ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆಲುವಿನ ಬೆನ್ನಲ್ಲೇ ಭಾರತ ತಂಡದ ನಾಯಕತ್ವಕ್ಕೆ ಗುಡ್‌ ಬೈ ಹೇಳಿದ ಹರ್ಮನ್‌ಪ್ರೀತ್ ಕೌರ್..! ಮುಂದಿನ ಕ್ಯಾಪ್ಟನ್ RCB ನಾಯಕಿ?

Published : Oct 06, 2026, 11:52 AM ISTUpdated : Oct 06, 2026, 12:05 PM IST
Harmanpreet Kaur

ಸಾರಾಂಶ

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದಿದ್ದು, ಆಟಗಾರ್ತಿಯಾಗಿ ಮುಂದುವರೆಯಲಿದ್ದಾರೆ. ಇವರ ಸ್ಥಾನಕ್ಕೆ ಉಪನಾಯಕಿ ಸ್ಮೃತಿ ಮಂಧನಾ ಮುಂದಿನ ನಾಯಕಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಹರ್ಮನ್‌ಪ್ರೀತ್ ಕೌರ್ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.

Harmanpreet Kaur Steps Down; Smriti Mandhana in Line as Captain | ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಇದೀಗ ಅಧಿಕೃತವಾಗಿ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಭಾರತಕ್ಕೆ ಚೊಚ್ಚಲ ಐಸಿಸಿ ಏಕದಿನ ವಿಶ್ವಕಪ್ ಹಾಗೂ ಏಷ್ಯನ್ ಗೇಮ್ಸ್‌ನಲ್ಲಿ ದೇಶಕ್ಕೆ ಚಿನ್ನ ಗೆದ್ದು ಕೊಡುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದ ಹರ್ಮನ್‌ಪ್ರೀತ್ ಇದೀಗ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಿಂದ ಕೆಳಗಿಳಿದಿದ್ದರೂ, ಆಟಗಾರ್ತಿಯಾಗಿ ಮುಂದುವರೆಯಲು ತೀರ್ಮಾನಿಸಿದ್ದಾರೆ.

ಆರ್‌ಸಿಬಿ ನಾಯಕಿ ಸ್ಮೃತಿ ಮಂಧನಾ ಭಾರತದ ಮುಂದಿನ ಕ್ಯಾಪ್ಟನ್:

ಇನ್ನು ಹರ್ಮನ್‌ಪ್ರೀತ್ ಕೌರ್, ಇದೀಗ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದಿರುವ ಬೆನ್ನಲ್ಲೇ, ಸಾಕಷ್ಟು ಸಮಯದಿಂದಲೂ ಭಾರತ ಕ್ರಿಕೆಟ್ ತಂಡದ ಉಪನಾಯಕಿಯಾಗಿ ಕಾರ್ಯ ನಿರ್ವಹಿಸುತ್ತಾ ಬಂದಿರುವ ಆರ್‌ಸಿಬಿ ನಾಯಕಿ ಸ್ಮೃತಿ ಮಂಧನಾಗೆ ಇದೀಗ ಭಾರತ ತಂಡದ ನಾಯಕಿಯಾಗುವ ಸಾಧ್ಯತೆ ದಟ್ಟವಾಗಿದೆ. ಗುವಾಹಟಿಯಲ್ಲಿ ಇತ್ತೀಚೆಗೆ ಬಿಸಿಸಿಐ, ಭಾರತ ಮಹಿಳಾ ಕ್ರಿಕೆಟ್ ತಂಡದ ಇತ್ತೀಚಿಗಿನ ಪ್ರದರ್ಶನ ಹಾಗೂ ಮುಂಬರುವ ಮಹತ್ವದ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಸಮಾಲೋಚನ ಸಭೆ ನಡೆದಿತ್ತು. ಈ ಸಭೆಯ ನೇತೃತ್ವವನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ವಹಿಸಿದ್ದರೇ, ನಾಯಕಿ ಹರ್ಮನ್‌ಪ್ರೀತ್ ಕೌರ್, ಉಪನಾಯಕಿ ಸ್ಮೃತಿ ಮಂಧನಾ ಹಾಗೂ ಮಹಿಳಾ ಕ್ರಿಕೆಟ್ ತಂಡದ ಹೆಡ್‌ ಕೋಚ್ ಅಮುಲ್ ಮಜುಂದಾರ್ ಕೂಡಾ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಭಾವನಾತ್ಮಕ ಸಂದೇಶ ರವಾನಿಸಿದ ಹರ್ಮನ್‌ಪ್ರೀತ್ ಕೌರ್:

ತಾವು ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುತ್ತಿರುವುದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರ್ಮನ್‌ಪ್ರೀತ್ ಕೌರ್, ದೀರ್ಘ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದರಲ್ಲಿ, ಈ ತೀರ್ಮಾನ ತೆಗೆದುಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ. ಆದರೆ ಇದೀಗ ನಾಯಕತ್ವದಿಂದ ಕೆಳಗಿಳಿಯಲು ಸರಿಯಾದ ಸಮಯ ಎಂದೆನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ. ಮಿಥಾಲಿ ರಾಜ್ ಬಳಿಕ 2016ರಲ್ಲಿ ಹರ್ಮನ್‌ಪ್ರೀತ್ ಕೌರ್ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ನೇಮಕವಾಗಿದ್ದರು.

'ನಾನಿಂದು ಭಾರತದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ. ಈ ನಿರ್ಧಾರ ತೆಗೆದುಕೊಳ್ಳುವುದು ಸುಲಭವಾಗಿರಲಿಲ್ಲ. ಈ ಪಯಣದಲ್ಲಿ ಸಾಕಷ್ಟು ಒಳ್ಳೆಯ ನೆನಪುಗಳು, ತ್ಯಾಗ ಹಾಗೂ ಕೆಲವೊಂದು ಸುಂದರ ಕ್ಷಣಗಳನ್ನು ನಾನು ನನ್ನ ಜೀವನ ಪರ್ಯಂತ ನೆನಪಿನಲ್ಲಿಟ್ಟುಕೊಳ್ಳುತ್ತೇನೆ. ನಾನು ನನ್ನ ತಂಡಕ್ಕಾಗಿ ಎಲ್ಲವನ್ನು ನೀಡಿದ್ದೇನೆ' ಎಂದು ಹರ್ಮನ್‌ಪ್ರೀತ್ ಕೌರ್ ಬರೆದುಕೊಂಡಿದ್ದಾರೆ.

ನಾಯಕಿಯಾಗಿ ಹರ್ಮನ್‌ಪ್ರೀತ್ ಕೌರ್ ಟ್ರ್ಯಾಕ್ ರೆಕಾರ್ಡ್

ಹರ್ಮನ್‌ಪ್ರೀತ್ ಕೌರ್ ಒಟ್ಟಾರೆಯಾಗಿ ಭಾರತ ಪರ 211 ಪಂದ್ಯಗಳಲ್ಲಿ ನಾಯಕಿಯಾಗಿ ತಂಡವನ್ನು ಮುನ್ನಡೆಸಿದ್ದಾರೆ. ಈ ಪೈಕಿ 51 ಏಕದಿನ ಪಂದ್ಯಗಳಲ್ಲಿ ಭಾರತ 30 ಪಂದ್ಯಗಳನ್ನು ಜಯಿಸಿದೆ. ಇನ್ನು 155 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಹರ್ಮನ್‌ಪ್ರೀತ್ ಕೌರ್, 92 ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಈ ಮೂಲಕ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ಪರ ಅತಿಹೆಚ್ಚು ಪಂದ್ಯಗಳನ್ನು ನಾಯಕಿಯಾಗಿ ಮುನ್ನಡೆಸಿದ ದಾಖಲೆ ಹರ್ಮನ್‌ಪ್ರೀತ್ ಕೌರ್ ಹೆಸರಿನಲ್ಲಿದೆ. ಇನ್ನು ಐದು ಟೆಸ್ಟ್‌ ಪಂದ್ಯಗಳ ಪೈಕಿ ಭಾರತ ತಂಡವು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲು ಕಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಟೀಂ ಇಂಡಿಯಾದಿಂದ ಹೊರಬಿದ್ದ ಆಘಾತದ ಬೆನ್ನಲ್ಲೇ ಸೂರ್ಯಕುಮಾರ್‌ಗೆ ಮತ್ತೊಂದು ಶಾಕ್
ಚಾಂಪಿಯನ್ ಆಟಗಾರನಿಗೆ ಇದೆಂಥಾ ಅವಮಾನ? ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟವನಿಗೆ ಮುಂಬೈ ರಣಜಿ ತಂಡದಲ್ಲಿಲ್ಲ ಸ್ಥಾನ..!