ಐಸಿಸಿ ನೂತನ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಟಾಪ್ 10 ಟೆಸ್ಟ್ ಬ್ಯಾಟ್ಸ್‌ಮನ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೊಹ್ಲಿ ರ‍್ಯಾಂಕ್ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗ ಸ್ಥಾನದ ವಿವರ ಇಲ್ಲಿದೆ.
ದುಬೈ(ನ.26): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪ್ರಕಟಗೊಂಡಿದೆ. ಬಾಂಗ್ಲಾ ಸರಣಿಯಲ್ಲಿ ದ್ವಿಶತಕದ ಮೂಲಕ ಮಿಂಚಿದ ಕನ್ನಡಿಗ ಮಯಾಂಕ್ ಅಗರ್ವಾಲ್ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಕರಿಯರ್‌ನ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: INDvBAN: 2ನೇ ದ್ವಿಶತಕ ಸಿಡಿಸಿ ದಾಖಲೆ ಬರೆದ ಕನ್ನಡಿಗ ಮಯಾಂಕ್!
undefined
ಟೆಸ್ಟ್ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್ ಪೈಕಿ ಮಯಾಂಕ್ ಅಗರ್ವಾಲ್ 10ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. 700 ರೇಟಿಂಗ್ ಪಾಯಿಂಟ್ ಪಡೆದಿರುವ ಅಗರ್ವಾಲ್, ಬಾಂಗ್ಲಾ ಸರಣಿಯಲ್ಲಿ 243 ರನ್ ಸಿಡಿಸಿದ್ದರು. ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ವಿರಾಟ್ ಕೊಹ್ಲಿ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್ ಪೈಕಿ 2ನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ಪಿಂಕ್ ಬಾಲ್ ಟೆಸ್ಟ್; ಶತಕ ಸಿಡಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ!.
ಚೇತೇಶ್ವರ್ ಪೂಜಾರಾ 4 ಮತ್ತು ಅಜಿಂಕ್ಯ ರಹಾನೆ 5ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಟಾಪ್ 10 ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಮೂವರು ಬ್ಯಾಟ್ಸಮನ್ ಸ್ಥಾನ ಪಡೆದಿದ್ದಾರೆ. ಟಾಪ್ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಇಬ್ಬರು ಸ್ಥಾನ ಪಡೆದಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ 5ನೇ ಸ್ಥಾನದಲ್ಲಿದ್ದರೆ, ಆರ್ ಅಶ್ವಿನ್ 9ನೇ ಸ್ಥಾನ ಅಲಂಕರಿಸಿದ್ದಾರೆ.
ಟೆಸ್ಟ್ ಆಲ್ರೌಂಡರ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ರವೀಂದ್ರ ಜಡೇಜಾ 2ನೇ ಸ್ಥಾನದಲ್ಲಿದ್ದರೆ, ಆರ್ ಅಶ್ವಿನ್ 5ನೇ ಸ್ಥಾನ ಪಡೆದಿದ್ದಾರೆ. ಮೊದಲ ಸ್ಥಾನದಲ್ಲಿ ವಿಂಡೀಸ್ ಆಲ್ರೌಂಡರ್, ನಾಯಕ ಜೇಸನ್ ಹೋಲ್ಡರ್ ವಿರಾಜಮಾನರಾಗಿದ್ದಾರೆ.