ಭಾರತ vs ಆಸೀಸ್‌ ಸೆಮಿ ಫೈಟ್‌ಗೆ ಕ್ಷಣಗಣನೆ; ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಭಾರತ?

Published : Mar 03, 2025, 04:32 PM ISTUpdated : Mar 03, 2025, 04:33 PM IST
ಭಾರತ vs ಆಸೀಸ್‌ ಸೆಮಿ ಫೈಟ್‌ಗೆ ಕ್ಷಣಗಣನೆ; ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಭಾರತ?

ಸಾರಾಂಶ

ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ವೇಳಾಪಟ್ಟಿ ಪ್ರಕಟವಾಗಿದೆ. ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ದುಬೈನಲ್ಲಿ ಮಾರ್ಚ್ 4 ರಂದು ಸೆಣಸಲಿವೆ. ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಲಾಹೋರ್‌ನಲ್ಲಿ ಮಾರ್ಚ್ 5 ರಂದು ಮುಖಾಮುಖಿಯಾಗಲಿವೆ. ಭಾರತ ಫೈನಲ್ ತಲುಪಿದರೆ ದುಬೈ, ಇಲ್ಲದಿದ್ದರೆ ಲಾಹೋರ್ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಫೈನಲ್ ಮಾರ್ಚ್ 9 ರಂದು ನಡೆಯಲಿದೆ.

ದುಬೈ: ಈ ಸಲ ಚಾಂಪಿಯನ್ಸ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯಗಳ ವೇಳಾಪಟ್ಟಿ ಅಂತಿಮಗೊಂಡಿದೆ. ಮಂಗಳವಾರ ದುಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. ಮತ್ತೊಂದು ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್‌ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೆ ಪಾಕಿಸ್ತಾನದ ಲಾಹೋರ್‌ ಆತಿಥ್ಯ ವಹಿಸಲಿದೆ.

2 ಬಾರಿ ಚಾಂಪಿಯನ್‌ ಭಾರತ ತಂಡ ‘ಎ’ ಗುಂಪಿನಲ್ಲಿ ಆಡಿರುವ ಮೂರೂ ಪಂದ್ಯಗಳಲ್ಲಿ ಗೆದ್ದು, 6 ಅಂಕಗಳೊಂದಿಗೆ ಅಗ್ರಸ್ಥಾನಿಯಾಯಿತು. ಹೀಗಾಗಿ ‘ಬಿ’ ಗುಂಪಿನಲ್ಲಿ 2ನೇ ಸ್ಥಾನಿಯಾಗಿದ್ದ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಆಡಲಿದೆ. ಆಸೀಸ್‌ ಈ ಸಲ ಮೂರರಲ್ಲಿ ಕೇವಲ 1 ಪಂದ್ಯ ಗೆದ್ದಿದ್ದು, 2 ಪಂದ್ಯಗಳು ಮಳೆಯಿಂದ ರದ್ದಾಗಿದೆ. ತಂಡ ಒಟ್ಟು 4 ಅಂಕ ಹೊಂದಿದೆ.

ಇದನ್ನೂ ಓದಿ: ಏಕದಿನ ಕ್ರಿಕೆಟ್‌ನಲ್ಲಿ ಟಾಸ್ ಸೋಲುವುದರಲ್ಲೂ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ!

ಭಾರತ ವಿರುದ್ಧ ಕೊನೆ ಪಂದ್ಯದಲ್ಲಿ ಸೋಲುವ ಮೂಲಕ ‘ಎ’ ಗುಂಪಿನಲ್ಲಿ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟ ನ್ಯೂಜಿಲೆಂಡ್, ‘ಬಿ’ ಗುಂಪಿನ ಅಗ್ರಸ್ಥಾನಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಮಿಫೈನಲ್‌ ಆಡಲಿದೆ. ನ್ಯೂಜಿಲೆಂಡ್‌ 3 ಪಂದ್ಯಗಳ ಪೈಕಿ 2ರಲ್ಲಿ ಗೆದ್ದು, 4 ಅಂಕ ಹೊಂದಿದೆ. ದ.ಆಫ್ರಿಕಾ 3ರಲ್ಲಿ 2 ಪಂದ್ಯ ಗೆದ್ದಿದ್ದು, ಮತ್ತೊಂದು ಪಂದ್ಯ ಮಳೆಗೆ ರದ್ದಾಗಿತ್ತು.

ಟೂರ್ನಿಯ ಫೈನಲ್‌ ಪಂದ್ಯ ಮಾ.9ಕ್ಕೆ ದುಬೈ ಅಥವಾ ಲಾಹೋರ್‌ನಲ್ಲಿ ನಡೆಯಲಿದೆ. ಭಾರತ ಫೈನಲ್‌ಗೇರಿದರೆ ಪಂದ್ಯಕ್ಕೆ ದುಬೈ ಆತಿಥ್ಯ ವಹಿಸಲಿದೆ. ಭಾರತ ಸೆಮಿಫೈನಲ್‌ನಲ್ಲೇ ಹೊರಬಿದ್ದರೆ ಫೈನಲ್‌ ಲಾಹೋರ್‌ನಲ್ಲಿ ನಡೆಯಲಿದೆ.

ಕೊನೆಗೂ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ಮಿನಿ ವಿಶ್ವಕಪ್ ಎಂದೇ ಕರೆಸಿಕೊಳ್ಳುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಕದನವು ಇದೇ ಮಾರ್ಚ್ 4ರಂದು ಮಧ್ಯಾಹ್ನ 2.30ರಿಂದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆರಂಭವಾಗಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಏಕದಿನ ಮಾದರಿಯಲ್ಲಿ 2023ರ ನವೆಂಬರ್ 19ರಂದು ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರು  ವಿಕೆಟ್‌ ಅಂತರದ ಅನಾಯಾಸದ ಗೆಲುವು ದಾಖಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ಏಕದಿನ ಮಾದರಿಯಲ್ಲಿ ಏಕದಿನ ವಿಶ್ವಕಪ್ ಬಳಿಕ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಸೆಮೀಸ್‌ನಲ್ಲೇ ಕಾಂಗರೂ ಪಡೆಯನ್ನು ಮಣಿಸಲು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತುದಿಗಾಲಿನಲ್ಲಿ ನಿಂತಿದೆ. 

ಇದನ್ನೂ ಓದಿ: 'ನೀವು ನಿಜವಾಗಿಯೂ ಬಲಿಷ್ಠ ತಂಡವಾಗಿದ್ದರೇ?' ಭಾರತಕ್ಕೆ ಓಪನ್ ಚಾಲೆಂಜ್ ಹಾಕಿದ ಪಾಕ್ ದಿಗ್ಗಜ ಕ್ರಿಕೆಟಿಗ!

ಸೆಮಿಫೈನಲ್‌ ವೇಳಾಪಟ್ಟಿ

ಪಂದ್ಯ ದಿನಾಂಕ ಸ್ಥಳ

ಭಾರತ-ಆಸ್ಟ್ರೇಲಿಯಾ ಮಾ.4 ದುಬೈ

ನ್ಯೂಜಿಲೆಂಡ್‌-ದ.ಆಫ್ರಿಕಾ ಮಾ.5 ಲಾಹೋರ್‌

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ