
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಎನಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕಾದಾಟಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.
ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಫಖರ್ ಜಮಾನ್ ಬದಲಿಗೆ ಇಮಾಮ್ ಉಲ್ ಹಕ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ.
ಟೀಂ ಇಂಡಿಯಾ ಈ ಮೂರು ದಿಗ್ಗಜ ಕ್ರಿಕೆಟಿಗರಿಗೆ ಪಾಕ್ ಎದುರು ಇದೇ ಕೊನೆಯ ಅಂತಾರಾಷ್ಟ್ರೀಯ ಮ್ಯಾಚ್?
ಈಗಾಗಲೇ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಸೋತು ಮುಖಭಂಗ ಅನುಭವಿಸಿರುವ ಪಾಕಿಸ್ತಾನ ತಂಡಕ್ಕೆ ಭಾರತ ಎದುರು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ. ಭಾರತ ಎದುರು ಪಾಕ್ ಸೋತರೇ ಬಹುತೇಕ ಸೆಮೀಸ್ ರೇಸ್‌ನಿಂದ ಹೊರಬೀಳಲಿದೆ. ಇನ್ನೊಂದೆಡೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು 6 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದ್ದು, ಪಾಕ್ ಎದುರು ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ.
ದುಬೈ ಭಾರತದ ಅದೃಷ್ಟ ತಾಣ!
ದುಬೈ ಅಂ.ರಾ. ಕ್ರೀಡಾಂಗಣದಲ್ಲಿ ಭಾರತ ಉತ್ತಮ ದಾಖಲೆ ಹೊಂದಿದೆ. ಇಲ್ಲಿ ಆಡಿರುವ 7 ಪಂದ್ಯಗಳಲ್ಲಿ 6ರಲ್ಲಿ ಗೆದ್ದಿದೆ. ಮತ್ತೊಂದೆಡೆ ಪಾಕಿಸ್ತಾನ ಇಲ್ಲಿ ಆಡಿರುವ 22ರಲ್ಲಿ 13ರಲ್ಲಿ ಸೋತಿದೆ.
ಇಂಡೋ-ಪಾಕ್ ಪಂದ್ಯ ರದ್ದಾದ್ರೆ ಯಾರಿಗೆ ಲಾಭ? ಯಾರಿಗೆ ನಷ್ಟ? ಹವಾಮಾನ ವರದಿ ಏನು?
ಉಭಯ ತಂಡಗಳ ಆಟಗಾರರ ಪಟ್ಟಿ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ಪಾಕಿಸ್ತಾನ: ಇಮಾಮ್ ಉಲ್ ಹಕ್, ಬಾಬರ್ ಅಜಂ, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಷ್‌ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹಮದ್.
ಪಂದ್ಯ ಆರಂಭ: 2.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.