ವಿದ್ಯಾರ್ಥಿನಿಯ ಖಾಸಗಿ ಫೋಟೋ ಇಟ್ಕೊಂಡು ಬ್ಲಾಕ್‌ಮೇಲ್; IPL ಸ್ಟಾರ್ ಬ್ಯಾಟರ್‍‌ನ ಬಂಧನಕ್ಕೆ ಹೈಕೋರ್ಟ್‌ ಆದೇಶ

Published : Jul 20, 2026, 08:00 AM IST
abhishek porel

ಸಾರಾಂಶ

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಭಿಷೇಕ್ ಪೋರೆಲ್ ಮೇಲೆ ವೈದ್ಯಕೀಯ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿಬಂದಿದೆ. ಕಲ್ಕತ್ತಾ ಹೈಕೋರ್ಟ್ ಈ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆದೇಶ ನೀಡಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ. ಆಗಸ್ಟ್ 11 ರಂದು ಮುಂದಿನ ವಿಚಾರಣೆ ನಡೆಯಲಿದೆ.

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಬ್ಯಾಟರ್ ಅಭಿಷೇಕ್ ಪೋರೆಲ್ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳಿಗೆ ಖಾಸಗಿ ಫೋಟೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಕಲ್ಕತ್ತಾ ಹೈಕೋರ್ಟ್ ಅಭಿಷೇಕ್ ಸೇರಿದಂತೆ ಇಬ್ಬರನ್ನು ಬಂಧಿಸುವಂತೆ ಆದೇಶ ನೀಡಿದೆ. ಪಶ್ಚಿಮ ಬಂಗಾಳದವರಾದ ಪೋರೆಲ್, ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಏನಿದು ಪ್ರಕರಣ?

ಕೊಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರಿದ್ದ ಪೀಠವು ಆದೇಶವನ್ನು ನೀಡಿದೆ. ಆರೋಪಿಗಳ ಬಳಿ ಇರುವ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವಂತೆ ಹೂಗ್ಲಿಯ ಮಗರಾ ಪೊಲೀಸ್ ಠಾಣೆಗೆ ಸೂಚಿಸಲಾಗಿದೆ. ಯಾವುದೇ ಆಕ್ಷೇಪಾರ್ಹ ಅಥವಾ ಖಾಸಗಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗದಂತೆ ತಡೆಯಲು ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.

ಪ್ರೀತಿಯ ಹೆಸರಿನಲ್ಲಿ ಲೈಂಗಿಕ ಕಿರುಕುಳ

ವೈದ್ಯಕೀಯ ವಿದ್ಯಾರ್ಥಿನಿಯು ನೀಡಿರುವ ದೂರಿನ ಪ್ರಕಾರ, ಅಭಿಷೇಕ್ ಪೋರೆಲ್ ಪ್ರೀತಿಯ ಹೆಸರಿನಲ್ಲಿ ನಂಬಿಸಿ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ. ತನ್ನ ಖಾಸಗಿ ಫೋಟೋ ಮತ್ತು ವೀಡಿಯೊಗಳನ್ನು ಚಿತ್ರೀಕರಿಸಿಕೊಂಡು, ಅವುಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂತ್ರಸ್ತೆಯ ಪರ ವಕೀಲರಾದ ರಣದೇವ್ ಸೇನ್‌ಗುಪ್ತಾ ಮತ್ತು ಆಕಾಶ್ ಗಂಗೋಪಾಧ್ಯಾಯ ಅವರು, ಇನ್ನೂ ಹಲವು ಮಹಿಳೆಯರನ್ನು ಇದೇ ರೀತಿ ಜಾಲಕ್ಕೆ ಸಿಲುಕಿಸಿ ಬ್ಲ್ಯಾಕ್‌ಮೇಲ್ ಮಾಡಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 11ಕ್ಕೆ ಮುಂದಿನ ವಿಚಾರಣೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಮುಂದಿನ ವಿಚಾರಣೆಯು ಆಗಸ್ಟ್ 11 ರಂದು ನಡೆಯಲಿದ್ದು, ಅಷ್ಟರೊಳಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. 2023ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೂಲಕ ಐಪಿಎಲ್ ಜಗತ್ತಿಗೆ ಪದಾರ್ಪಣೆ ಮಾಡಿದ ಅಭಿಷೇಕ್ ಪೋರೆಲ್, ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. 35 ಪಂದ್ಯಗಳನ್ನ ಆಡಿರುವ ಪೊರೆಲ್, 25.63 ಸರಾಸರಿಯಲ್ಲಿ 769 ರನ್ ಗಳಿಸಿದ್ದಾರೆ. ಒಳ್ಳೆಯ ಫಾರ್ಮ್‌ನಲ್ಲಿದ್ದ ಈ ಯುವ ಆಟಗಾರ ಈಗ ಇಂತಹ ಗಂಭೀರ ಕ್ರಿಮಿನಲ್ ಪ್ರಕರಣದಲ್ಲಿ ಸಿಲುಕಿರುವುದು ಅವರ ಕ್ರಿಕೆಟ್ ಜೀವನಕ್ಕೆ ದೊಡ್ಡ ಹೊಡೆತ ನೀಡುವ ಸಾಧ್ಯತೆಯಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ರೋಹಿತ್ ಶತಕ ಬಾರಿಸಿಯೂ ಬ್ಯಾಟ್ ಎತ್ತಲಿಲ್ಲ' ಇದು ಕೊನೆಯ ODI ಆಗಿತ್ತಾ? ಗಿಲ್ ಹೇಳಿದ್ದೇನು?
ಡ್ರೆಸ್ಸಿಂಗ್ ರೂಮ್‌ನಲ್ಲಿ ಮೆಂಟಲ್ ಟಾರ್ಚರ್! ರೋಹಿತ್ ಕಥೆ ಹಾಗಿರಲಿ, ದಿಢೀರ್ ನಿವೃತ್ತಿಗೆ ಮುಂದಾದ್ರಾ ಆ ಸ್ಟಾರ್ ಕ್ರಿಕೆಟರ್?