ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ವಿರಾಟ್‌ ಕೊಹ್ಲಿಗೆ ಬಡ್ತಿ!

By Kannadaprabha NewsFirst Published Dec 13, 2019, 10:19 AM IST
Highlights

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ನೂತನ ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟಗೊಂಡಿದೆ. ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ ನಾಯಕ ವಿರಾಟ್ ಕೊಹ್ಲಿ ಟಿ20 ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. 

ದುಬೈ(ಡಿ.13): ವೆಸ್ಟ್‌ಇಂಡೀಸ್‌ ವಿರುದ್ಧ ಬುಧವಾರ ವಾಂಖೇಡೆ ಕ್ರೀಡಾಂಗಣದಲ್ಲಿ ಸ್ಫೋಟಕ ಆಟವಾಡಿದ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ, ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಪರಿಣಾಮ, ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ರಾರ‍ಯಂಕಿಂಗ್‌ ಪಟ್ಟಿಯಲ್ಲಿ ಕೊಹ್ಲಿ 5 ಸ್ಥಾನಗಳ ಏರಿಕೆ ಕಂಡಿದ್ದು 10ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ವೆಸ್ಟ್ ಇಂಡೀಸ್ ವಿರುದ್ದ ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಹಲವು ದಾಖಲೆ ನಿರ್ಮಾಣ!

ಸದ್ಯ ಎಲ್ಲಾ ಮೂರು ಮಾದರಿಗಳಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದಿರುವ ವಿಶ್ವದ ಏಕೈಕ ಬ್ಯಾಟ್ಸ್‌ಮನ್‌ ಎನ್ನುವ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ವಿರಾಟ್‌ 15ನೇ ಸ್ಥಾನದಲ್ಲಿದ್ದರು. ಸರಣಿಯಲ್ಲಿ 2 ಅರ್ಧಶತಕಗಳೊಂದಿಗೆ 183 ರನ್‌ ಗಳಿಸಿದ ಕೊಹ್ಲಿ, ರಾರ‍ಯಂಕಿಂಗ್‌ ಪಟ್ಟಿಯಲ್ಲಿ ಏರಿಕೆ ಕಂಡರು. ಏಕದಿನ ಹಾಗೂ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ರಾರ‍ಯಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿರಾಟ್‌, ಸದ್ಯದಲ್ಲೇ ಟಿ20ಯಲ್ಲೂ ನಂ.1 ಬ್ಯಾಟ್ಸ್‌ಮನ್‌ ಆಗುವ ಗುರಿ ಹೊಂದಿದ್ದಾರೆ.

ಇದನ್ನೂ ಓದಿ: ಕೊಹ್ಲಿ ರಿವೇಂಜ್‌ಗೆ ಥಂಡಾ ಹೊಡೆದ ವಿಂಡೀಸ್ ಬೌಲರ್..!

ಇದೇ ವೇಳೆ ಸರಣಿಯಲ್ಲಿ 164 ರನ್‌ ಕಲೆಹಾಕಿದ ಕೆ.ಎಲ್‌.ರಾಹುಲ್‌ 3 ಸ್ಥಾನಗಳ ಏರಿಕೆ ಕಂಡಿದ್ದು, 6ನೇ ಸ್ಥಾನದಲ್ಲಿದ್ದಾರೆ. ಭಾರತ ಪರ ಅತ್ಯುತ್ತಮ ಸ್ಥಾನದಲ್ಲಿರುವ ಬ್ಯಾಟ್ಸ್‌ಮನ್‌ ಎನ್ನುವ ಖ್ಯಾತಿಗೆ ರಾಹುಲ್‌ರದ್ದಾಗಿದೆ. ಇನ್ನು ರೋಹಿತ್‌ ಶರ್ಮಾ 1 ಸ್ಥಾನ ಕುಸಿತ ಕಾಣುವ ಮೂಲಕ 9ನೇ ಸ್ಥಾನದಲ್ಲಿದ್ದಾರೆ. ಟಿ20 ಬೌಲರ್‌ಗಳ ರಾರ‍ಯಂಕಿಂಗ್‌ ಪಟ್ಟಿಯಲ್ಲಿ ಭಾರತರ ಯಾವೊಬ್ಬ ಬೌಲರ್‌ ಸಹ ಅಗ್ರ 10ರಲ್ಲಿ ಸ್ಥಾನ ಪಡೆದಿಲ್ಲ.
 

click me!