ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಫೈನಲ್ ಪ್ರವೇಶಿಸಿದೆ. ಆಸ್ಟ್ರೇಲಿಯಾ ವಿರುದ್ದಧ ಸೆಮಿಫೈನಲ್ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ 4 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ಸೋಲಿಸಿದೆ. ಈ ಮೂಲಕ ಭರ್ಜರಿಯಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 2ನೇ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡ ಮಾರ್ಚ್ 5 ರಂದು ಹೋರಾಟ ನಡಸಲಿದೆ. ಇಲ್ಲಿ ಗೆದ್ದ ತಂಡ ಟೀಂ ಇಂಡಿಯಾ ವಿರುದ್ದ ಫೈನಲ್ ಪಂದ್ಯ ಆಡಲಿದೆ. ಭಾರತ-ಆಸ್ಟ್ರೇಲಿಯಾ ಪಂದ್ಯದ ಸಂಪೂರ್ಣ ಅಪ್‌ಡೇಟ್ ಇಲ್ಲಿದೆ.

10:09 PM (IST) Mar 04
ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರಕ್ಕೆ ಆಸ್ಟ್ರೇಲಿಯಾ ಸೋಲು ಕಂಡಿದೆ. ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ.
09:06 PM (IST) Mar 04
ಟೀಂ ಇಂಡಿಯಾ ಮಹತ್ವದ ಘಟ್ಟದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿದೆ. ವಿರಾಟ್ ಕೊಗ್ಲಿ 84 ರನ್ ಸಿಡಿಸಿ ಔಟಾಗಿದ್ದಾರೆ
08:43 PM (IST) Mar 04
ಟೀಂ ಇಂಡಿಯಾ ರನ್ ಚೇಸಿಂಗ್ ವೇಳೆ ನಾಲ್ಕನೇ ವಿಕೆಟ್ ಕಳೆದುಕೊಂಡಿದೆ. ಆಕ್ಸರ್ ಪಟೇಲ್ 27 ರನ್ ಸಿಡಿಸಿ ಔಟಾಗಿದ್ದಾರೆ.
08:05 PM (IST) Mar 04
ಆಸ್ಟ್ರೇಲಿಯಾ ವಿರುದ್ದ ಟೀಂ ಇಂಡಿಯಾ ಮೂರನೇ ವಿಕೆಟ್ ಕಳೆದುಕೊಂಡಿದೆ. ಶ್ರೇಯಸ್ ಅಯ್ಯರ್ 45 ರನ್ ಸಿಡಿಸಿ ಔಟಾಗಿದ್ದಾರೆ. ಸದ್ಯ ಭಾರತ 3 ವಿಕೆಟ್ ನಷ್ಟಕ್ಕೆ 134 ರನ್ ಸಿಡಿಸಿದೆ.
08:02 PM (IST) Mar 04
ಆಸ್ಟ್ರೇಲಿಯಾ ವಿರುದ್ದದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದ್ದಾರೆ. ಇದು ವಿರಾಟ್ ಕೊಹ್ಲಿಯ 74ನೇ ಏಕದಿನ ಅರ್ಧಶತಕವಾಗಿದೆ.
07:44 PM (IST) Mar 04
ರನ್ ಚೇಸಿಂಗ್ ವೇಳೆ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲು ನಿರ್ಮಿಸಿದ್ದಾರೆ. ಚೇಸಿಂಗ್ ವೇಳೆ ಏಕದಿನದಲ್ಲಿ ಕೊಹ್ಲಿ 800 ರನ್ ಪೂರೈಸಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಸಚಿನ್ 8720 ರನ್ ಸಿಡಿಸಿದ್ದಾರೆ.
07:04 PM (IST) Mar 04
ರೋಹಿತ್ ಶರ್ಮಾ ವಿಕೆಟ್ ಪತನಗೊಂಡಿದೆ. 28 ರನ್ ಸಿಡಿಸಿದ ರೋಹಿತ್ ಶರ್ಮಾ ವಿಕೆಟ್ ಕೈಚೆಲ್ಲಿದ್ದಾರೆ. 43 ರನ್‌ಗೆ 2ನೇ ವಿಕೆಟ್ ಕಳೆದಕೊಂಡಿದೆ.
07:00 PM (IST) Mar 04
ಟೀಂ ಇಂಡಿಯಾದ ಮೊದಲ ವಿಕೆಟ್ ಪತನಗೊಂಡಿದೆ. ಶುಬಮನ್ ಗಿಲ್ 8 ರನ್ ಸಿಡಿಸಿ ಔಟಾಗಿದ್ದಾರೆ. 30 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
06:46 PM (IST) Mar 04
ಆಸ್ಟ್ರೇಲಿಯಾ ನೀಡಿದ 265 ರನ್ ಟಾರ್ಗೆಟ್ ಚೇಸ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭದಲ್ಲಿ 2 ಆತಂಕ ಎದುರಿಸಿದೆ. ರೋಹಿತ್ ಶರ್ಮಾ ಅವರ 2 ಕ್ಯಾಚ್ ಡ್ರಾಪ್ ಆಗಿದೆ. ಇದು ಅಭಿಮಾನಿಗಳು ನಿಟ್ಟುಸಿರು ಬಿಡುವಂತೆ ಮಾಡಿದೆ.
06:05 PM (IST) Mar 04
ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು 264 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೇರಲು ಭಾರತ ತಂಡವು 265 ರನ್‌ಗಳ ಸವಾಲಿನ ಗುರಿ ಮುಟ್ಟಬೇಕಿದೆ. ಶಮಿ 48 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದರು.
05:13 PM (IST) Mar 04
ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದ್ದ ಆಸ್ಟ್ರೇಲಿಯಾ ತಂಡಕ್ಕೆ ಶಮಿ ಹಾಗೂ ಅಕ್ಷರ್ ಪಟೇಲ್ ಶಾಕ್ ನೀಡಿದ್ದಾರೆ. ಸ್ಮಿತ್ 73 ರನ್ ಗಳಿಸಿ ಶಮಿಗೆ ವಿಕೆಟ್ ಒಪ್ಪಿಸಿದರೆ, ಮ್ಯಾಕ್ಸ್‌ವೆಲ್ 7 ರನ್ ಗಳಿಸಿ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿದ್ದಾರೆ.
04:17 PM (IST) Mar 04
ಟ್ರ್ಯಾವಿಸ್ ಹೆಡ್ ವಿಕೆಟ್ ಪತನದ ಬಳಿಕ ಮೂರನೇ ವಿಕೆಟ್‌ಗೆ ಜತೆಯಾದ ಮಾರ್ನಸ್ ಲಬುಶೇನ್ ಹಾಗೂ ಸ್ಟೀವ್ ಸ್ಮಿತ್ 56 ರನ್‌ಗಳ ಜತೆಯಾಟವಾಡಿದರು. 29 ರನ್ ಗಳಿಸಿದ್ದ ಲಬುಶೇನ್ ಅವರನ್ನು ಎಲ್‌ಬಿ ಬಲೆಗೆ ಕೆಡಹುವಲ್ಲಿ ರವೀಂದ್ರ ಜಡೇಜಾ ಯಶಸ್ವಿಯಾಗಿದ್ದಾರೆ. 23 ಓವರ್ ಅಂತ್ಯಕ್ಕೆ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು 113 ರನ್ ಗಳಿಸಿದೆ
03:47 PM (IST) Mar 04
ಐಸಿಸಿ ನಾಕೌಟ್ ಟೂರ್ನಿಯಲ್ಲಿ ಭಾರತದ ಪಾಲಿಗೆ ತಲೆನೋವಾಗಿದ್ದ ಆರಂಭಿಕ ಬ್ಯಾಟರ್ ಟ್ರ್ಯಾವಿಸ್ ಹೆಡ್ ಅವರನ್ನು ಬಲಿ ಪಡೆಯುವಲ್ಲಿ ವರುಣ್ ಚಕ್ರವರ್ತಿ ಯಶಸ್ವಿಯಾಗಿದ್ದಾರೆ.
02:51 PM (IST) Mar 04
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಆಸ್ಟ್ರೇಲಿಯಾ ತಂಡಕ್ಕೆ ವೇಗಿ ಮೊಹಮ್ಮದ್ ಶಮಿ ಆರಂಭದಲ್ಲೇ ಶಾಕ್ ನೀಡಿದ್ದಾರೆ. ಆಸ್ಟ್ರೇಲಿಯಾ ಪಾದಾರ್ಪಣೆ ಮಾಡಿದ ಕೋಪರ್ ಕಾನ್ನೋಲೆ ಶೂನ್ಯ ಸುತ್ತಿ ಶಮಿಗೆ ವಿಕೆಟ್ ಒಪ್ಪಿಸಿದ್ದಾರೆ. 3 ಓವರ್ ಅಂತ್ಯಕ್ಕೆ ಆಸ್ಟ್ರೇಲಿಯಾ 4 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿದೆ.
02:20 PM (IST) Mar 04
ಭಾರತ ಕ್ರಿಕೆಟ್ ತಂಡವು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಬರೋಬ್ಬರಿ 14ನೇ ಬಾರಿ ಸತತವಾಗಿ ಟಾಸ್ ಸೋಲುವ ಮೂಲಕ ವಿಚಿತ್ರ ದಾಖಲೆಗೆ ಪಾತ್ರವಾಗಿದೆ. ಇದರಲ್ಲಿ ರೋಹಿತ್ ಶರ್ಮಾ 11 ಬಾರಿ ಟಾಸ್ ಸೋತಿದ್ದರೇ, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ ಎಲ್ ರಾಹುಲ್ 3 ಬಾರಿ ಟಾಸ್ ಸೋತಿದ್ದಾರೆ.
02:16 PM (IST) Mar 04
ಭಾರತ
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್
ಆಸ್ಟ್ರೇಲಿಯಾ:
ಕೂಪರ್ ಕಾನ್ಲೆ, ಟ್ರ್ಯಾವಿಸ್ ಹೆಡ್, ಸ್ಟೀವ್ ಸ್ಮಿತ್(ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಶ್(ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ಡೌರಿಸ್, ನೇಥನ್ ಎಲ್ಲೀಸ್, ಆಡಂ ಜಂಪಾ, ತನ್ವೀರ್ ಸಂಘಾ
02:14 PM (IST) Mar 04
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡವು ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.
01:27 PM (IST) Mar 04
ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದ ಟಾಸ್ ಇಂದು ಮಧ್ಯಾಹ್ನ 2 ಗಂಟೆಗೆ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆರಂಭವಾಗಲಿದೆ. ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟಾಸ್ ಕೂಡಾ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ.
01:24 PM (IST) Mar 04
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಕದನ ನಡೆಯಲಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್‌ಗಾಗಿ ಕಾದಾಟ ನಡೆಸಲಿವೆ
ಇದನ್ನೂ ಓದಿ: ಆಸೀಸ್ ಹಣಿಯಲು ಭಾರತ ಸ್ಪಿನ್ ಮಂತ್ರ; ಸೇಡಿನ ಕದನಕ್ಕೆ ದುಬೈ ಸಜ್ಜು!