
ದುಬೈ(ಜು.06): ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಟೆಸ್ಟ್ ಸರಣಿಯಲ್ಲಿ ಬೌಲರ್‌ಗಳು ಕ್ರೀಸ್‌ನಿಂದ ಹೊರಗೆ ಕಾಲಿಟ್ಟಾಗ ನೋಬಾಲ್ ಘೋಷಣೆಯನ್ನು ಮೈದಾನದಲ್ಲಿರುವ ಅಂಪೈರ್ ಬದಲಿಗೆ, 3ನೇ ಅಂಪೈರ್ ಘೋಷಿಸಲಿದ್ದಾರೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ತಿಳಿಸಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ಈ ಪ್ರಯೋಗ ನಡೆಸಲಾಗುತ್ತಿದೆ. ‘ಈ ಸರಣಿಯಲ್ಲಿ ತಂತ್ರಜ್ಞಾನದ ಬಳಕೆ ಎಷ್ಟು ಪರಿಣಾಮಕಾರಿಯಾಗಲಿದೆ ಎನ್ನುವುದನ್ನು ಗಮನಿಸಿ, ಭವಿಷ್ಯದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ನಿಯಮವನ್ನು ಅಳವಡಿಸುವ ಬಗ್ಗೆ ನಿರ್ಧರಿಸಲಾಗುತ್ತದೆ’ ಎಂದು ಐಸಿಸಿ ತಿಳಿಸಿದೆ.
ಕಳೆದ ವರ್ಷ ಭಾರತ-ವೆಸ್ಟ್ ಇಂಡೀಸ್ ನಡುವಿನ ಸೀಮಿತ ಓವರ್‌ಗಳ ಸರಣಿಯಲ್ಲಿ ಈ ನಿಯಮವನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇನ್ನು ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಕೂಡಾ ಮೂರನೇ ಅಂಪೈರ್‌ನಿಂದ ನೋಬಾಲ್ ತೀರ್ಮಾನ ನೀಡಲಾಗುತಿತ್ತು. ಇನ್ನು ಐಸಿಸಿ ವಿಶ್ವಲಕಪ್ ಸೂಪರ್ ಲೀಗ್ ಭಾಗವಾಗಿ ಇತ್ತೀಚೆಗಷ್ಟೇ ಮುಕ್ತಾಯವಾದ ಇಂಗ್ಲೆಂಡ್-ಐರ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ನೋ ಬಾಲ್ ಬಗ್ಗೆ ಎಚ್ಚರಿಕೆಯ ನಿರ್ಧಾರಕ್ಕೆ ಬರಲಾಗಿತ್ತು.
ಮೊದಲ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಪಾಕ್‌ಗೆ ಉತ್ತಮ ಆರಂಭ
ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಮೂರು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 05ರಿಂದ ಮ್ಯಾಂಚೆಸ್ಟರ್‌ನಲ್ಲಿ ಆರಂಭವಾಗಿದೆ. ಉಳಿದೆರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ಆಗಸ್ಟ್ 13 ಹಾಗೂ 21ರಿಂದ ಸೌಥಾಂಪ್ಟನ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.