ಚಿನ್ನಸ್ವಾಮಿ ಕ್ರೀಡಾಂಗಣ ನಿರ್ಮಾಣಕ್ಕೆ ಎಂಜಿ ರೋಡ್‌ ಬಳಿ ಜಾಗ ಸಿಕ್ಕಿದ್ದು ಹೇಗೆ ಗೊತ್ತಾ?

Published : Nov 23, 2024, 03:18 PM IST
ಚಿನ್ನಸ್ವಾಮಿ ಕ್ರೀಡಾಂಗಣ ನಿರ್ಮಾಣಕ್ಕೆ ಎಂಜಿ ರೋಡ್‌ ಬಳಿ ಜಾಗ ಸಿಕ್ಕಿದ್ದು ಹೇಗೆ ಗೊತ್ತಾ?

ಸಾರಾಂಶ

ಚಿನ್ನಸ್ವಾಮಿ ಸ್ಟೇಡಿಯಂ ನಿರ್ಮಾಣಕ್ಕೆ ಬೆಂಗಳೂರಿನ ಹೃದಯ ಭಾಗದಲ್ಲಿ ಅವಕಾಶ ಸಿಕ್ಕಿದ್ದು ಹೇಗೆ ಎನ್ನುವುದರ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ

ಬೆಂಗಳೂರು: 1972ರಲ್ಲಿ ನಿರ್ಮಾಣಗೊಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಇಂದು ಕರ್ನಾಟಕದ ಹೆಗ್ಗುರುತು. ಆದರೆ ಈ ಕ್ರೀಡಾಂಗಣ ನಿರ್ಮಾಣದ ಹಿಂದೆ ಹಲವು ಕುತೂಹಲಕಾರಿ ಸಂಗತಿಗಳಿವೆ.

ಬೆಂಗಳೂರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ) 2 ದಶಕಗಳ ಕಾಲ ಅವಿರತ ಶ್ರಮಪಟ್ಟಿದೆ. 1953ರಲ್ಲಿ ಕೆಎಸ್‌ಸಿಎ ಅಧ್ಯಕ್ಷರಾಗಿ ಶ್ರೀನಿವಾಸನ್‌, ಕಾರ್ಯದರ್ಶಿಯಾಗಿ ಚಿನ್ನಸ್ವಾಮಿ ನೇಮಕಗೊಂಡ ಬಳಿಕ ಇಬ್ಬರೂ ಕ್ರೀಡಾಂಗಣಕ್ಕಾಗಿ ಸರ್ಕಾರಿ ಕಚೇರಿಗಳನ್ನು ಅಲೆದಾಡಿದ್ದಾರೆ. ಮೊದಲು ಶೇಷಾದ್ರಿಪುರಂ, ಬಳಿಕ ಶುಭಾಷ್‌ನಗರದಲ್ಲಿ ಕ್ರೀಡಾಂಗಣಕ್ಕೆ ಸರ್ಕಾರ ಜಾಗ ನೀಡಿತ್ತು. ಅದನ್ನು ಚಿನ್ನಸ್ವಾಮಿ ಅವರು ತಿರಸ್ಕರಿಸಿ, ಎಂಜಿ ರೋಡ್‌ ಹಾಗೂ ಕಬ್ಬನ್‌ ಪಾರ್ಕ್ ಬಳಿ ಜಾಗ ಕೇಳಿದ್ದರು.

ಆದರೆ ಬೆಂಗಳೂರು ಸಿಟಿ ಕಾರ್ಪೊರೇಶನ್‌ಗೆ ಒಳಪಟ್ಟಿದ್ದ ಆ ಜಾಗದಲ್ಲಿ ಅಂದಿನ ಪ್ರಧಾನಿ ಜವಹರಲಾಲ್‌ ನೆಹರೂ ಅವರು ಕ್ಯಾನ್ಸರ್‌ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿದ್ದರು. ಪಟ್ಟುಬಿಡದ ಚಿನ್ನಸ್ವಾಮಿ, ಶ್ರೀನಿವಾಸನ್‌ ಅವರು ದೆಹಲಿಗೂ ತೆರಳಿ, ಜಾಗವನ್ನು ಕ್ರೀಡಾಂಗಣಕ್ಕೆಂದು 99 ವರ್ಷಕ್ಕೆ ಲೀಸ್‌ಗೆ ಪಡೆಯಲು ಯಶಸ್ವಿಯಾಗಿದ್ದರು.

ಬೆಂಗಳೂರಿನ ಕ್ರಿಕೆಟ್ ಸ್ಟೇಡಿಯಂಗೆ ಎಂ ಚಿನ್ನಸ್ವಾಮಿ ಹೆಸರು ಬಂದಿದ್ದು ಹೇಗೆ?

ಇನ್ನು, ಕ್ರೀಡಾಂಗಣ ಪಿಚ್‌ ನಿರ್ಮಾಣ ಹೊಣೆ ಕೃಷಿ ತಜ್ಞ, ಕ್ರಿಕೆಟಿಗರೂ ಆಗಿದ್ದ ಜಿ.ಕಸ್ತೂರಿ ರಂಗನ್‌ ಅವರಿಗೆ ನೀಡಲಾಗಿತ್ತು. ಗುಡ್ಡವಾಗಿದ್ದ ಜಾಗ ಸಮತಟ್ಟು ಮಾಡಿ ಕ್ರೀಡಾಂಗಣ ನಿರ್ಮಿಸಲು 100ರಷ್ಟು ಕಾರ್ಮಿಕರು 6 ತಿಂಗಳ ಕಾಲ ಕೆಲಸ ಮಾಡಿದ್ದರು. ಕಾರ್ಮಿಕರಿಗೆ ವೇತನ ನೀಡಲ ಕಷ್ಟವಾದಾಗ, ಕಸ್ತೂರಿ ರಂಗನ್‌ ಅವರೇ ತಮ್ಮ ಉಳಿತಾಯದ ಹಣದಲ್ಲಿ ವೇತನ ನೀಡಿದ್ದರು ಎಂಬುದು ತಿಳಿದುಬಂದಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೈಲೈಟ್ಸ್‌

1. 25 ಟೆಸ್ಟ್‌ ಪಂದ್ಯಗಳಿಗೆ ಆತಿಥ್ಯ ವಹಿಸಿದ ದೇಶದ ಕೇವಲ 5ನೇ ಕ್ರೀಡಾಂಗಣ.

2. ಐಪಿಎಲ್‌ನ ತಂಡ ಹಾಗೂ ಆಟಗಾರನ ವೈಯಕ್ತಿಕ ಗರಿಷ್ಠ ಮೊತ್ತ ದಾಖಲಾಗಿದ್ದು ಇಲ್ಲೇ.

3. ಚಿನ್ನಸ್ವಾಮಿಯಲ್ಲಿ 2013ರಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಹಿತ್‌ ಏಕದಿನದಲ್ಲಿ 209 ರನ್‌ ಗಳಿಸಿದ್ದರು.

4. ಅಂ.ರಾ. ಟಿ20ಯ ಏಕೈಕ ‘ಡಬಲ್‌ ಸೂಪರ್‌ ಓವರ್‌ ಪಂದ್ಯ’ ನಡೆದಿದ್ದು ಇದೇ ಕ್ರೀಡಾಂಗಣದಲ್ಲಿ.

5. ಮೈದಾನದಲ್ಲಿ ಸಬ್‌ ಏರ್‌ ವ್ಯವಸ್ಥೆ ಇರುವ ವಿಶ್ವದ ಏಕೈಕ ಕ್ರಿಕೆಟ್‌ ಕ್ರೀಡಾಂಗಣ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯ ನಡೆದು ಇಂದಿಗೆ 50 ವರ್ಷ!

ಚಿನ್ನಸ್ವಾಮಿ ಕ್ರೀಡಾಂಗಣದ ಅಂಕಿ-ಅಂಶ:

31 ಏಕದಿನ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪುರುಷರ ಏಕದಿನ ಪಂದ್ಯಗಳು 31.

25 ಟೆಸ್ಟ್‌: ಈ ಕ್ರೀಡಾಂಗಣದಲ್ಲಿ ಒಟ್ಟು 25 ಟೆಸ್ಟ್‌ ಪಂದ್ಯಗಳು ನಡೆದಿವೆ.

10 ಟಿ20:  2012ರಿಂದ 2024ರ ವರೆಗೆ 12 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಗೆ ಆತಿಥ್ಯ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ