಶ ಹಾಗೂ ಶ್ರೀಲಂಕಾದಲ್ಲಿ ಆಯೋಜನೆಗೊಂಡಿದ್ದ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಅದ್ಭುತ ಆಲ್ರೌಂಡ್ ಪ್ರದರ್ಶನ ತೋರುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದ್ದರು.

ಮಹಿಳಾ ವಿಶ್ವಕಪ್‌ಗೆ 50 ದಿನ ಬಾಕಿ: ಟ್ರೋಫಿ ಟೂರ್‌ ಶುರು

ಮುಂಬೈ: ಈ ಬಾರಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಸೆ.30ಕ್ಕೆ ಆರಂಭಗೊಳ್ಳಲಿದ್ದು, ಟೂರ್ನಿಗೆ 50 ದಿನಗಳಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಸೋಮವಾರ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿ, ಟ್ರೋಫಿ ಟೂರ್‌ಗೆ ಚಾಲನೆ ನೀಡಲಾಯಿತು.

ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಐಸಿಸಿ ಮುಖ್ಯಸ್ಥ ಜಯ್‌ ಶಾ ಟ್ರೋಫಿ ಅನಾವರಣಗೊಳಿಸಿದರು. ಇನ್ನು ದೇಶದ ಹಲವು ನಗರಗಳಲ್ಲಿ ‘ಟ್ರೋಫಿ ಟೂರ್’ ನಡೆಯಲಿದೆ.

ಸಮಾರಂಭದಲ್ಲಿ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌, ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್‌, ಈಗಿನ ನಾಯಕಿ ಹರ್ಮನ್‌ಪ್ರೀತ್‌ ಕೌರ್‌, ಉಪನಾಯಕಿ ಸ್ಮೃತಿ ಮಂಧನಾ, ತಾರಾ ಆಟಗಾರ್ತಿ ಜೆಮಿಮಾ ರೋಡ್ರಿಗ್ಸ್‌, ಬಿಸಿಸಿಐ ಕಾರ್ಯದರ್ಶಿ ದೇವಜಿತ್‌ ಸೈಕಿಯಾ ಉಪಸ್ಥಿತರಿದ್ದರು.

ಟಿ20: ಭಾರತ ಮಹಿಳಾ‘ಎ’ಗೆ 114 ರನ್ ಸೋಲು

ಮಕಾಯ್(ಆಸ್ಟ್ರೇಲಿಯಾ): ಆಸ್ಟ್ರೇಲಿಯಾ ‘ಎ’ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಭಾರತ ‘ಎ’ ತಂಡ 114 ರನ್‌ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು ಆಸೀಸ್‌ 2-0 ಅಂತರದಲ್ಲಿ ಗೆದ್ದುಕೊಂಡಿತು. ಮೊದಲು ಬ್ಯಾಟ್‌ ಮಾಡಿದ ಆಸೀಸ್‌ 4 ವಿಕೆಟ್‌ಗೆ 187 ರನ್‌ ಕಲೆಹಾಕಿತು. ನಾಯಕಿ ಅಲೀಸಾ ಹೀಲಿ 44 ಎಸೆತಕ್ಕೆ 70 ರನ್‌ ಸಿಡಿಸಿದರು. ದೊಡ್ಡ ಗುರಿ ಬೆನ್ನತ್ತಿದ ರಾದಾ ಯಾದವ್‌ ನಾಯಕತ್ವದ ಭಾರತ 15.1 ಓವರ್‌ಗಳಲ್ಲಿ 73 ರನ್‌ಗೆ ಆಲೌಟಾಯಿತು. ಕಿಮ್‌ ಗಾರ್ಥ್‌ 7 ರನ್‌ಗೆ 4 ವಿಕೆಟ್‌ ಪಡೆದರು. 3ನೇ ಪಂದ್ಯ ಭಾನುವಾರ ನಡೆಯಲಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ
ಕಾಂಗರೂ ನಾಡಲ್ಲಿ ಶತಕದ ಬರ ನೀಗಿಸಿಕೊಂಡ ಜೋ ರೂಟ್! ಕೊನೆಗೂ ತಪ್ಪಿದ ಹೇಡನ್ 'ಬೆತ್ತಲೆ ಸೇವೆ'!