ತಮ್ಮ ಕ್ರಿಕೆಟ್‌ ಭವಿಷ್ಯದ ಬಗ್ಗೆ ತುಟಿಬಿಚ್ಚಿದ ಶಿಖರ್ ಧವನ್..!

Published : May 21, 2022, 02:07 PM IST
ತಮ್ಮ ಕ್ರಿಕೆಟ್‌ ಭವಿಷ್ಯದ ಬಗ್ಗೆ ತುಟಿಬಿಚ್ಚಿದ ಶಿಖರ್ ಧವನ್..!

ಸಾರಾಂಶ

* ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ ಶಿಖರ್ ಧವನ್ * ತಮ್ಮ ಕ್ರಿಕೆಟ್ ಭವಿಷ್ಯದ ಬಗ್ಗೆ ಮಾತನಾಡಿದ ಗಬ್ಬರ್‌ ಸಿಂಗ್ * ಎರಡು-ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿರುವುದಾಗಿ ತಿಳಿಸಿದ ಡೆಲ್ಲಿ ಕ್ರಿಕೆಟರ್

ಮುಂಬೈ(ಮೇ.21): ಭಾರತ ಸೀಮಿತ ಓವರ್‌ಗಳ ಕ್ರಿಕೆಟ್‌ ತಂಡದಲ್ಲಿ ಶಿಖರ್ ಧವನ್ (Team India Cricketer Shikhar Dhawan) ತನ್ನದೇ ಆದ ಪಾತ್ರವನ್ನು ನಿಭಾಯಿಸುತ್ತಾ ಬಂದಿದ್ದಾರೆ. ವಯಸ್ಸಿನ ಕಾರಣದಿಂದಾಗಿ ಧವನ್ ಕ್ರಿಕೆಟ್ ವೃತ್ತಿಬದುಕು ಮುಗಿಯಿತಾ ಎನ್ನುವಂತಹ ಮಾತುಗಳು ಕೇಳಿ ಬರಲಾರಂಭಿಸಿವೆ. ಇದರ ಬೆನ್ನಲ್ಲೇ ತಮ್ಮ ಟೀಂ ಇಂಡಿಯಾ ಕ್ರಿಕೆಟ್ ಭವಿಷ್ಯದ ಬಗ್ಗೆ ಗಬ್ಬರ್‌ ಸಿಂಗ್ ಖ್ಯಾತಿಯ ಶಿಖರ್ ಧವನ್ ತುಟಿಬಿಚ್ಚಿದ್ದು, ಇನ್ನೂ ಎರಡು-ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿರುವುದಾಗಿ ಡೆಲ್ಲಿ ಮೂಲದ ಎಡಗೈ ಬ್ಯಾಟರ್ ಖಚಿತಪಡಿಸಿದ್ದಾರೆ.

36 ವರ್ಷದ ಶಿಖರ್ ಧವನ್, 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier league 2022) ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಅದ್ಭುತ ಪ್ರದರ್ಶನ ಮೂಲಕ ಮಿಂಚಿದ್ದರು. ಪಂಜಾಬ್ ಕಿಂಗ್ಸ್ (Punjab Kings Opener) ಆರಂಭಿಕ ಬ್ಯಾಟರ್ ಶಿಖರ್ ಧವನ್ ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 13 ಪಂದ್ಯಗಳನ್ನಾಡಿ 421 ರನ್ ಸಿಡಿಸಿ ಮಿಂಚಿದ್ದಾರೆ. ಶಿಖರ್ ಧವನ್ ಐಪಿಎಲ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದು, 2011ರಿಂದೀಚಗೆ ಪ್ರತಿ ಆವೃತ್ತಿಯಲ್ಲೂ ಧವನ್ 300+ ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಷ್ಟೇ ಅಲ್ಲದೇ ಶಿಖರ್ ಧವನ್ ಕಳೆದ ವರ್ಷ ಟೀಂ ಇಂಡಿಯಾ ಸೀಮಿತ ಓವರ್‌ಗಳ ಸರಣಿಯನ್ನಾಡಲು ಶ್ರೀಲಂಕಾ ಪ್ರವಾಸ ಕೈಗೊಂಡಾಗ ನಾಯಕನಾಗಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಿದ್ದರು. ಆದರೆ ಇದೆಲ್ಲದರ ಹೊರತಾಗಿಯೂ ಶಿಖರ್ ಧವನ್ ಅವರನ್ನು ಕಳೆದ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಿಂದ ಕೈಬಿಡಲಾಗಿತ್ತು. ಆದರೆ ಛಲಬಿಡದ ಧವನ್, ಐಪಿಎಲ್‌ನಲ್ಲಿ ಮತ್ತೊಮ್ಮೆ ರನ್ ಮಳೆ ಹರಿಸುವ ಮೂಲಕ ಟೀಂ ಇಂಡಿಯಾಗೆ (Team India) ಕಮ್‌ಬ್ಯಾಕ್ ಮಾಡುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದು, ಜೂನ್‌ 09ರಿಂದ ತವರಿನಲ್ಲಿ ಆರಂಭವಾಗಲಿರುವ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

ನಾನು ಭಾರತ ತಂಡದ ಅವಿಭಾಜ್ಯ ಅಂಗವಾಗಿದ್ದರೂ ಸಹಾ, ಈಗಲೂ ನನಗೆ ಅನಿಸೋದು, ನನ್ನ ಅನುಭವವನ್ನು ಬಳಸಿಕೊಂಡು ಟಿ20 ಕ್ರಿಕೆಟ್‌ನಲ್ಲೂ ನಾನು ತಂಡಕ್ಕೆ ಉತ್ತಮ ಕಾಣಿಕೆ ನೀಡಬಲ್ಲೆ ಎಂದು. ಟಿ20 ಕ್ರಿಕೆಟ್ ಮಾದರಿಯಲ್ಲಿ ನಾನು ಉತ್ತಮ ಪ್ರದರ್ಶನ ನೀಡುತ್ತಲೇ ಬಂದಿದ್ದೇನೆ. ನನಗೆ ಯಾವೆಲ್ಲಾ ಪಾತ್ರವನ್ನು ನಿಭಾಯಿಸಲು ನೀಡಲಾಗಿದೆಯೋ ಅದನ್ನೆಲ್ಲ ಅಚ್ಚುಕಟ್ಟಾಗಿ ನಿರ್ವಹಿಸಿದ್ದೇನೆ. ಚುಟುಕು ಕ್ರಿಕೆಟ್‌ ವಿಚಾರದಲ್ಲಿ ಅದು ಐಪಿಎಲ್ ಆಗಲಿ ಅಥವಾ ದೇಸಿ ಕ್ರಿಕೆಟ್‌ನಲ್ಲಾಗಲಿ ಸ್ಥಿರ ಪ್ರದರ್ಶನ ತೋರಿದ್ದೇನೆ ಹಾಗೂ ಎಂಜಾಯ್ ಮಾಡುತ್ತಾ ಆಡಿದ್ದೇನೆ. ಸ್ಥಿರ ಪ್ರದರ್ಶನವೆಂದರೆ ಕೇವಲ ಅರ್ಧಶತಕ ಅಥವಾ ಶತಕ ಬಾರಿಸುವ ವಿಚಾರ ಮಾತ್ರವಾಗಿರದೇ, ಪರಿಸ್ಥಿತಿಗೆ ತಕ್ಕಂತೆ ಆಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದೇನೆ ಎಂದು ಎನ್‌ಡಿಟಿವಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

IPL 2022 ಟೂರ್ನಿಯಲ್ಲಿ ಕನ್ನಡದ ಕಂಪು, ಸ್ಟಾರ್ ಆಟಗಾರರ ಬಾಯಲ್ಲಿ ಕನ್ನಡ ಕಲರವ..!

ರಾಹುಲ್ ದ್ರಾವಿಡ್‌, ಟೀಂ ಇಂಡಿಯಾ ಹೆಡ್‌ ಕೋಚ್ (Rahul Dravid Team India Head Coach) ಆಗಿ ಅಧಿಕಾರ ಸ್ವೀಕರಿಸುವ ಮುನ್ನ ಶಿಖರ್ ಧವನ್ ನೇತೃತ್ವದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿತ್ತು. 3 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತ್ತು. ಇನ್ನು ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾ ಪಾಳಯದಲ್ಲಿ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಹಲವು ಆಟಗಾರರು ಬೆಂಚ್ ಕಾಯಿಸುವಂತಾಗಿತ್ತು. ಹೀಗಾಗಿ ಲಂಕಾ ಎದುರು ಟಿ20 ಸರಣಿಯನ್ನು ಕೈಚೆಲ್ಲಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ